May 13, 2024

Bhavana Tv

Its Your Channel

ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಸಂವಿಧಾನ ಮೂಲಭೂತ ಹಕ್ಕುಗಳ ದಿನ ಕುರಿತು ಕಾನೂನು ಅರಿವು ನೆರೆವು ಕಾರ್ಯಕ್ರಮವನ್ನು ಆಯೋಜನೆ.

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಸಂವಿಧಾನ ಮೂಲಭೂತ ಹಕ್ಕುಗಳ ದಿನ ಕುರಿತು ಕಾನೂನು ಅರಿವು ನೆರೆವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೆ.ಆರ್.ಪೇಟೆ ಪಟ್ಟಣದ ಸಿವಿಲ್ ನ್ಯಾಯಾಲಯದ ಕಿರಿಯಶ್ರೇಣಿ ನ್ಯಾಯಾಧೀಶರಾದ ಫಾರೂಕ್ ಝಾರೆ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು:
ಸಂವಿಧಾನದ ಆಶಯಗಳ ಫಲವು ಬಡವ ಬಲ್ಲಿದ ಎಂಬ ಬೇಧಭಾವವಿಲ್ಲದೇ ಸಮಾಜದಲ್ಲಿ ವಾಸಿಸುವ ಎಲ್ಲರಿಗೂ ಸಮಾನವಾಗಿ ದೊರೆಯಬೇಕು.. ಸಮಾಜದಲ್ಲಿ ತುಳಿತಕ್ಕೊಳಗಾಗಿರುವ ಬಡಜನರು ಉಚಿತವಾಗಿ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ನ್ಯಾಯವನ್ನು ಪಡೆಯಲು ತಾಲೂಕು ಕಾನೂನು ಸೇವಾ ಸಮಿತಿಯು ವಕೀಲರನ್ನು ನೇಮಿಸಿಕೊಡುವುದಲ್ಲದೇ ಕಾನೂನಿನ ಬಗ್ಗೆ ಜಾಗೃತಿಯನ್ನು ಮೂಡಿಸಿ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಟ ನಡೆಸಲು ಶಕ್ತಿತುಂಬಲಾಗುವುದು. ಆದ್ದರಿಂದ ನ್ಯಾಯಾಲಯವೇ ಹಳ್ಳಿಗಳಿಗೆ ತೆರಳಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಜೊತೆಗೆ ಉಚಿತವಾಗಿ ದೊರೆಯುವ ಕಾನೂನು ನೆರವಿನ ಬಗ್ಗೆಯೂ ತಿಳುವಳಿಕೆ ಮೂಡಿಸಲಾಗುವುದು ಎಂದು ನ್ಯಾಯಾಧೀಶರಾದ ಫಾರೂಕ್ ಝಾರೆ ತಿಳಿಸಿದರು …

ವಕೀಲರ ಸಂಘದ ಅಧ್ಯಕ್ಷರಾದ ಎಂ.ಆರ್.ಪ್ರಸನ್ನಕುಮಾರ್ ಮಾತನಾಡಿ ಹಕ್ಕುಗಳು ಮತ್ತು ಕರ್ತವ್ಯವು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ನಮ್ಮ ನಮ್ಮ ಪಾಲಿನ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುವ ಮೂಲಕ ಸಂವಿಧಾನದ ಆಶಯಗಳ ಈಡೇರಿಕೆಗೆ ಮುಂದಾಗಬೇಕು..ಮಾನವರಾದ ನಾವು ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ನಡುವೆಯೇ ಜೀವನವನ್ನು ನಡೆಸುವುದರಿಂದ ಕಾನೂನನ್ನು ಗೌರವಿಸಿ ಜೀವನ ನಡೆಸಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸತ್ಯ ಅರಿಯಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಸತಾಯಿಸಿ ಗೋಳು ಹೊಯ್ದುಕೊಳ್ಳದೇ ನಿಯಮಿತ ಅವಧಿಯೊಳಗೆ ಜನರ ಕಾನೂನುಬದ್ಧವಾದ ಕೆಲಸವನ್ನು ಮಾಡಿಕೊಡಬೇಕು ಎಂದು ಕಿವಿಮಾತು ಹೇಳಿದರು..

ತಹಶೀಲ್ದಾರ್ ಎಂ. ಶಿವಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ಸಾಕ್ಷರರಾಗಿ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಂಡು ಅಭಿವೃದ್ಧಿಯ ಪಥದತ್ತ ಸಾಗಬೇಕು..ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಾಧನೆ ಮಾಡುವಂತೆ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು. ಕಾನೂನಿನ ಅರಿವನ್ನು ಬೆಳೆಸಿಕೊಂಡು ವಂಚಕರು ಹಾಗೂ ಮೋಸಗಾರರಿಂದ ತೊಂದರೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಮೂರ್ತಿ ಕಿವಿಮಾತು ಹೇಳಿದರು…

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಬ್ ಇನ್ಸ್ ಪೆಕ್ಟರ್ ತೊಳಜನಾಯಕ್, ಸರ್ಕಾರಿ ಅಭಿಯೋಜಕರಾದ ರಾಜೇಶ್, ಚೇತನ್, ವಕೀಲರ ಸಂಘದ ಕಾರ್ಯದರ್ಶಿ ಡಿ.ಆರ್.ಮೋಹನ್, ವಕೀಲರಾದ ಯೋಗೇಶ್, ಮಾದಾಪುರ ರಾಜೇಶ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ರಾಮಚಂದ್ರಪ್ಪ, ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ತಾಲೂಕು ಪಂಚಾಯಿತಿ ಸದಸ್ಯ ನಿಂಗೇಗೌಡ, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: