April 27, 2024

Bhavana Tv

Its Your Channel

ಯಶಸ್ವಿನಿ ಸಮುದಾಯ ಭವನದಲ್ಲಿ ಕೆ.ಆರ್.ಪೇಟೆ ತಾಲೂಕು ಭಾರತೀಯ ಜನತಾ ಪಕ್ಷದ ಎರಡು ದಿನಗಳ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮ ನಡೆಯಿತು.

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ಎರಡು ದಿನಗಳ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮ ನಡೆಯಿತು. ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಮಾತನಾಡಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಾಗಿದ್ದಾರೆ. ಕಾರ್ಯಕರ್ಯರಲ್ಲಿ ಭಾರತೀಯ ಜನತಾ ಪಕ್ಷವು ಬೆಳೆದು ಬಂದ ದಾರಿ, ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಅರಿವಿನ ಜಾಗೃತಿಯನ್ನು ಮೂಡಿಸಲು ಪ್ರಶಿಕ್ಷಣ ವರ್ಗವು ನೆರವಾಗಲಿದೆ ಎಂದು ವಿವರಿಸಿದ ಶ್ರೀನಿವಾಸ್ ಪಕ್ಷದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಸಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡಿ ಮುಂಬರುವ ಗ್ರಾಮ ಪಂಚಾಯುತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಎದುರಿಸಲು ನೆರವಾಗಲಿದೆ. ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಬೆಳಗಿದ ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋಧಿ ಅವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಮುನ್ನಡೆಯುತ್ತಿದೆ. ದೇಶಭಕ್ತಿ, ಏಕತೆ ಹಾಗೂ ಸಾರ್ವಭೌಮತೆಗೆ ಬಿಜೆಪಿ ಕಟಿಬದ್ಧವಾಗಿದ್ದು ಹಿಂಧೂ ಧರ್ಮದ ಉಳಿವಿಗೆ ಹಾಗೂ ಯುವಜನರಲ್ಲಿ ದೇಶಭಕ್ತಿಯನ್ನು ಮೂಡಿಸಲು ಪ್ರಶಿಕ್ಷಣ ವರ್ಗ ನೆರವಾಗಲಿದೆ ಎಂದು ಶ್ರೀನಿವಾಸ್ ವಿವರಿಸಿದರು .

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಮಾತನಾಡಿ ಎರಡು ದಿನಗಳ ಕಾಲ ನಡೆಯಲಿರುವ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮವು ನೆರವಾಗಲಿದ್ದು ಪಕ್ಷದ ಕಾರ್ಯಕರ್ತರು ಪಕ್ಷನಿಷ್ಠೆಯನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು. ಪಕ್ಷದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿ ಕೃಷ್ಣೇಗೌಡ ಭಾರತ ದೇಶದ ಇತಿಹಾಸ ಹಾಗೂ ಬಿಜೆಪಿ ಪಕ್ಷವು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಬೆಳೆದುಬಂದ ಹಾದಿಯನ್ನು ವಿವರಿಸಿ ಬಿಜೆಪಿ ಕಾರ್ಯಕರ್ತರು ಶಿಸ್ತು, ಬದ್ಧತೆ ಹಾಗೂ ಸೇವಾಮನೋಭಾವನೆಯನ್ನು ಬೆಳೆಸಿಕೊಂಡು ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು…

ಮಂಡಲ ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಸಂಪನ್ಮೂಲ ವ್ಯಕ್ತಿಗಳಾದ ಸದಾನಂದ, ಸತೀಶ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾ ವಕ್ತಾರ ಡಾ.ಕೆ.ಕಾಳೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ೧೫೦ಕ್ಕೂ ಹೆಚ್ಚಿನ ಅಪೇಕ್ಷಿತರು ಹಾಗೂ ಕಾರ್ಯಕರ್ತರು ಪ್ರಶಿಕ್ಷಣ ವರ್ಗ ಸಭೆಯಲ್ಲಿ ಭಾಗವಹಿಸಿದ್ದರು..

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: