April 28, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ವರ್ಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಚಿವ ಡಾ.ನಾರಾಯಣಗೌಡ

ಮಂಡ್ಯ: ಭಾರತೀಯ ಜನತಾ ಪಕ್ಷವು ದೇಶಭಕ್ತರು ಹಾಗೂ ರಾಷ್ಟ್ರಪ್ರೇಮಿಗಳು ಕಟ್ಟಿದ ಪಕ್ಷವಾಗಿದ್ದು ದೇಶದಾದ್ಯಂತ ಹೆಮ್ಮರವಾಗಿ ಬೆಳೆಯುತ್ತಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು ನಾವು ಎಂದು ಹೇಳಲು ಹೆಮ್ಮೆಪಡಬೇಕಾಗಿದೆ ಎಂದು ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅಭಿಮಾನದಿಂದ ಹೇಳಿದರು.ಕೆ.ಆರ್.ಪೇಟೆ ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ವರ್ಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶಕ್ಕೆ ವಿಶ್ವಮಟ್ಟದಲ್ಲಿ ಹೆಸರನ್ನು ತಂದುಕೊಟ್ಟು ದೇಶದ ಕೀರ್ತಿಪತಾಕೆಯನ್ನು ಬಾನಂಗಳಕ್ಕೆ ಹಾರಿಸಿದ ನಮ್ಮೆಲ್ಲರ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರಮೋಧಿ ಅವರ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಶಿಸ್ತು ಮತ್ತು ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಯಾಗಿ ಮುನ್ನಡೆಯಬೇಕು. ಮುಂಬರುವ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಗ್ರಾಮಮಟ್ಟದಿಂದ ಪಕ್ಷದ ಸಂಘಟನೆ ಮಾಡಬೇಕು .. ಪಕ್ಷದ ಜನಪರವಾದ ಕಾರ್ಯಕ್ರಮಗಳ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಮತದಾರರ ಮನಸ್ಸನ್ನು ಒಲಿಸಿ ಪಕ್ಷವನ್ನು ಸದೃಡಗೊಳಿಸಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲ್ಲೂಕಿನ ಸುಪುತ್ರ ರಾಜ್ಯದ ಮುಖ್ಯಮಂತ್ರಿಗಳಾದ ರೈತನಾಯಕ ಬಿ.ಎಸ್.ಯಡಿಯೂರಪ್ಪ ಅವರು ನೆರೆಹಾವಳಿ ಹಾಗೂ ಕೊರೋನಾ ಸಂಕಷ್ಠದ ನಡುವೆಯೂ ಜನಪರವಾಗಿ ಕೆಲಸ ಮಾಡುತ್ತಾ ರಾಜ್ಯದ ಸಮಗ್ರವಾದ ಅಭಿವೃದ್ಧಿಯನ್ನು ಗುರಿಯನ್ನಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಕೃಷ್ಣರಾಜಪೇಟೆ ತಾಲ್ಲೂಕಿನ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುಧಾನವನ್ನು ಬಿಡುಗಡೆ ಮಾಡಿ ತಾಲೂಕನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ನಿಷ್ಠಾವಂತ ಬಿಜೆಪಿ ಕಾರ್ಯಕರ್ತರೇ ಪಕ್ಷಕ್ಕೆ ಆಸ್ತಿಯಾದ್ದರಿಂದ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ತಲೆಕೆಡಿಸಿಕೊಳ್ಳದೇ ಆರೋಗ್ಯವಂತ ಸಮಾಜ ಹಾಗೂ ಸಧೃಡ ಭಾರತವನ್ನು ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡು ಕೆಲಸ ಮಾಡಬೇಕು ಎಂದು ಸಚಿವ ನಾರಾಯಣಗೌಡ ಕರೆ ನೀಡಿದರು..

ಕೃಷ್ಣರಾಜಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ತಾಲೂಕು ಬಿಜೆಪಿ ಉಸ್ತುವಾರಿ ಬಿ.ಕೃಷ್ಣಪ್ಪ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು…

ಸಂಪನ್ಮೂಲ ವ್ಯಕ್ತಿಗಳಾದ ಬಾಲಸುಬ್ರಹ್ಮಣ್ಯ, ಮೋಹನ್, ಸದಾನಂದ, ಸಿದ್ಧರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಪ್ರಶಿಕ್ಷಣ ವರ್ಗ ಶಿಬಿರದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು..

ಈ ಸಂದರ್ಭದಲ್ಲಿ ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಓಬಿಸಿ ಮೋರ್ಚಾ ಅಧ್ಯಕ್ಷ ಸಾರಂಗಿ ನಾಗರಾಜು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾ, ನಗರ ಘಟಕದ ಅಧ್ಯಕ್ಷೆ ಚಂದ್ರಕಲಾ, ಸಾಮಾಜಿಕ ಜಾಲತಾಣದ ಸಂಚಾಲಕ ಮಂಜುನಾಥಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: