April 28, 2024

Bhavana Tv

Its Your Channel

ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು .

ಮಂಡ್ಯ: ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಕೃಷ್ಣರಾಜಪೇಟೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು.ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಫಾರೂಕ್ ಝಾರೆ ಮಾತನಾಡಿ ಸಂವಿಧಾನದ ಆಶಯಗಳ ಈಡೇರಿಕೆಗೆ ಪ್ರತಿಯೊಬ್ಬರೂ ದುಡಿಯಬೇಕು. ದೇಶದ ಏಕತೆ, ಸಾರ್ವಭೌಮತೆ ಹಾಗೂ ಜಾತ್ಯಾತೀತತೆಯ ಉಳಿವಿಗಾಗಿ ಕೋಮುಸಾಮರತೆಯನ್ನು ಕಾಪಾಡಿಕೊಂಡು ಪರಸ್ಪರ ಪ್ರೀತಿ ವಿಶ್ವಾಸಗಳಿಂದ ನೆಮ್ಮದಿಯ ಜೀವನ ನಡೆಸಬೇಕು. ಸಂವಿಧಾನಬದ್ಧ ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು ಎಂಬ ಸತ್ಯವನ್ನು ಅರಿಯಬೇಕು ಎಂದು ನ್ಯಾಯಾಧೀಶರಾದ ಫಾರೂಕ್ ಝಾರೆ ಮನವಿ ಮಾಡಿದರು..

ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜಪ್ಪತುಳಸಪ್ಪ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕರಾದ ರಾಜೇಶ್ ಮತ್ತು ಚೇತನ್ ಸಂವಿಧಾನದ ಆಶಯಗಳು ಮತ್ತು ಏಕತೆಯನ್ನು ಕುರಿತು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಪ್ರಸನ್ನಕುಮಾರ್ ಮತ್ತು ನ್ಯಾಯಾಲಯದ ಸಿಬ್ಬಂಧಿಗಳು, ವಕೀಲರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: