May 10, 2024

Bhavana Tv

Its Your Channel

ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಎಲ್ಲರೂ ಒಂದಾಗಿ ದುಡಿಯಬೇಕು. ವಿಶ್ವಮಾನ್ಯವಾದ ಸರ್ವಶ್ರೇಷ್ಠ ಸಂವಿಧಾನವನ್ನು ಹೊಂದಿರುವ ಭಾರತ ದೇಶದ ಅಭಿವೃದ್ಧಿ ಸೇರಿದಂತೆ ಮೂಲ ಆಶಯಗಳ ಫಲವೇ ಸಂವಿಧಾನದ ತಳಹದಿಯ ಮೇಲೆ ನಿಂತಿದೆ- ನ್ಯಾಯಾಧೀಶ ಫಾರೂಕ್ ಝಾರೆ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ಮಹಿಳಾ ಮಕ್ಕಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಂವಿಧಾನದಿನಾಚರಣೆ, ಮಹಿಳಾ ದಿನ ಹಾಗೂ ಪರಿಸರ ರಕ್ಷಣಾ ದಿನ ಕುರಿತು ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಫಾರೂಕ್ ಝಾರೆ ಮಾತನಾಡಿ ಮಹಿಳಾ ಸಮಾನತೆ, ಸರ್ವರಿಗೂ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಸವಲತ್ತುಗಳು ಸಂವಿಧಾನದ ಆಶಯಗಳ ಫಲವಾಗಿ ದೊರಕಿವೆ. ಸಮಾಜದಲ್ಲಿನ ಶೋಷಿತರು ಹಾಗೂ ತುಳಿತಕ್ಕೊಳಗಾದವರಿಗೆ ರಾಜಕೀಯ ಶಕ್ತಿ, ಮಹಿಳಾ ಸಬಲೀಕರಣ, ಸಮಾನತೆಯು ಸಂವಿಧಾನದಿAದ ದೊರೆತ ಫಲವಾಗಿವೆ. ಹೆಣ್ಣು ಮಕ್ಕಳು ಶಿಕ್ಷಣದ ಶಕ್ತಿಯ ಮೂಲಕ ಇಂದು ಪುರುಷರಿಗೆ ಸಮಾನವಾಗಿ ಕೆಲಸ ಮಾಡುತ್ತಾ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆಯನ್ನು ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾಯಾಧೀಶರು ಪರಿಸರದ ಜೊತೆ ಅವಿನಾಭಾವ ಸಂಬAಧವನ್ನು ಹೊಂದಿರುವ ಮಾನವರಾದ ನಾವು ಗಿಡಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಅಸಮತೋಲನವನ್ನು ಹೋಗಲಾಡಿಸಿ ಪರಿಸರದ ಬಗ್ಗೆ ಅಭಿಮಾನ ಬೆಳೆಸಿಕೊಂಡು ಹಸಿರಿನಿಂದ ಉಸಿರು, ಗಿಡಮರಗಳಿಂದ ಸಮೃದ್ಧ ಜೀವನವೆಂಬ ಸತ್ಯ ಅರಿಯಬೇಕು ಎಂದು ನ್ಯಾಯಾಧೀಶರಾದ ಫಾರೂಕ್ ಝಾರೆ ಹೇಳಿದರು .

ಇದೇ ಸಂದರ್ಭದಲ್ಲಿ ಕೃಷ್ಣರಾಜಪೇಟೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿ ವಿವಿಧ ಬಗೆಯ ಹೂವು ಮತ್ತು ಹಣ್ಣಿನ ಸಸಿಗಳನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ನೆಟ್ಟು ನೀರೆರೆಯಲಾಯಿತು.

ಕೃಷ್ಣರಾಜಪೇಟೆ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಪ್ರಸನ್ನಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು .

ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕರಾದ ರಾಜೇಶ್, ಚೇತನ್, ವಕೀಲರ ಸಂಘದ ಕಾರ್ಯದರ್ಶಿ ಡಿ.ಆರ್.ಮೋಹನ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ತಾಲೂಕು ವಲಯ ಅರಣ್ಯಾಧಿಕಾರಿ ಹೆಚ್.ಎಸ್.ಗಂಗಾಧರ, ಸಹಾಯಕ ಅರಣ್ಯಾಧಿಕಾರಿ ರಾಘವೇಂದ್ರ, ಸಿಡಿಪಿಓ ದೇವಕುಮಾರ್, ಎಸಿಡಿಪಿಓ ಪದ್ಮಾ, ಮೇಲ್ವಿಚಾರಕರಾದ ದಿಲ್ ಶಾದ್ ಬಿ.ನಧಾಫ್, ಶಾಂತವ್ವ, ಸಂಪನ್ಮೂಲ ವ್ಯಕ್ತಿ ರವಿ ಮತ್ತಿತರರು ಉಪಸ್ಥಿತರಿದ್ದರು…

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: