May 14, 2024

Bhavana Tv

Its Your Channel

ಮರಾಠ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳಿOದ ಕೆ.ಆರ್.ಪೇಟೆಯಲ್ಲಿ ಪ್ರತಿಭಟನೆ

ಮಂಡ್ಯ: ಮರಾಠಿ ಅಭಿವೃದ್ಧಿ ಪ್ರಾಧಿಕಾರ ಆರಂಭಿಸುವ ರಾಜ್ಯದ ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳಿoದ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಭಾರೀ ಪ್ರತಿಭಟನೆ. ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವಸರಪಳಿ ರಚಿಸಿ ರಸ್ತೆ ತಡೆ ಮಾಡಿದ ಹೋರಾಟಗಾರರು.
ಕನ್ನಡ ಸಂಘಟನೆಗಳ ನಾಯಕರನ್ನು ರೋಲ್ ಕಾಲ್ ಗಿರಾಕಿಗಳು ಎಂದು ಬಾಯಿಗೆ ಬಂದAತೆ ಮಾತನಾಡಿ ನಿಂಧಿಸಿದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿ ದಹನ ಮಾಡಿದರು. ಯತ್ನಾಳ್ ಪ್ರತಿಕೃತಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ವ್ಯಕ್ತಪಡಿಸಿದ ಹೋರಾಟ.ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು.
ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೆ.ಆರ್.ಪೇಟೆಯಲ್ಲಿ ಭಾಗಶಃ ಯಶಸ್ವಿಯಾಗಿದ್ದು,
ಎಂದಿನAತೆ ಅಂಗಡಿಮುAಗಟ್ಟುಗಳ ಬಾಗಿಲು ತೆರೆದು ವ್ಯಾಪಾರ ವ್ಯವಹಾರ ನಡೆಸಿದ ವ್ಯಾಪಾರಿಗಳು, ಮಾಮೂಲಿಯಾಗಿದ್ದ ಜನಜೀವನ,ಆಟೋ ವಾಹನಗಳ ಸಂಚಾರ
ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಎಸ್.ಕುಮಾರ್, ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಪಡೆಯ ಅಧ್ಯಕ್ಷ ಪ್ರಶಾಂತ್, ಕರವೇ ಅಧ್ಯಕ್ಷ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಎ.ಸಿ.ಕಾಂತರಾಜು ನೇತೃತ್ವದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆ…

ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಅವರಿಂದ ಬಿಗಿ ಬಂದೋಬಸ್ತ್.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: