May 12, 2024

Bhavana Tv

Its Your Channel

“ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು” ಸಾಮಾಜಿಕ ಸಂದೇಶ ನೀಡುವ ಮಕ್ಕಳ ಚಲನ ಚಿತ್ರದ ಪೋಸ್ಟರ್ ಅನ್ನು ಸಚಿವ ಡಾ.ನಾರಾಯಣಗೌಡ ಬಿಡುಗಡೆ

ಮಂಡ್ಯ: “ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು” ಸಾಮಾಜಿಕ ಸಂದೇಶ ನೀಡುವ ಮಕ್ಕಳ ಚಲನ ಚಿತ್ರದ ಪೋಸ್ಟರ್ ಅನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಕೆ.ಆರ್.ಪೇಟೆ ಪಟ್ಟಣದ ರಾಮದಾಸ್ ಹೋಟೆಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಕ್ಕಳ ಚಲನಚಿತ್ರಕ್ಕೆ ಶುಭ ಹಾರೈಸಿದರು.

ಡ್ರಾಮಾ ಜೂನಿಯರ್ಸ್ ರಿಯಾಲಿಟಿ ಶೋನಲ್ಲಿ ಅಭಿನಯಿಸಿರುವ ಮಕ್ಕಳು ಹಾಗೂ ಹಿರಿಯ ಕಲಾವಿದರನ್ನು ಬಳಸಿಕೊಂಡು ಮೈಸೂರಿನ ಕಾರ್ಪೊರೇಟರ್ ಪಾರ್ಥಸಾರಥಿ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿರುವ ಮಕ್ಕಳ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮಕ್ಕಳ ಚಲನಚಿತ್ರವನ್ನು ತಯಾರಿಸಿರುವುದು ಸಂತೋಷ ತಂದಿದೆ ಎಂದು ಹೇಳಿದ ಸಚಿವ ನಾರಾಯಣಗೌಡ ಮಕ್ಕಳಿಗಾಗಿಯೇ ತಯಾರಿಸಿರುವ ಮಕ್ಕಳ ಚಲನ ಚಿತ್ರವನ್ನು ಥಿಯೇಟರ್ ಗೆ ಹೋಗಿ ಚಿತ್ರ ವೀಕ್ಷಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ನಾರಾಯಣಗೌಡ ಮನವಿ ಮಾಡಿದರು…

ಈಗಾಗಲೇ ಚಿತ್ರವು ಪ್ರದರ್ಶನಕ್ಕೆ ಸಿದ್ಧವಾಗಿದ್ದು ಮಕ್ಕಳ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಲು ಆಯ್ಕೆಯಾಗಿರುವುದು ಸಂತೋಷವಾಗಿದೆ. ಆಟವಾಡಿಕೊಂಡು ಶಾಲೆಗೆ ಹೋಗಿ ಪಾಠಪ್ರವಚನಗಳನ್ನು ಕಲಿಯಬೇಕಾದ ಮಕ್ಕಳನ್ನು ಶಾಲೆಗೆ ಕಳಿಸದೇ ಬಾಲಕಾರ್ಮಿಕರನ್ನಾಗಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಮಕ್ಕಳ ವಿಕಾಸಕ್ಕೆ ಪೂರಕವಾದ ಸಾಮಾಜಿಕ ಸಂದೇಶ ನೀಡುವ ನನ್ನ ಹೆಸ್ರು ಕಿಶೋರ ಏಳ್ ಪಾಸ್ ಎಂಟು ಚಿತ್ರವನ್ನು ಪ್ರೋತ್ಸಾಹಿಸಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅರವಿಂದ ಕಾರಂತ್, ಚಿತ್ರದ ಪ್ರಚಾರಕರ್ತ ಹರೀಶ್ ಮತ್ತಿತರರು ಉಪಸ್ಥಿತರಿದ್ದರು..


ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: