March 24, 2024

Bhavana Tv

Its Your Channel

ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಜನವರಿ ೨೬ರಂದು ಗಣರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಣೆ

ಮಂಡ್ಯ; ರೈತರ ಪಾಲಿಗೆ ಮರಣ ಶಾಸನವಾಗಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಜನವರಿ ೨೬ರಂದು ಗಣರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಲಾಗುವುದು. ಅಂದು ಕೆ.ಆರ್.ಪೇಟೆ ಪಟ್ಟಣದ ತುಂಬಾ ಎತ್ತಿನಗಾಡಿಗಳು, ದನಕರುಗಳು, ಜಾನುವಾರುಗಳು, ಆಫೆ ಆಟೋಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿ ವಿರೋಧಿಸಿ ಪ್ರತಿಭಟಿಸುವ ಸಂಬAಧ ತಾಲ್ಲೂಕಿನಾಧ್ಯಂತ ಜನಸಾಮಾನ್ಯರು ಹಾಗೂ ರೈತಬಂಧುಗಳಲ್ಲಿ ಜಾಗೃತಿ ಮೂಡಿಸಲು ಇಂದು ರೈತಮುಖಂಡರು ಪಟ್ಟಣದ ಪ್ರವಾಸಿ ಮಂದಿರದಿAದ ಹಿರಿಯ ರೈತ ನಾಯಕ ಮುದುಗೆರೆ ರಾಜೇಗೌಡರ ನೇತೃತ್ವದಲ್ಲಿ ಮೆರವಣಿಗೆ ಹೊರಟರು …

ರೈತನಾಯಕ ಮುದುಗೆರೆ ರಾಜೇಗೌಡ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತವಿರೋಧಿ ಧೋರಣೆಯನ್ನು ಅನುಸರಿಸುತ್ತಿವೆ. ಕಳೆದ ಎರಡು ತಿಂಗಳಿನಿAದ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ರೈತರು ಕೊರೆಯುವ ಚಳಿಯನ್ನು ಲೆಕ್ಕಿಸದೇ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದರೂ ಸ್ಥಳಕ್ಕೆ ಹೋಗಿ ರೈತರ ನೋವು ನಲಿವುಗಳನ್ನು ಆಲಿಸದ ಪ್ರಧಾನಿ ನರೇಂದ್ರ ಮೋದಿ ಅವರ ರೈತವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೇಷರತ್ತಾಗಿ ರೈತವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮೂಲಕ ರೈತಸ್ನೇಹಿ ಆಡಳಿತ ನೀಡಬೇಕು ಎಂದು ಆಗ್ರಹಿಸಿದರು..

ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ರೈತಮುಖಂಡರಾದ ಕೆ.ಆರ್.ಜಯರಾಂ, ಲಕ್ಷ್ಮೀಪುರ ಜಗಧೀಶ್, ಬೂಕನಕೆರೆ ನಾಗರಾಜು, ಮಡುವಿನಕೋಡಿ ಗಂಗಾಧರ, ನಗರೂರು ಕುಮಾರ್, ಚೌಡೇನಹಳ್ಳಿ ಪುಟ್ಟೇಗೌಡ ಸೇರಿದಂತೆ ಐವತ್ತಕ್ಕೂ ಹೆಚ್ಚಿನ ರೈತರು ಗಣರಾಜ್ಯೋತ್ಸವ ಕರಾಳ ದಿನ ಆಚರಿಸಲು ರೈತರನ್ನು ಸಂಘಟಿಸಲು ತಾಲ್ಲೂಕು ಪ್ರವಾಸಕ್ಕೆ ಹೊರಟರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: