April 19, 2024

Bhavana Tv

Its Your Channel

ಬೈಕ್ ಜಾಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ತಹಶೀಲ್ದಾರ್ ಎಂ.ಶಿವಮೂರ್ತಿ

ಮoಡ್ಯ: ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಆವರಣದಲ್ಲಿ ಬೈಕ್ ಜಾಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ತಹಶೀಲ್ದಾರ್ ಶಿವಮೂರ್ತಿ ಸ್ವತಃ ತಾವೂ ಪೋಲಿಸರೊಂದಿಗೆ ಹೆಲ್ಮೆಟ್ ಧರಿಸಿಕೊಂಡು ಕೆ.ಆರ್.ಪೇಟೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಜನಸಾಮಾನ್ಯರಿಗೆ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವಂತೆ ಅರಿವಿನ ಜಾಗೃತಿ ಮೂಡಿಸಿದರು. ನಂತರ ಮಾತನಾಡಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ನಿಮ್ಮ ಅಮೂಲ್ಯವಾದ ಪ್ರಾಣವನ್ನು ಕಾಪಾಡಿಕೊಳ್ಳಿ, ಅವಸರವೇ ಅಪಘಾತಕ್ಕೆ ಕಾರಣವಾದ್ದರಿಂದ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಲು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು.

ಫೆಬ್ರವರಿ ೧ರಿಂದ ಕೆ.ಆರ್.ಪೇಟೆ ತಾಲೂಕಿನಾಧ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ೫೦೦ರೂ ದಂಡ ವಿಧಿಸಲಾಗುತ್ತಿದೆ. ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಸುರೇಶ್, ವಕೀಲ ಪ್ರವೀಣ್ ಕುಮಾರ್ ಸೇರಿದಂತೆ ಪೋಲಿಸರು ಹಾಗೂ ಪುರ ಪ್ರಮುಖರು ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನಗಳನ್ನು ನಡೆಸಿ ಜನಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಿದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: