April 27, 2024

Bhavana Tv

Its Your Channel

ಹೊಸಹೊಳಲು ರಸ್ತೆಯ ಎರಡೂ ಬದಿಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ ಕಾರ್ಯಕ್ಕೆ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಚಾಲನೆ

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಪ್ರವಾಸಿ ಮಂದಿರದ ಬಳಿಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಸುಸಜ್ಜಿತವಾದ ದ್ವಿಚಕ್ರ ವಾಹನಗಳ ನಿಲುಗಡೆ ವ್ಯವಸ್ಥೆಗೆ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಚಾಲನೆ ನೀಡಿದರು.

ಕೆ.ಆರ್.ಪೇಟೆ ಪಟ್ಟಣದ ಹೊಸಹೊಳಲು ರಸ್ತೆಯ ಎರಡೂ ಬದಿಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಪಟ್ಟಣ ಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಯಮಿತವಾಗಿ ಬೈಕುಗಳನ್ನು ನಿಲ್ಲಿಸಬೇಕು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ನಿಯಮ ಉಲ್ಲಂಘಿಸಿದರೆ ೫೦೦ರೂ ದಂಢ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ಪೋಲಿಸರು, ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಮತ್ತು ಆಟೋ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದು ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರ ಸಮಾಜಮುಖಿ ಕಾಳಜಿ ಹಾಗೂ ಕರ್ತವ್ಯಪರತೆಯನ್ನು ಶ್ಲಾಘಿಸಿದರು .

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ

error: