April 26, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದ ಕಾಳಿದಾಸ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾರ್ಗೋನಹಳ್ಳಿ ಜವರೇಗೌಡ ಹಾಗೂ ಉಪಾಧ್ಯಕ್ಷರಾಗಿ ಕೋಡಿಮಾರನಹಳ್ಳಿ ಚಿಕ್ಕೇಗೌಡ ಆಯ್ಕೆ

ಕೆ.ಆರ್.ಪೇಟೆ ; ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರನ್ನು ರಾಜ್ಯದ ಯುವಜನಸೇವೆ, ಕ್ರೀಡೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು.

ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ಜನಪರವಾಗಿ ಹಾಗೂ ಕೃಷಿಕರ ಪರವಾಗಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದ ಸಚಿವರು ಕಾಳಿದಾಸ ಪತ್ತಿನ ಸಹಕಾರ ಸಂಘವು ಕೆ.ಆರ್.ಪೇಟೆ ಪಟ್ಟಣದಲ್ಲಿ ಸ್ವಂತ ಕಟ್ಟಡವನ್ನು ಹೊಂದುವ ನಿಟ್ಟಿನಲ್ಲಿ ಪುರಸಭೆ ವತಿಯಿಂದ ಸೂಕ್ತ ನಿವೇಶನವನ್ನು ಕೊಡಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ತಾಲ್ಲೂಕು ಅಧ್ಯಕ್ಷ ಕೆ.ಮುರುಳೀಧರ, ಮನ್ ಮುಲ್ ನಿರ್ದೇಶಕ ಕೆ.ಜಿ.ತಮ್ಮಣ್ಣ, ತಾಲ್ಲೂಕು ಕುರುಬ ಸಮಾಜದ ಕಾರ್ಯದರ್ಶಿ ಕೆ.ಎಸ್.ಚಂದ್ರು, ಮುಖಂಡರಾದ ಏಜಾಸ್ ಪಾಶ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಮಾರ್ ಮತ್ತು ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: