April 23, 2024

Bhavana Tv

Its Your Channel

ಕರವೇ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೆದರಿಸಿ ಬೆದರಿಸಿ, ಹಣದ ಬೇಡಿಕೆಯನ್ನೀಡುವವರ ವಿರುದ್ದ ಪೋಲಿಸ್ ಕೇಸ್ ಮಾಡಿ-ಅಧ್ಯಕ್ಷ ಹೊನ್ನೇನಹಳ್ಳಿ ವೇಣು

ಕೃಷ್ಣರಾಜಪೇಟೆ ; ಕರವೇ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೆದರಿಸಿ ಬೆದರಿಸಿ, ಹಣದ ಬೇಡಿಕೆಯನ್ನಿಟ್ಟು ಸಂಘಟನೆಗೆ ಕೆಟ್ಟ ಹೆಸರನ್ನು ತರುತ್ತಿರುವ ಕಿಡಿಗೇಡಿಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಕೆ.ಆರ್.ಪೇಟೆ ತಾಲ್ಲೂಕು ಘಟಕಕ್ಕೆ ಇಲ್ಲವೇ ಪೋಲಿಸರಿಗೆ ಸಾರ್ವಜನಿಕರು ದೂರು ನೀಡಬೇಕು ಎಂದು ಕರವೇ ತಾಲ್ಲೂಕು ಅಧ್ಯಕ್ಷ ಹೊನ್ನೇನಹಳ್ಳಿ ವೇಣು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು….

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇಣು ಕರ್ನಾಟಕ ರಕ್ಷಣಾ ವೇದಿಕೆಗೆ ಸಂಬAಧಪಡದ ಕೆಲವು ವ್ಯಕ್ತಿಗಳು ನಾವು ಕರವೇ ಪದಾಧಿಕಾರಿಗಳು, ಕರವೇ ಅಧ್ಯಕ್ಷರು ಎಂದು ಮೊಬೈಲ್ ಫೋನಿನಲ್ಲಿ ಮಾತನಾಡಿ ಅಧಿಕಾರಿಗಳನ್ನು ಹೆದರಿಸಿ ಬೆದರಿಸಿ ಹಣಕ್ಕೆ ಒತ್ತಾಯಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಕರವೇ ಸಂಘಟನೆಯ ಹೆಸರು ಹಾಳು ಮಾಡಿ ಕರವೇ ಪದಾಧಿಕಾರಿಗಳ ಗೌರವಕ್ಕೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಪಟ್ಟಣ ಪೋಲಿಸರಿಗೆ ದೂರು ನೀಡಿ ಒತ್ತಾಯಿಸಿದ್ದೇವೆ. ಕರ್ನಾಟಕ ರಕ್ಷಣಾ ವೇದಿಕೆಯ ಹೆಸರನ್ನು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಬಣವನ್ನು ಹೊರತುಪಡಿಸಿ ಬೇರೆ ಯಾವುದೇ ಗುಂಪು ಬಳಸುವಂತಿಲ್ಲ ಎಂದು ರಾಜ್ಯ ಉಚ್ಛ ನ್ಯಾಯಾಲಯವು ತೀರ್ಪು ನೀಡಿ ಆದೇಶ ಹೊರಡಿಸಿದ್ದರೂ ತಾಲ್ಲೂಕಿನ ಕೆಲವು ವ್ಯಕ್ತಿಗಳು ನಾವು ತಾಲ್ಲೂಕು ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಎಂದು ಸ್ವಯಂ ಘೋಷಣೆ ಮಾಡಿಕೊಂಡು ಕರವೇ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸ್ವಾರ್ಥಸಾಧನೆ ಮಾಡುತ್ತಿದ್ದಾರೆ. ಇಂತಹ ಕಿಡಿಗೇಡಿಗಳ ಬಗ್ಗೆ ಎಚ್ಚರವಾಗಿದ್ದು ಸಮೀಪದ ಪೋಲಿಸ್ ಠಾಣೆಗೆ ಅಥವಾ ಕರವೇ ಪದಾಧಿಕಾರಿಗಳ ಗಮನಕ್ಕೆ ತಂದು ಕಿಡಿಗೇಡಿಗಳಿಗೆ ತಕ್ಕ ಪಾಠವನ್ನು ಕಲಿಸಲು ಸಹಕರಿಸಬೇಕು ಎಂದು ಕರವೇ ತಾಲ್ಲೂಕು ಅಧ್ಯಕ್ಷ ಹೊನ್ನೇನಹಳ್ಳಿ ವೇಣು ಮನವಿ ಮಾಡಿದರು .

ಪತ್ರಿಕಾಗೋಷ್ಠಿಯಲ್ಲಿ ಕರವೇ ಪಧವೀದರ ವಿಭಾಗದ ಅಧ್ಯಕ್ಷ ಸಿ.ಬಿ.ಚೇತನ್ ಕುಮಾರ್, ಉಪಾಧ್ಯಕ್ಷ ಶ್ರೀನಿಧಿ ಶ್ರೀನಿವಾಸ್, ಕಾರ್ಯದರ್ಶಿ ಟೆಂಪೋಶ್ರೀನಿವಾಸ್, ಕರವೇ ಯುವಘಟಕದ ಅಧ್ಯಕ್ಷ ಆನಂದ್, ಕರವೇ ನಗರ ಘಟಕದ ಅಧ್ಯಕ್ಷ ಮದನ್, ಶೀಳನೆರೆ ಹೋಬಳಿಯ ಅಧ್ಯಕ್ಷ ಚನ್ನೇಗೌಡ, ಕಾರ್ಯದರ್ಶಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: