April 20, 2024

Bhavana Tv

Its Your Channel

ಚುನಾವಣೆಯಲ್ಲಿ ಸುಳ್ಳು ಆಶ್ವಾಸನೆ ನೀಡಿ ಏಳಕ್ಕೆ ಏಳೂ ಶಾಸಕ ಸ್ಥಾನವನ್ನು ಪಡೆದ ಜೆಡಿಎಸ್ ಪಕ್ಷದವರು ಮಂಡ್ಯ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಜೆಡಿಎಸ್ ಪಕ್ಷದವರು ಮಂಡ್ಯ ಜಿಲ್ಲೆಯನ್ನು ಕೇವಲ ಓಟ್ ಬ್ಯಾಂಕಿಗಾಗಿ ಇಟ್ಟುಕೊಂಡಿದ್ದಾರೆ ಅಭಿವೃದ್ಧಿ ಮಾತ್ರ ಶೂನ್ಯ

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಸುತ್ತಲೂ ಇರುವ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಆಶ್ವಾಸನೆ ನೀಡಿ ಏಳಕ್ಕೆ ಏಳೂ ಶಾಸಕ ಸ್ಥಾನವನ್ನು ಪಡೆದ ಜೆಡಿಎಸ್ ಪಕ್ಷದವರು ಮಂಡ್ಯ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಜೆಡಿಎಸ್ ಪಕ್ಷದವರು ಮಂಡ್ಯ ಜಿಲ್ಲೆಯನ್ನು ಕೇವಲ ಓಟ್ ಬ್ಯಾಂಕಿಗಾಗಿ ಇಟ್ಟುಕೊಂಡಿದ್ದಾರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಇಂತಹ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಿರುವ ಜೆಡಿಎಸ್ ಮತ್ತು ಈಗಿನ ಅಭಿವೃದ್ಧಿ ವಿರೋಧಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರಾದ ಎನ್.ಚೆಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪ್ರಜ್ಞಾವಂತ ಮತದಾರರಲ್ಲಿ ಮನವಿ ಮಾಡಿದರು.
ಅವರು ತಾಲ್ಲೂಕಿನ ಬಂಡಿಹೊಳೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಲಕ್ಷ್ಮೀ ಪುರ ಗ್ರಾಮದಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಸುತ್ತಲೂ ಇರುವ ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸಿವೆ ಆದರೆ ಮಂಡ್ಯ ಜಿಲ್ಲೆಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಬೊಬ್ಬೆಯೊಡೆದು ಕಳೆದ ಭಾರಿ 7ಕ್ಕೆ 7ಸ್ಥಾನ ಜೆಡಿಎಸ್ ಶಾಸಕರನ್ನು ಗೆಲ್ಲಿಸಿಕೊಂಡು 14ತಿಂಗಳು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಹೆಚ್.ಡಿ.ಕುಮಾರಣ್ಣ ಅವರು ಮಂಡ್ಯ ಜಿಲ್ಲೆಗೆ ಯಾವುದೇ ಕೊಡುಗೆ ನೀಡಲಿಲ್ಲ ಬದಲಿಗೆ ಮೈಷುಗರ್ ಕಾರ್ಖಾನೆಯನ್ನು ಮುಚ್ಚುವ ಮೂಲಕ ರೈತರ ಜೀವನಾಡಿಗೆ ಕೊಡಲಿ ಪೆಟ್ಟು ನೀಡಿದರು. ಮಂಡ್ಯ ಜಿಲ್ಲೆಯ ಜನ ಜೆಡಿಎಸ್ ಪಕ್ಷವನ್ನು ಹೊತ್ತು ಮೆರೆಸಿದರು. ಆದರೆ ಹಾಸನ ಜಿಲ್ಲೆಗೆ ನೀಡಿದ ಅರ್ಧದಷ್ಟು ಅಭಿವೃದ್ಧಿಗೆ ಅನುಧಾನ ನೀಡಿದ್ದರೆ ಜಿಲ್ಲೆಯು ಸಮಗ್ರ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿದರು. ಇಂತಹ ಪಕ್ಷವನ್ನು ಇನ್ನಾದರೂ ದೂರವಿಟ್ಟು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ನಾಯಕತ್ವ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮಂಡ್ಯ ಜಿಲ್ಲೆಯ ಅಭಿವೃದ್ಧಿಯ ಹಿತದೃಷ್ಠಿಯಿಂದ ಶಕ್ತಿ ತುಂಬಬೇಕು. ನಾವು ಜೆಡಿಎಸ್ ಪಕ್ಷದಲ್ಲಿದ್ದಾಗ ಕುಮಾರಸ್ವಾಮಿ ಅವರನ್ನು ಮನವೊಲಿಸಿ ಮಂಡ್ಯ ಮಿಮ್ಸ್, ಕೆ.ಆರ್.ಪೇಟೆ ಇಂಜಿನಿಯರಿAಗ್ ಕಾಲೇಜು, ನಾಗಮಂಗಲದಲ್ಲಿ ಆರ್.ಟಿ.ಓ ಕಚೇರಿ ಎಲ್ಲಾ ತಾಲ್ಲೂಕುಗಳಲ್ಲಿ ಮಿನಿವಿಧಾನ ಸೌಧಗಳ ನಿರ್ಮಾಣ ಮಾಡಿಸಿದ್ದೆವು. ಇದಲ್ಲದೇ ಜಿಲ್ಲೆಯ ಪ್ರಮುಖ ಊರುಗಳಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದೆವು ಇದನ್ನು ಹೊರತು ಪಡಿಸಿ ನಾವು ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ ನಂತರ ಒಂದೇ ಒಂದು ಗುರುತರವಾದ ಅಭಿವೃದ್ಧಿ ಕೆಲಸಗಳು ಜಿಲ್ಲೆಯಲ್ಲಿ ನಡೆದಿಲ್ಲ ಹಾಗಾಗಿ ಜಿಲ್ಲೆಯಲ್ಲಿ ಅಭಿವೃದ್ಧಿಗಾಗಿ ಶ್ರಮಿಸಲು ಸೈನಿಕರಂತೆ ಸಜ್ಜಾಗಿರುವ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಆಶೀರ್ವಾದ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲೆಯ ಮತದಾರರಲ್ಲಿ ಕೈಮುಗಿದು ಮನವಿ ಮಾಡಿದರು.
ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರು ಹುಟ್ಟವಷ್ಟೇ ಸತ್ಯ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕಾಂಗ್ರೆಸ್ ಪಕ್ಷವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿ.ಎಂ.ಸಿದ್ದರಾಮಯ್ಯ ಅವರ ಸಾರಥ್ಯದಲ್ಲಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯವಾದುದಾಗಿದೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಒಂದಲ್ಲ ಒಂದು ಅಧಿಕಾರ ಸಿಕ್ಕೇ ಸಿಗುತ್ತದೆ ಇದನ್ನು ಅರ್ಥ ಮಾಡಿಕೊಂಡು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸ್ಥಾನವನ್ನು ಗೆಲ್ಲಿಸುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲಾ ಏಳು ತಾಲ್ಲೂಕು ಪಂಚಾಯಿತಿಗಳನ್ನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರವು ಮೂಲಕ ಶಕ್ತಿ ತುಂಬಬೇಕು. ಈ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚಿನ ಸಾಧನೆ ಮಾಡಿದರೆ ವಿಧಾನಸಭಾ ಚುನಾವಣೆಯಲ್ಲಿ ಸುಲಭವಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗಲಿದೆ ಹಾಗಾಗಿ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಎನ್.ಚೆಲುವರಾಯಸ್ವಾಮಿ ಅವರು ಮನವಿ ಮಾಡಿದರು.
ಯುವ ಕಾರ್ಯಕರ್ತರನ್ನು ಹೆಚ್ಚಿಸಿದರೆ ಕಾಂಗ್ರೆಸ್ ಗೆಲುವು ಸುಲಭ
ಮಾಜಿ ಸಚಿವರಾದ ಮಳವಳ್ಳಿಯ ನರೇಂದ್ರಸ್ವಾಮಿ ಅವರ ಮಾತನಾಡಿ ಯುವ ಕಾಂಗ್ರೆಸ್ ಮತದಾರರನ್ನು ಪ್ರತಿ ಬೂತ್ ಮಟ್ಟದಲ್ಲಿ ಗುರುತಿಸಿ ಅವರನ್ನು ಸಂಘಟಿಸಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಾಗುವುದಿಲ್ಲ. ಹಿರಿಯರು ಮತ್ತು ಯುವಕರು ಸೇರಿ ಪಕ್ಷಕ್ಕೆ ಶಕ್ತಿ ತುಂಬಿದರೆ ಕಾಂಗ್ರೆಸ್ ಪಕ್ಷವು ಎಲ್ಲಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡುತ್ತಾರೆ ಆಗ ಮತದಾರರನ್ನು ಸುಲಭವಾಗಿ ಕಾಂಗ್ರೆಸ್ ಪಕ್ಷವು ತಲುಪಲು ಸಾಧ್ಯವಾಗುತ್ತದೆ. ಹಾಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಎಲ್ಲಾ ಕಾಂಗ್ರೆಸ್ ಮುಖಂಡರು ಸೂಕ್ತ ಕ್ರಮ ವಹಿಸಬೇಕು ಎಂದು ನರೇಂದ್ರಸ್ವಾಮಿ ಅವರು ಸಲಹೆ ನೀಡಿದರು.
ಜೆಡಿಎಸ್- ಬಿಜೆಪಿ ವೈಫಲ್ಯಗಳನ್ನು ತಿಳಿಸಿ: ಕಾಂಗ್ರೆಸ್ ಸಾಧನೆ ಮನವರಿಕೆ ಮಾಡಿ ಕಾಂಗ್ರೆಸ್ ಸಂಘಟಿಸಿ
ಶ್ರೀರಂಗಪಟ್ಟಣದ ಮಾಜಿ ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಬೇಕು ಜೊತೆಗೆ ಬಿಜೆಪಿ ಮತ್ತು ಜೆಡಿಎಸ್ ವೈಫಲ್ಯವನ್ನು ತಿಳಿಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಕಡೆ ಕಾರ್ಯಕರ್ತರು ಮುಂದಾಗಬೇಕು. ಕೇವಲ ಓಟು ಕೊಡಿ ಅಂದರೆ ಮತದಾರನ ಮನ ಮುಟ್ಟಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಳೆದ ಉಪ ಚುನಾವಣೆ ವ್ಯಾಪಾರವಾಗಿತ್ತು ಕೆ.ಬಿ.ಸಿ ಆರೋಪ
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಮಾತನಾಡಿ ಕಳೆದ ಉಪಚುನಾವಣೆಯು ಚುನಾವಣೆಯಾಗಿರಲಿಲ್ಲ. ಅದೊಂದು ವ್ಯಾಪಾರವಾಗಿತ್ತು. ಲಕ್ಷ ಲಕ್ಷ ಕೊಟ್ಟು ವಿವಿಧ ಪಕ್ಷಗಳ ಮುಖಂಡರನ್ನು ಖರೀದಿ ಮಾಡಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ವಾಮ ಮಾರ್ಗದಿಂದ ಗೆಲುವು ಸಾಧಿಸಿದ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ಏನೂ ಕೆಲಸ ಮಾಡದೇ ಸುಮ್ಮನೆ ಕಾಲಹರಣ ಮಾಡುತ್ತಿದೆ. ಸಚಿವ ನಾರಾಯಣಗೌಡ ಅವರು ಇಲ್ಲದ ಸುಳ್ಳು ಹೇಳಿಕೊಂಡು ಮತದಾರರ ಕಣ್ಣಿಗೆ ಮಂಕುಬೂದಿ ಎರಚುವ ಕೆಲಸ ಮಾಡುತ್ತಿದ್ದಾರೆ ಹಾಗಾಗಿ ಪಕ್ಷದ ಕಾರ್ಯಕರ್ತರು ಕೇಂದ್ರದ ನರೇಂದ್ರಮೋದಿ ಸರ್ಕಾರ ಹಾಗೂ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರದ ಲೋಪಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಮಾಜಿ ಸಚಿವರಾದ ಮಳವಳ್ಳಿಯ ನರೇಂದ್ರಸ್ವಾಮಿ, ಶ್ರೀರಂಗಪಟ್ಟಣದ ಮಾಜಿ ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಂಡ್ಯ ವಿಧಾನಸಭಾ ಕ್ಷೇತ್ರದ ರವಿಕುಮಾರ್ ಗಣಿಗ, ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದ್ದರಾಮೇಗೌಡ, ಪಾಂಡವಪುರ ವಿಧಾನಸಭಾ ಕ್ಷೇತ್ರದ ಯುವ ನಾಯಕ ಲಾರಿ ಬಿ.ರೇವಣ್ಣ, ಸಿ.ಎಂ.ದ್ಯಾವಪ್ಪ, ಕೆ.ಯು.ಐ.ಡಿಎಫ್.ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಗೌರಿಶಂಕರ್, ಜಿಲ್ಲಾ ವಕ್ತಾರ ಡಾ.ರಾಮಕೃಷ್ಣೇಗೌಡ, ತಾಲ್ಲೂಕು ಕಾಂಗ್ರೆಸ್ ವೀಕ್ಷಕ ಸಿ.ಆರ್.ರಮೇಶ್, ಜಿ.ಪಂ.ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಮನ್‌ಮುಲ್ ನಿರ್ದೇಶಕ ಡಾಲು ರವಿ, ಪುರಸಭಾ ಸದಸ್ಯರಾದ ಕೆ.ಸಿ.ಮಂಜುನಾಥ್, ಡಿ.ಪ್ರೇಮಕುಮಾರ್, ಸುಗುಣರಮೇಶ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಚೇತನಕುಮಾರ್, ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ಹರಳಹಳ್ಳಿ ವಿಶ್ವನಾಥ್, ಬಸ್ತಿ ರಂಗಪ್ಪ, ರಾಜಯ್ಯ, ಸಾಸಲು ಈರಪ್ಪ, ಎ.ಆರ್.ರಾಜಾನಾಯಕ್, ಗ್ಯಾಸ್ ಬಿ.ರಾಜಶೇಖರ್, ವಕೀಲ ಬಿ.ನಾಗೇಶ್, ಹೆತ್ತಗೋನಹಳ್ಳಿ ನಾರಾಯಣಗೌಡ, ಎ.ಬಿ.ಕುಮಾರ್, ಸಣ್ಣನಿಂಗೇಗೌಡ, ಮಾದವಪ್ರಸಾದ್, ಶ್ಯಾಮಣ್ಣ, ಲಷ್ಮೀ ಪುರ ಅಕ್ಕಿ ಮಂಜು, ಚಿಲ್ಲದಹಳ್ಳಿ ವೆಂಕಟೇಶ್, ಕಿಕ್ಕೇರಿ ರಾಜಣ್ಣ, ಚೇತನಾಮಹೇಶ್, ತಾಲ್ಲೂಕು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಅಗ್ರಹಾರ ಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.
ವರದಿ::ಅಗ್ರಹಾರಬಾಚಹಳ್ಳಿ ಶ್ರೀನಿವಾಸ್, ಕೆ.ಆರ್.ಪೇಟೆ.

error: