April 20, 2024

Bhavana Tv

Its Your Channel

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಕಠಿಣ ಕರ್ಫ್ಯೂ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು -ತಹಶೀಲ್ದಾರ್ ಎಂ.ಶಿವಮೂರ್ತಿ

ಮಂಡ್ಯ:-ನಾಗರೀಕ ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೊರೋನಾ ತಡೆಗೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.. ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಕಠಿಣ ನಿಯಮಗಳನ್ನು ಅನುಷ್ಠಾನಮಾಡಲು ಮುಂದಾಗಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು …

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಕಠಿಣ ಕರ್ಫ್ಯೂ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಸೋಮವಾರದಿಂದ ಶುಕ್ರವಾರ, ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಜಾರಿಯಲ್ಲಿರುವ ಸಂಪೂರ್ಣ ಕರ್ಫ್ಯೂ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಶನಿವಾರ ಮತ್ತು ಭಾನುವಾರ ಬೆಳಿಗ್ಗೆ ೬ ಗಂಟೆಯಿAದ ೧೦ಗಂಟೆಯವರೆಗೆ ಹಣ್ಣು ತರಕಾರಿ, ಮಾಂಸ, ಹಾಲು ಸೇರಿದಂತೆ ದಿನಸಿ ಪದಾರ್ಥಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಮನೆಯಿಂದ ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆಯಾ ಬಡಾವಣೆಯ ನಿವಾಸಿಗಳು ತಮ್ಮ ಮನೆಯ ಸಮೀಪದಲ್ಲಿಯೇ ಹಣ್ಣು ತರಕಾರಿಗಳನ್ನು ಖರೀದಿಸಬೇಕು. ಕೆ.ಆರ್.ಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಆವರಣ, ಶ್ರೀರಂಗ ಚಿತ್ರಮಂದಿರ ಆವರಣ, ಹೇಮಾವತಿ ಬಡಾವಣೆಯ ಗಣಪತಿ ಪಾರ್ಕ್ ಮತ್ತು ಗ್ರಾಮ ಭಾರತಿ ಶಾಲೆಯ ಪಕ್ಕದ ಮೈದಾನದಲ್ಲಿ ಹಣ್ಣು, ತರಕಾರಿ, ಹೂವು ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು..

ಸರ್ಕಲ್ ಇನ್ಸ್ಪೆಕ್ಟರ್ ಎಂ.ಕೆ.ದೀಪಕ್ ಮಾತನಾಡಿ ಕೊರೋನಾ ಎರಡನೇ ಅಲೆಯ ತೀಕ್ಷ್ಣ ತೆಯು ವ್ಯಾಪಕವಾಗಿರುವುದರಿಂದ ಮದುವೆ ಹಾಗೂ ಶುಭ ಸಮಾರಂಭಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ಮದುವೆಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ಕೇವಲ ೫೦ ಜನರು ಭಾಗವಹಿಸಲು ಮಾತ್ರ ಅವಕಾಶವಿದೆ. ಅಂತ್ಯಸAಸ್ಕಾರದಲ್ಲಿ ಭಾಗವಹಿಸಲು ಕೇವಲ ೨೦ಜನರಿಗೆ ಅನುವು ಮಾಡಿಕೊಡಲಾಗಿದೆ. ಚಂದಗೋನಳ್ಳಮ್ಮ ಕ್ಷೇತ್ರ ಹಾಗೂ ಗವಿರಂಗನಾಥ ಕ್ಷೇತ್ರದಲ್ಲಿ ಪರುವುಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ತಾಲ್ಲೂಕಿನ ಎಲ್ಲಾ ಸುಪ್ರಸಿದ್ಧ ದೇವಾಲಯಗಳಲ್ಲಿ ಪೂಜೆಪುರಸ್ಕಾರ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

೪೫ ವರ್ಷ ತುಂಬಿರುವವರು ಹಾಗೂ ಹಿರಿಯ ನಾಗರಿಕರು ಕಡ್ಡಾಯವಾಗಿ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಿ ಕೊಳ್ಳಬೇಕು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮನವಿ ಮಾಡಿದರು.
ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಉಪಸ್ಥಿತರಿದ್ದರು.. ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳು, ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿಯೂ ಕರ್ಫ್ಯೂ ನಿಯಮಗಳು ಜಾರಿಯಲ್ಲಿರುತ್ತವೆ. ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಎಚ್ಚರಿಸಿದರು..

ವರದಿ ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ

error: