May 3, 2024

Bhavana Tv

Its Your Channel

ಕೊರೋನಾ ಪಾಸಿಟಿವ್ ಸೋಂಕಿನ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಚೌಡಸಮುದ್ರ ಮತ್ತು ಕೊಮ್ಮೇನಹಳ್ಳಿ ಗ್ರಾಮಗಳು ಸೀಲ್ ಡೌನ್ …

ಮಂಡ್ಯ ; ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳೊಂದಿಗೆ ಸೀಲ್ ಡೌನ್ ಆಗಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು..

ಚೌಡಸಮುದ್ರ ಗ್ರಾಮದಲ್ಲಿ ೩೨ ಜನರು ಹಾಗೂ ಕೊಮ್ಮೇನಹಳ್ಳಿಯಲ್ಲಿ ಐವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು. ಜನತಾಕರ್ಫ್ಯೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸಚಿವ ನಾರಾಯಣಗೌಡ ಮನವಿ ಮಾಡಿದರು, ಚೌಡಸಮುದ್ರ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಸೋಂಕಿತರು ಹೋಂ ಐಸೊಲೇಷನ್ ಆಗಿದ್ದರೂ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆಯದೇ ಗ್ರಾಮದಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು ಕೋವಿಡ್ ಹೆಲ್ತ್ ಕೇರ್ ಸೆಂಟರ್ ಗೆ ಮರಳಿ ಗುಣಮಟ್ಟದ ಚಿಕಿತ್ಸೆ ಪಡೆದುಕೊಂಡು ಬೇಗ ಗುಣಮುಖರಾಗುವಂತೆ ಮನವೊಲಿಸಿ ಸೋಂಕಿತರನ್ನು ಶೆಟ್ಟ ನಾಯಕನಹಳ್ಳಿಯ ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಗೆ ಸ್ಥಳಾಂತರ ಮಾಡಿಸುವಲ್ಲಿ ಸಚಿವರು ಯಶಸ್ವಿಯಾದರು.

ಸೀಲ್ ಡೌನ್ ಆಗಿರುವ ಚೌಡಸಮುದ್ರ ಮತ್ತು ಕೊಮ್ಮೇನಹಳ್ಳಿ ಗ್ರಾಮದಲ್ಲಿ ಹಾಲಿನ ಡೈರಿಗಳಲ್ಲಿ ಎಂದಿನAತೆ ಹಾಲು ಖರೀದಿಸಲು ಡೈರಿ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡುವಂತೆ ತಹಶೀಲ್ದಾರ್ ಶಿವಮೂರ್ತಿ ಅವರಿಗೆ ಸಚಿವರು ಸೂಚನೆ ನೀಡಿದರು…

ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶವೇ ಕೊರೋನಾ ೨ನೇ ಅಲೆಯ ಸಂಕಷ್ಠದಲ್ಲಿದೆ. ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ಗ್ರಾಮಸ್ಥರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಚಿವ ನಾರಾಯಣಗೌಡ ಮನವಿ ಮಾಡಿದರು…

ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಕೆ.ದೀಪಕ್, ಜಿ.ಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ರಾಜಶ್ವನಿರೀಕ್ಷಕ ರಾಮಚಂದ್ರ, ಪಿಡಿಓ ಪುಷ್ಪಲತಾ, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿಕುಮಾರ್ ಸೇರಿದಂತೆ ಗ್ರಾಮಸ್ಥರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ

error: