May 11, 2021

Bhavana Tv

Its Your Channel

ಕೊರೋನಾ ಸೋಂಕಿಗೆ ಕೆ.ಆರ್.ಪೇಟೆ ತಾಲ್ಲೂಕಿನ ಬಳ್ಳೇಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಲಿ

ಕೆ.ಆರ್.ಪೇಟೆ: ಬಳ್ಳೇಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟರಾಮು ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೆ ಶರಣಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೋವಿಡ್ ಸೋಂಕು ಪತ್ತೆಯಾಗಿ ಹೆಲ್ತ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ನಾರ್ಗೋನಹಳ್ಳಿ ಗ್ರಾಮದ ವೆಂಕಟರಾಮು ಸೋಂಕಿನ ತೀವ್ರತೆಯು ಹೆಚ್ಚಾಗಿ ಮಹಾಮಾರಿಗೆ ಬಲಿಯಾಗಿದ್ದಾರೆ…

ನಿನ್ನೆ ರಾತ್ರಿ ಪಿ.ಎಫ್.ಐ ಸಂಘಟನೆಯ ಕಾರ್ಯಕರ್ತರು ನಾರ್ಗೋನಹಳ್ಳಿ ಗ್ರಾಮದಲ್ಲಿ ಕೊರೋನಾ ನಿಯಮದಂತೆ ಮೃತರ ಅಂತ್ಯಸAಸ್ಕಾರ ನೆರವೇರಿಸಿದರು.

ಮೃತ ವೆಂಕಟರಾಮು ಕಳೆದ ಎರಡು ತಿಂಗಳ ಹಿಂದಷ್ಟೇ ಬಳ್ಳೇಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಉತ್ತಮವಾಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ ೨೭ರಂದು ಸೋಂಕು ಪತ್ತೆಯಾಗಿ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ, ಪುತ್ರ, ಪುತ್ರಿ ಸೇರಿದಂತೆ ವೆಂಕಟರಾಮು ಅಪಾರವಾದ ಬಂಧು ಬಳಗವನ್ನು ಅಗಲಿದ್ದಾರೆ..
ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರಿಂದ ಅಂತ್ಯಸAಸ್ಕಾರ.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: