May 11, 2021

Bhavana Tv

Its Your Channel

ಕಿಕ್ಕೇರಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್(54) ಕೋವಿಡ್ ಗೆ ಬಲಿ …

ಕೆ.ಆರ್.ಪೇಟೆ ; ತಾಲ್ಲೂಕಿನ ಕಿಕ್ಕೇರಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಸ್.ಬಿ.ವಿಜಯಕುಮಾರ್(54) ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಾವಿಗೆ ಶರಣಾಗಿದ್ದಾರೆ..

ಕಳೆದ ಹತ್ತು ತಿಂಗಳ ಹಿಂದಷ್ಟೇ ಕಿಕ್ಕೇರಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಗೆ ವರ್ಗಾವಣೆಯಾಗಿ ಬಂದಿದ್ದ ವಿಜಯಕುಮಾರ್ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ಉಸಿರಾಟದ ಸಮಸ್ಯೆ ಹೆಚ್ಚಾದಾಗ ಮಂಡ್ಯದ ಮಿಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ಪರೀಕ್ಷೆ ಮಾಡಿಸಿದ ನಂತರ ವಿಜಯಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿತ್ತು.. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ವಿಜಯಕುಮಾರ್ ಸಾವಿಗೆ ಶರಣಾದರು.

ಕಿಕ್ಕೇರಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಾಗಿ ಗ್ರಾಹಕರು ಮತ್ತು ರೈತಬಾಂಧವರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿದ್ದ ವಿಜಯಕುಮಾರ್ ಅವರ ಅಕಾಲಿಕ ನಿಧನವು ನಾಗರಿಕ ಸಮಾಜಕ್ಕೆ ತುಂಬಲಾರದ ನಷ್ಠವಾಗಿದೆ.
ವಿಜಯಕುಮಾರ್ ಅವರ ಅಕಾಲಿಕ ನಿಧನಕ್ಕೆ ಕೆ.ಆರ್.ಪೇಟೆ ತಾಲ್ಲೂಕು ಸಾರಂಗಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಗಂಗಾಧರ್ ತೀವ್ರ ಸಂತಾಪ ಸೂಚಿಸಿದ್ದಾರೆ..

ವರದಿ.ಡಾ.ಕೆ.ಆರ್.ನೀಲಕಂಠ .ಕೃಷ್ಣರಾಜಪೇಟೆ . ಮಂಡ್ಯ.

error: