April 20, 2024

Bhavana Tv

Its Your Channel

ಔಷಧ ವ್ಯಾಪಾರಿಗಳು ಹಾಗೂ ಖಾಸಗಿ ಕ್ಲಿನಿಕ್‌ಗಳ ವೈದ್ಯರಿಂದ ಒಂದು ಲಕ್ಷರೂ ಬೆಲೆ ಬಾಳುವ 3 ಪ್ಯಾರಾ ಆಕ್ಸಿಮೀಟರ್ ಕೊಡುಗೆ.

ಕೆ.ಆರ್.ಪೇಟೆ ತಾಲೂಕಿನ ಔಷಧ ವ್ಯಾಪಾರಿಗಳು ಹಾಗೂ ಖಾಸಗಿ ಕ್ಲಿನಿಕ್‌ಗಳ ವೈದ್ಯರಿಂದ ಒಂದು ಲಕ್ಷರೂ ಬೆಲೆ ಬಾಳುವ 3 ಪ್ಯಾರಾ ಆಕ್ಸಿಮೀಟರ್ ಗಳನ್ನು ಸಚಿವ ನಾರಾಯಣಗೌಡರ ಸಮಕ್ಷಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಎಂ.ಎಸ್.ಜಯ0ತ್ ಅವರಿಗೆ ಹಸ್ತಾಂತರಿಸಿದರು .

ಕೃಷ್ಣರಾಜಪೇಟೆ ; ಕೋವಿಡ್ ಸಂಕಷ್ಠದ ಸಮಯದಲ್ಲಿ ರಾಜ್ಯ ಸರ್ಕಾರದ ಜೊತೆ ಸಾರ್ವಜನಿಕರು ಕೂಡ ಕೋವಿಡ್ ತಡೆಗೆ ಉದಾರವಾಗಿ ಸಹಕಾರ ನೀಡುತ್ತಿದ್ದಾರೆ. ಮಂಡ್ಯ ಜಿಲ್ಲೆಗೆ 10ಕೋಟಿ ರೂಪಾಯಿಗಳಿಗೂ ಹೆಚ್ಚಿನ ವೈದ್ಯಕೀಯ ಯಂತ್ರಗಳು, ಔಷಧಗಳು, ಆಕ್ಸಿಜನ್ ತಯಾರಿಕಾ ಪ್ಲಾಂಟ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ ಕೋವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್ ವಿರುದ್ಧದ ಯುದ್ಧವನ್ನು ಗೆಲ್ಲಬೇಕು ಎಂದು ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಮಧುಸೂದನ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಯಂತ್, ಜಿ.ಪಂ ಮಾಜಿ ಸದಸ್ಯ ಡಾ.ಎಸ್.ಕೃಷ್ಣಮೂರ್ತಿ, ತಾಲೂಕು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಬೇಲದಕೆರೆ ಚನ್ನೇಗೌಡ, ಪ್ರಧಾನ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ, ಪದಾಧಿಕಾರಿಗಳಾದ ಕೆ.ಗೌಸ್ ಖಾನ್, ಸಾಬಿದ್ ಖಾನ್, ಮಂಜುನಾಥ್, ನಂದಿಮೆಡಿಕಲ್ಸ್ನ ಸುಮಂತ್, ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಕೆ.ಎಸ್.ಪ್ರಮೋದ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಅಘಲಯ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ

error: