April 26, 2024

Bhavana Tv

Its Your Channel

೫ ಲಸಿಕಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಕೆ.ಆರ್.ಪೇಟೆ ಪುರಸಭಾ ವ್ಯಾಪ್ತಿಯ ೫ ಲಸಿಕಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ, ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಪುರಸಭಾ ಮುಖ್ಯಾಧಿಕಾರಿ ಸತೀಶ್ ಕುಮಾರ್. ೨೩ ವಾರ್ಡುಗಳಿಂದ ೨ ಸಾವಿರ ಜನರಿಗೆ ಇಂದು ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಹಶೀಲ್ದಾರ್ ಶಿವಮೂರ್ತಿ ತಿಳಿಸಿದ್ದಾರೆ. ಪುರಸಭಾ ವ್ಯಾಪ್ತಿಯ ೫ ಲಸಿಕಾ ಕೇಂದ್ರಗಳಲ್ಲಿ ಇಂದು, ನಾಳೆ ಮತ್ತು ನಾಡಿದ್ದು ೪೫ ವರ್ಷ ತುಂಬಿರುವ ಜನರಿಗೆ ಮಾತ್ರ ಲಸಿಕೆ ಹಾಕಲಾಗುವುದು.

ಕೆ.ಆರ್.ಪೇಟೆ ಮತ್ತು ಹೊಸಹೊಳಲಿನ ೨೩ ವಾರ್ಡುಗಳಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ೮೫೦೦ಕ್ಕೂ ಹೆಚ್ಚಿನ ಜನರಿಗೆ ಮೊದಲ ಡೋಸ್ ಕೋವಿಡ್ ತಡೆ ಲಸಿಕೆಯನ್ನು ಹಾಕಬೇಕಾಗಿದ್ದು ದಯಮಾಡಿ ಲಸಿಕೆಯನ್ನು ಹಾಕಿಸಿಕೊಳ್ಳದವರು ಆಧಾರ್ ಕಾರ್ಡ್ ತೆಗೆದುಕೊಂಡು ಬಂದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಮೂರ್ತಿ ಮತ್ತು ಪುರಸಭೆ ಅಧ್ಯಕ್ಷೆ ಮಹಾದೇವಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಗಳಾದ ಸತೀಶ್ ಬಾಬು, ಗಫಾರಿಯಾ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಮುಖ್ಯ ಶಿಕ್ಷಕರಾದ ರಾಚಪ್ಪಾಜಿ, ಶಿವಕುಮಾರ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ, ಮುಖಂಡರಾದ ಮಿತ್ರಗಿರೀಶ್, ನಂಜುAಡ, ಹಿರಿಯ ಆರೋಗ್ಯ ಪರಿವೀಕ್ಷಕರಾದ ಅಶೋಕ್, ನರಸಿಂಹಶೆಟ್ಟಿ, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಆಶಾ ಆರೋಗ್ಯ ಕಾರ್ಯಕರ್ತರು, ಸ್ವಯಂಸೇವಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: