May 15, 2024

Bhavana Tv

Its Your Channel

ಕೆ.ಆರ್.ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಮಂಡ್ಯ: ಕೆ.ಆರ್.ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಪ್ರಾಂಶುಪಾಲೆ ಹೇಮಲತಾ ಚಾಲನೆ ನೀಡಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ೧೨೦೦ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬೃಹತ್ ಲಸಿಕಾ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ಕಾಲೇಜಿಗೆ ಆಗಮಿಸುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು ಕೋವಿಡ್ ಗಂಟಲು ದ್ರವದ ಸ್ವಾಬ್ ಪರೀಕ್ಷೆ ಮಾಡಿಸಿಕೊಂಡು ಕಾಲೇಜಿಗೆ ಆಗಮಿಸಬೇಕೆನ್ನುವ ಸರ್ಕಾರದ ನಿಯಮದ ಹಿನ್ನೆಲೆಯಲ್ಲಿ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿದರೆ ಕೋವಿಡ್ ವಿರುದ್ಧದ ಯುದ್ಧವನ್ನು ಸುಲಭವಾಗಿ ಗೆಲ್ಲಬಹುದು. ಆದ್ದರಿಂದ ಯುವಜನರು ಸೇರಿದಂತೆ ಹಿರಿಯ ನಾಗರಿಕರು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಮೂರ್ತಿ ಮನವಿ ಮಾಡಿದರು.

ಕೋವಿಡ್ ಲಸಿಕಾ ಅಭಿಯಾನದಲ್ಲಿ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಸಹಪ್ರಾಧ್ಯಾಪಕರಾದ ರಮೇಶ್, ಪಿ.ಕೆ.ಜವರೇಗೌಡ, ಹೆಚ್.ಡಿ.ಉಮಾಶಂಕರ್, ಪತ್ರಾಂಕಿತ ವ್ಯವಸ್ಥಾಪಕ ಎಂ.ಎಸ್.ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: