July 26, 2021

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡರ ೫೯ನೇ ಹುಟ್ಟು ಹಬ್ಬದ ಸಂಭ್ರಮ.

ಕೆ.ಆರ್.ಪೇಟೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡರ ೫೯ನೇ ಹುಟ್ಟು ಹಬ್ಬದ ಸಂಭ್ರಮ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಿಎಂ ಪುತ್ರ ವಿಜಯೇಂದ್ರ ಮತ್ತು ಸಚಿವ ನಾರಾಯಣಗೌಡರ ಬೃಹತ್ ಕಟೌಟ್ ಗಳಿಗೆ ಕ್ರೇನ್ ಮೂಲಕ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು ..

ಕೆ.ಆರ್.ಪೇಟೆ ಪಟ್ಟಣದಲ್ಲಿ ಸಚಿವ ನಾರಾಯಣಗೌಡರ ೫೯ನೇ ಹುಟ್ಟು ಹಬ್ಬದ ಸಂಭ್ರಮ. ಗಣಪತಿ ಹೋಮ ನಡೆಸಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದ ಸಚಿವ ನಾರಾಯಣಗೌಡ, ಧರ್ಮಪತ್ನಿ ದೇವಕಿನಾರಾಯಣಗೌಡ, ಮುಗಿಲು ಮುಟ್ಟಿದ ಸಂಭ್ರಮ, ರೈತ ಬಾಂಧವರಿಗೆ ಬಾಳೆ, ನಿಂಬೆ ಹಾಗೂ ತೆಂಗಿನ ಸಸಿಗಳ ವಿತರಣೆ.

ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳು ಹಾಗೂ ಕೋವಿಡ್ ಸೋಂಕಿತರಿಗೆ ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಮಳವಳ್ಳಿ ಬಿಜೆಪಿ ಮುಖಂಡ ಡಾ.ಯಮಧೂರು ಸಿದ್ಧರಾಜು, ಪಾಂಡವಪುರ ಬಿಜೆಪಿ ಮುಖಂಡ ಕಿಯೋನಿಕ್ಸ್ ನಿರ್ದೇಶಕ ಮಂಜುನಾಥ್, ಪುರಸಭಾ ಅಧ್ಯಕ್ಷೆ ಮಹಾದೇವಿನಂಜುoಡ ನೇತೃತ್ವದಲ್ಲಿ ಹಣ್ಣು ಹಂಪಲು, ಬ್ರೆಡ್ ವಿತರಣೆ.

ಸಚಿವ ಡಾ.ನಾರಾಯಣಗೌಡ ಅಭಿಮಾನಿಗಳ ಬಳಗದ ಅಧ್ಯಕ್ಷ ಚಂದ್ರಮೋಹನ್ ನೇತೃತ್ವದಲ್ಲಿ ೫೯ಕೆ.ಜಿ ತೂಕದ ಕೇಕ್ ಕತ್ತರಿಸಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ ಸಚಿವರು. ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಸಿಎಂ ಯಡಿಯೂರಪ್ಪ, ಸಿಎಂ ಪುತ್ರ ವಿಜಯೇಂದ್ರ ಮತ್ತು ಸಚಿವ ನಾರಾಯಣಗೌಡರ ೨೦ಅಡಿ ಎತ್ತರದ ಬೃಹತ್ ಕಟೌಟ್ ಗಳಿಗೆ ಕ್ರೇನ್ ಮೂಲಕ ಹಾರ ಹಾಕಿ, ಕ್ಷೀರಾಭಿಷೇಕ ಮಾಡಿ ಘೋಷಣೆಯನ್ನು ಕೂಗಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು…

ಸಚಿವ ನಾರಾಯಣಗೌಡರ ಹುಟ್ಟೂರು ಕೈಗೋನಹಳ್ಳಿಯಲ್ಲಿ ಸಚಿವ ನಾರಾಯಣಗೌಡ ದಂಪತಿಗಳಿಗೆ ಹೃದಯಸ್ಪರ್ಶಿ ಸ್ವಾಗತ, ಎತ್ತಿನಗಾಡಿಯಲ್ಲಿ ಗ್ರಾಮದ ಸುಪುತ್ರ ನಾರಾಯಣಗೌಡ ದಂಪತಿಗಳು, ಅಳಿಯ ಕರಣ್, ಮಗಳು ನೇಹಾ ಅವರನ್ನು ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದ ಗ್ರಾಮಸ್ಥರು.

ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಅವಧಾನಿಗಳ ನೇತೃತ್ವದಲ್ಲಿ ನಡೆದ ಹೋಮ-ಹವನ ವಿಶೇಷ ಪೂಜಾ ಕಾರ್ಯಕ್ರಮಗಳು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ೫೧ ಸಾವಿರರೂ ಮಂಗಳನಿಧಿ ಸಮರ್ಪಿಸಿದ ಸಚಿವರು.

ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪ್ರಧಾನಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ತಾಲ್ಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ, ನಗರಾಧ್ಯಕ್ಷೆ ಚಂದ್ರಕಲಾ ರಮೇಶ್, ತಾಲ್ಲೂಕು ರೈತಮೋರ್ಚಾ ಅಧ್ಯಕ್ಷ ಸಾರಂಗಿನಾಗರಾಜು, ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಶ್ರೀರಂಗಪಟ್ಟಣ ಡಿವೈಎಸ್ ಪಿ ಸಂದೇಶಕುಮಾರ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ, ಚಂದ್ರಕಲಾಪ್ರಕಾಶ್, ಭರತ್ ಮಾಸ್ತಿ, ಆರ್.ಜಗಧೀಶ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: