March 29, 2024

Bhavana Tv

Its Your Channel

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ

ಕೆ.ಆರ್.ಪೇಟೆ: ಪರಿಸರದ ಜೊತೆ ಅವಿನಾಭಾವ ಸಂಬAಧವನ್ನು ಹೊಂದಿರುವ ಮಾನವರಾದ ನಾವು ಪರಿಸರ ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮನವಿ ಮಾಡಿದರು .
ಕೆ.ಆರ್.ಪೇಟೆ ಪಟ್ಟಣದ ಸ್ವರ್ಣಜಯಂತಿ ಶಹರಿ ರೋಜ್ಗಾರ್ ಯೋಜನಾ ಭವನದಲ್ಲಿ ಪುರಸಭೆಯ ಅಧ್ಯಕ್ಷೆ ಮಹಾದೇವಿನಂಜುoಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜೀವವೈವಿಧ್ಯ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪರಿಸರ ಹಾಗೂ ಜೀವವೈವಿಧ್ಯತೆಯು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಜೀವವೈವಿಧ್ಯತೆಯ ವಿವಿಧ ಪ್ರಾಕಾರಗಳಾದ ಪ್ರಾಣಿ ಪಕ್ಷಿಗಳು, ಜಲಮೂಲ, ಕೆರೆ ಕಟ್ಟೆಗಳ ಸಂರಕ್ಷಣೆಯು ನಮ್ಮ ಆಧ್ಯಕರ್ತವ್ಯವಾಗಬೇಕು. ಈ ದಿಕ್ಕಿನಲ್ಲಿ ಪರಿಸರ ಪ್ರೇಮಿಗಳು, ಸಾವಯವ ಕೃಷಿಕರು, ಪ್ರಗತಿಪರ ರೈತರು ಸೇರಿದಂತೆ ಜೀವವೈವಿಧ್ಯತೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಸತೀಶ್ ಕುಮಾರ್ ತಿಳಿಸಿದರು..

ಜೀವವೈವಿಧ್ಯತಾ ಸಮಿತಿಯ ಸದಸ್ಯರಾದ ಡಾ.ದಿವಾಕರ್, ತಾಲ್ಲೂಕು ವಲಯ ಅರಣ್ಯಾಧಿಕಾರಿ ಹೆಚ್.ಎಸ್. ಗಂಗಾಧರ, ಕೆ.ಆರ್.ನೀಲಕಂಠ, ಉರಗತಜ್ಞ ಸ್ನೇಕ್ ಮುನ್ನಾ ಜೀವವೈವಿಧ್ಯತೆಯ ಸಂರಕ್ಷಣೆ ಕುರಿತು ಮಾತನಾಡಿದರು.
ಈ ಸಂಧರ್ಭದಲ್ಲಿ ಪರಿಸರ ಎಂಜಿನಿಯರ್ ಅರ್ಚನಾ ಆರಾಧ್ಯ, ಹಿರಿಯ ಆರೋಗ್ಯ ಪರಿವೀಕ್ಷಕರಾದ ಅಶೋಕ್, ನರಸಿಂಹಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: