October 20, 2021

Bhavana Tv

Its Your Channel

ನಾಳೆ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ನಾಯಕ ಜನಾಂಗದ ಜಿಲ್ಲಾ ಜನಜಾಗೃತಿ ಸಭೆ

ಕೆ.ಆರ್.ಪೇಟೆ: ಆಗಷ್ಟ್ ೭(ನಾಳೆ)ರಂದು ಮಂಡ್ಯನಗರದ ಕಲ್ಲಹಳ್ಳಿಯ ಶ್ರೀ ಆಂಜನೇಯ ದೇವಸ್ಥಾನ ಭವನದಲ್ಲಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಾಯಕ ಜನಾಂಗದ ಜಿಲ್ಲಾ ಜನಜಾಗೃತಿ ಸಭೆ ನಡೆಯಲಿದೆ.ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಘದ ಜಿಲ್ಲಾಧ್ಯಕ್ಷ ಆರ್.ಜಗದೀಶ್ ಮನವಿ ಮಾಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ನಾಯಕ ಜನಾಂಗದ ಜಿಲ್ಲಾ ಜನಜಾಗೃತಿ ಸಭೆಯನ್ನು ಮಂಡ್ಯ ನಗರದ ಮೈಸೂರು ಬೆಂಗಳೂರು ಮುಖ್ಯ ರಸ್ತೆಯ ಕಲ್ಲಹಳ್ಳಿಯ ಸೋಮೇಶ್ವರ ಸಮುದಾಯ ಭವನದ ಎದುರಿನಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಭವನದಲ್ಲಿ ಆಗಷ್ಟ್ ೭ರ ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಆಯೋಜಿಸಲಾಗಿದೆ ಎಂದು ನಾಯಕ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಆರ್.ಜಗದೀಶ್ ತಿಳಿಸಿದ್ದಾರೆ.

ಈ ಸಭೆಗೆ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘಸAಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ನೌಕರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಜಗಧೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ವೆಂಕಟೇಶನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ. ಮಂಡ್ಯ

error: