April 25, 2024

Bhavana Tv

Its Your Channel

ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಹಾಗೂ ವಿದ್ಯುಚ್ಛಕ್ತಿ ಖಾಸಗೀಕರಣ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿOದ ಪ್ರತಿಭಟನೆ

ಮಂಡ್ಯ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಹಾಗೂ ವಿದ್ಯುಚ್ಛಕ್ತಿ ಖಾಸಗೀಕರಣ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ರಸ್ತೆ ತಡೆ ನಡೆಸಿ ಉಪತಹಶೀಲ್ದಾರ್ ಹಿರಿಯಣ್ಣ ಅವರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು …

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತವಿರೋಧಿ ಸರ್ಕಾರಗಳಾಗಿವೆ. ರೈತವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಈಗಾಗಲೇ ಹೆಜ್ಜೆಹಾಕಿರುವ, ರೈತರ ಸುಸ್ಥಿರ ಬೇಸಾಯಕ್ಕೆ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ಸರಬರಾಜು ಮಾಡುವ ಬದಲಿಗೆ ಸ್ಮಾರ್ಟ್ ಮೀಟರ್ ಅಳವಡಿಸಿ ಮೊಬೈಲ್ ಕರೆನ್ಸಿಯನ್ನು ರೀಚಾರ್ಜ್ ಮಾಡುವ ಮಾದರಿಯಲ್ಲಿ ರೈತರ ಪಂಪ್ ಸೆಟ್ ಗಳ ಮೀಟರ್ ಗಳನ್ನು ಸ್ಮಾರ್ಟ್ ಮೀಟರ್ ಆಗಿ ಬದಲಾಯಿಸಿ ವಿದ್ಯುತ್ ಉತ್ಪಾದನೆ ಹಾಗೂ ವಿತರಣಾ ಕ್ಷೇತ್ರವನ್ನು ಖಾಸಗೀಕರಣ ಮಾಡಿ ರೈತರನ್ನು ಬೇಸಾಯದಿಂದ ಒಕ್ಕಲೆಬ್ಬಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ರೈತನಾಯಕ ಮುದುಗೆರೆ ರಾಜೇಗೌಡ ಮತ್ತು ರೈತಸಂಘದ ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿಶಂಕರ್ ಆಕ್ರೋಶ ವ್ಯಕ್ತಪಡಿಸಿದರು..

ಪ್ರತಿಭಟನೆಯಲ್ಲಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಕಾರ್ಯದರ್ಶಿ ಬೂಕನಕೆರೆ ನಾಗರಾಜು, ರೈತಮುಖಂಡರಾದ ಚೌಡೇನಹಳ್ಳಿ ಕೃಷ್ಣೇಗೌಡ, ಮುದ್ದುಕುಮಾರ್, ನಗರೂರುಕುಮಾರ್, ಕರೋಟಿ ತಮ್ಮಯ್ಯ, ಮಡುವಿನಕೋಡಿ ಗಂಗಾಧರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: