March 29, 2024

Bhavana Tv

Its Your Channel

ಕಂಪ್ಯೂಟರ್ ಸಾಕ್ಷರತೆ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮ

ಕೆ.ಆರ್.ಪೇಟೆ: ಗ್ರಂಥಗಳು ಜ್ಞಾನದ ದೀವಿಗೆಗಳಿದ್ದಂತೆ, ಜ್ಞಾನದ ಭಂಡಾರವಾಗಿರುವ ಗ್ರಂಥಾಲಯವನ್ನು ಯುವಜನರು ಹಾಗೂ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಳ್ಳೇಕೆರೆ ಮಂಜುನಾಥ್ ಕರೆ ನೀಡಿದರು .

ಅವರು ಇಂದು ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ ಹುಟ್ಟು ಹಬ್ಬದ ಅಂಗವಾಗಿ ಕಂಪ್ಯೂಟರ್ ಸಾಕ್ಷರತೆ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು..

ಬದಲಾದ ಸನ್ನಿವೇಶದಲ್ಲಿ ವಿಜ್ಞಾನ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಮತ್ತು ಯುವಜನರು ತಾವು ಇರುವ ಜಾಗದಲ್ಲಿಯೇ ಅಂತರ್ಜಾಲವನ್ನು ಬಳಸಿಕೊಂಡು ತಮಗೆ ಬೇಕಾದ ವೈಜ್ಞಾನಿಕ ಮಾಹಿತಿಯನ್ನು ಕ್ಷಣಮಾತ್ರದಲ್ಲಿ ಪಡೆದುಕೊಂಡು ಅಭ್ಯಾಸ ಮಾಡುವ ಮೂಲಕ ಸಾಧನೆ ಮಾಡುತ್ತಿದ್ದಾರೆ. ಟ್ಯಾಬ್, ಲ್ಯಾಪ್ ಟಾಪ್, ಕಂಪ್ಯೂಟರ್ ಮತ್ತು ಸ್ಮಾರ್ಟ್ ಫೋನುಗಳು ನಮಗೆ ಬೇಕಾದ ಮಾಹಿತಿಯನ್ನು ನೀಡಿ ವೈಜ್ಞಾನಿಕ ಆವಿಷ್ಕಾರದ ಫಲವನ್ನು ನಮಗೆ ತಲುಪಿಸಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಕಶಕ್ತಿಯಾಗಿ ಕೆಲಸ ಮಾಡುತ್ತಿವೆ. ವಿದ್ಯಾರ್ಥಿಗಳು ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಓದಿ ಜ್ಞಾನವಂತರಾಗಿ ಅಪೂರ್ವ ಸಾಧನೆ ಮಾಡಬೇಕು ಎಂದು ಮಂಜುನಾಥ್ ಕರೆ ನೀಡಿದರು ..

ಕೆ.ಆರ್.ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಲಿಂಗಣ್ಣಸ್ವಾಮಿ, ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಡಾ.ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಯುವಜನರು ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ಗಳನ್ನು ಸದ್ಬಳಕೆ ಮಾಡಿಕೊಂಡು ಸರ್ವಶ್ರೇಷ್ಠ ಸಾಧನೆ ಮಾಡಬೇಕು.. ಒಂದು ಪುಸ್ತಕವನ್ನು ಓದಿ ಜ್ಞಾನ ಸಂಪಾದನೆ ಮಾಡುವುದು ೧೦ಜನ ಸ್ನೇಹಿತರ ಗೆಳೆತನಕ್ಕೆ ಸಮನಿದ್ದಂತೆ ಆದ್ದರಿಂದ ಪಠ್ಯದ ಜೊತೆಗೆ ಲೋಕಜ್ಞಾನವನ್ನು ಬೆಳೆಸಿಕೊಂಡು ಜ್ಞಾನವಿಕಾಸ ಮಾಡಿಕೊಳ್ಳಬೇಕು ಎಂದು ರಮೇಶ್ ಕರೆ ನೀಡಿದರು.

ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಬಿ.ಪ್ರಮೋಧಿನಿ, ಸಹಾಯಕ ಪ್ರಾಧ್ಯಾಪಕರು ಹಾಗೂ ನ್ಯಾಕ್ ಸಂಯೋಜಕರಾದ ಹೆಚ್.ಆರ್.ಶ್ಯಾಮ್ ಕಂಪ್ಯೂಟರ್ ಜ್ಞಾನ ಕುರಿತು ವಿಶೇಷ ಉಪನ್ಯಾಸ ನೀಡಿದರು ..

ವರದಿ: ಕೆ.ಎನ್.ಸಾಗರ್.ಕೃಷ್ಣರಾಜಪೇಟೆ
ಮಂಡ್ಯ ಜಿಲ್ಲೆ.

error: