April 24, 2024

Bhavana Tv

Its Your Channel

ಅಧಿಕಾರಿಗಳು ಬದ್ದತೆಯಿಂದ ಕೆಲಸ ಮಾಡಬೇಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಕೆ

ಕೆ.ಆರ್.ಪೇಟೆ: ತಾಲ್ಲೂಕು ಮಟ್ಟದ ಅಧಿಕಾರಿಗಳು ಬದ್ದತೆಯಿಂದ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಸಿದರು.

ಅವರು ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ರೇಷ್ಮೆ ಕೇಂದ್ರದಲ್ಲಿ ತಾಲ್ಲೂಕು ಹಂತದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ತಾಲ್ಲೂಕಿನಾದ್ಯಂತ ೯ರಿಂದ-೧೨ನೇ ತರಗತಿಗಳು ಪ್ರಾರಂಭವಾಗಿದ್ದು ಎಲ್ಲಾ ಬೋಧಕರಿಗೂ ಲಸಿಕೆ ಹಾಗೂ ಕೋವಿಡ್ ಪರೀಕ್ಷೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲಾಹಂತದ ಎಲ್ಲಾ ಮಕ್ಕಳಿಗೂ ಆಹಾರ ಪದಾರ್ಥಗಳನ್ನು ತಪ್ಪದೇ ವಿತರಿಸುವ ಕೆಲಸ ಮಾಡಬೇಕು.
ತರಗತಿಗಳಿಗೆ ಹಾಜರಾತಿ ಹೆಚ್ಚಿಸಬೇಕು. ಪಠ್ಯಪುಸ್ತಕ, ಉಚಿತ ಸಮವಸ್ತ್ರ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳು ಖಾಸಗಿಯವರ ಕಟ್ಟಡದಲ್ಲಿ
ನಡೆಯುತ್ತಿದ್ದು ಕೂಡಲೇ ಅಗತ್ಯ ಸ್ಥಳಾವಕಾಶ ನೀಡಿ ಕಟ್ಟಡ ಪ್ರಾರಂಭಿಸಲು ತಹಶೀಲ್ದಾರ್‌ರವರಿಗೆ ಸೂಚಿಸಿದರು.

ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿದ್ದು ನಗರ ಪ್ರದೇಶದಲ್ಲಿ ಕೇವಲ ೪೦% ನೀಡಲಾಗಿದೆ. ಮಂಡ್ಯ ಜಿಲ್ಲೆಯು ಲಸಿಕೆ ನೀಡುವುದರಲ್ಲಿ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದ್ದು ಪಟ್ಟಣ ವ್ಯಾಪ್ತಿಯ ಮನೆಮನೆಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕು. ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕುಡಿಯುವ
ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು ಪ್ರತಿಯೊಬ್ಬ ವ್ಯಕ್ತಿಗೂ ೫೫ ಲೀಟರ್ ಶುದ್ದ ಕುಡಿಯುವ ನೀರನ್ನು ಒದಗಿಸುವ ಕೆಲಸವನ್ನು ಚುರುಕಾಗಿ ನಿರ್ವಹಿಸಬೇಕು. ಪಶುವೈದ್ಯಾಧಿಕಾರಿಗಳ
ಕೊರತೆ ಇದ್ದು ಸಂಬoಧಿಸಿದ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಅರಣ್ಯ ಇಲಾಖೆಯಲ್ಲಿ ಸಸಿಗಳನ್ನು ನಿಗಧಿತ ಪ್ರಮಣದಲ್ಲಿ ನೆಟ್ಟಿಲ್ಲ ಎಂಬ ದೂರುಗಳು ಇದ್ದು ತಹಶೀಲ್ದಾರ್ ನೇತೃತ್ವದಲ್ಲಿ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು. ತಾಲ್ಲೂಕಿನಾದ್ಯಂತ ಶೇ.೪ರಷ್ಟು ಮಳೆಯ ಕೊರತೆಯಾಗಿದ್ದು ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಕೊರತೆಯಾಗದಂತೆ ಕ್ರಮವಹಿಸಬೇಕು. ಕೃಷಿ ಹೊಂಡ ಕಾಮಗಾರಿಯಲ್ಲಿ ಅಧಿಕಾರಿಗಳು ಗೋಲ್ ಮಾಲ್ ನಡೆಸಿ ಹಣ ಪಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದು ಈಗಾಗಲೇ ತೆಗೆದಿರುವ ಕೃಷಿ ಹೊಂಡಗಳನ್ನು ಮುಚ್ಚಿದ್ದಾರೆ ಹಣದಾಸೆಗೆ ಹೀಗೆ ಮಾಡುತ್ತಿದ್ದು ಅವುಗಳನ್ನು ತಪಾಸಣೆ ನಡೆಸುವಂತೆ ಸೂಚಿಸಿದರು.

ಕೆಡಿಪಿ ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭಾ ಅಧ್ಯಕ್ಷೆ ಮಹಾದೇವಿನಂಜುAಡ, ಅಪರ ಜಿಲ್ಲಾಧಿಕಾರಿ ಶೈಲಜ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಾಪಂ ಆಡಳಿತಾಧಿಕಾರಿ ರಾಜಮೂರ್ತಿ, ಜಿಪಂ.ಉಪಕಾರ್ಯದರ್ಶಿ ಧನಂಜಯ, ತಹಶೀಲ್ದಾರ್ ಎಂ.ಶಿವಮೂರ್ತಿ. ತಾಪಂ ಇಓ ಚಂದ್ರಶೇಖರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜವರೇಗೌಡ, ಡಿಹೆಚ್‌ಓ ಧನಂಜಯ, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ರಂಗೇಗೌಡ, ಜಿಲ್ಲಾ ಬಿಸಿಎಂ ಅಧಿಕಾರಿ ಸೋಮಶೇಖರ್, ನಾಗಮಂಗಲ ಉಪವಿಭಾಗದ ಅರಣ್ಯಸಂರಕ್ಷಣಾಧಿಕಾರಿ ಶಂಕರೇಗೌಡ, ಜಿಲ್ಲಾ ಪಂಚಾಯತಿ ಎಂಜಿನಿಯರಿAಗ್ ಉಪವಿಭಾಗದ ಎಇಇ ಲಕ್ಷ್ಮೀಕಾಂತ್, ಹೇಮಾವತಿ ಜಲಾಶಯ ಯೋಜನೆಯ ಎಇಇ ಗಳಾದ ರಂಗಸ್ವಾಮಿ, ವೀರಣ್ಣ, ಪೋಲಿಸ್ ಇನ್ಸ್ ಪೆಕ್ಟರ್ ಕೆ.ಆರ್.ನಿರಂಜನ, ಆಹಾರ ಶಿರಸ್ತೇದಾರ್ ಪೂರ್ಣಿಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: