March 29, 2024

Bhavana Tv

Its Your Channel

ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಾಗರಿಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಕೆಲಸ ಮಾಡಬೇಕು -ಸಚಿವ ಡಾ.ನಾರಾಯಣಗೌಡ

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

ಮಂಡ್ಯ: ಬಡವ ಬಲ್ಲಿದ ಎಂದು ಬೇಧ-ಭಾವ ಮಾಡದೇ ವಿದ್ಯಾರ್ಜನೆಗೆ ಶಾಲೆಗೆ ಬರುವ ಎಲ್ಲಾ ವರ್ಗಗಳ ಮಕ್ಕಳಿಗೂ ಜ್ಞಾನಾಮೃತವನ್ನು ಉಣಬಡಿಸಿ ಯೋಗ್ಯ ನಾಗರಿಕರನ್ನಾಗಿ ರೂಪಿಸಿ ಮುನ್ನಡೆಸುತ್ತಿರುವ ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಾಗರಿಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಕೆಲಸ ಮಾಡಬೇಕು ಎಂದು ರಾಜ್ಯದ ಯುವಜನ ಸಬಲೀಕರಣ, ಕ್ರೀಡೆ, ರೇಷ್ಮೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಮನವಿ ಮಾಡಿದರು.

ಅವರು ಪಟ್ಟಣದ ಕೆಪಿಎಸ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನೂತನವಾಗಿ ೩ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ೧೦ ಲಕ್ಷರೂ ವೆಚ್ಚದಲ್ಲಿ ಸಿದ್ಧಪಡಿಸಿರುವ ಅಟಲ್ ಟಿಂಕರಿAಗ್ ಲ್ಯಾಬ್, ೪ ಸುಸಜ್ಜಿತವಾದ ಸ್ಮಾರ್ಟ್ ಕ್ಲಾಸ್ ರೂಂಗಳು ಹಾಗೂ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ಪೂರ್ವ ಪ್ರಾಥಮಿಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಸತ್ಪçಜೆಗಳಾದ್ದರಿಂದ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮವಾದ ಶಿಕ್ಷಣದ ಸಂಸ್ಕಾರದ ಜ್ಞಾನವನ್ನು ಕೊಡಿಸಿ ಯೋಗ್ಯ ನಾಗರೀಕರನ್ನಾಗಿ ಸಜ್ಜುಗೊಳಿಸಬೇಕಾಗಿದೆ. ಅಸಮಾನತೆಯಿಂದ ಕೂಡಿರುವ ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯು ಶಿಕ್ಷಣದ ಜ್ಞಾನದ ಬೆಳಕಿನ ಧೀಶಕ್ತಿ ಆಗಿರುವುದರಿಂದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿಸಿ ನಮ್ಮ ಮಕ್ಕಳನ್ನೇ ಸಮಾಜಕ್ಕೆ ಆಸ್ತಿಯನ್ನಾಗಿ ಕೊಡುಗೆಯಾಗಿ ನೀಡಬೇಕಾಗಿದೆ. ಈ ದಿಕ್ಕಿನಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿದ್ದು ಒಂದು ಸುಸಜ್ಜಿತವಾದ ಶಾಲೆಗೆ ಬೇಕಾದ ಎಲ್ಲಾ ಬಗೆಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಉತ್ತಮವಾದ ಶೈಕ್ಷಣಿಕ ವಾತಾವರಣವನ್ನು ರೂಪಿಸಿ ಮಕ್ಕಳ ಗುಣಾತ್ಮಕ ಕಲಿಕೆ ಹಾಗೂ ಸೃಜನಶೀಲತೆಗೆ ಒತ್ತು ನೀಡಿದೆ ಎಂದು ಹೇಳಿದ ಸಚಿವ ನಾರಾಯಣಗೌಡ ಶತಮಾನದ ಶಾಲೆಯು ಪ್ರಸ್ತುತ ಕೆಪಿಎಸ್ ಸ್ಕೂಲ್ ಆಗಿ ಬದಲಾಗಿದ್ದು ನರ್ಸರಿ ಸೇರಿದಂತೆ ಪೂರ್ವ ಪ್ರಾಥಮಿಕ ಶಾಲೆಯಿಂದ ಹಿಡಿದು ದ್ವಿತೀಯ ಪಿಯುಸಿವರೆಗೆ ಎಲ್ಲಾ ಬಗೆಯ ಶಿಕ್ಷಣವನ್ನು ಒಂದೇ ವಿಶಾಲವಾದ ಶಾಲಾ ಸಂಕೀರ್ಣದಲ್ಲಿ ಪಡೆಯುವಂತೆ ಅತ್ಯುತ್ತಮವಾಗಿ ಸಜ್ಜುಗೊಳಿಸಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶ್ರದ್ಧಾಭಕ್ತಿಯಿಂದ ವ್ಯಾಸಂಗ ಮಾಡುವ ಜೊತೆಗೆ ಅತ್ಯನ್ನತವಾದ ಅಂಕಗಳನ್ನು ಗಳಿಸಿ ಖಾಸಗಿ ಶಾಲೆಗಳು ಹಾಗೂ ಕಾನ್ವೆಂಟ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೆಡ್ಡು ಹೊಡೆಯುವಂತೆ ಶಿಕ್ಷಣ ಪಡೆಯಬೇಕು.

ಪೋಷಕರು ಕಾನ್ವೆಂಟ್ ವ್ಯಾಮೋಹದಿಂದ ಹೊರಬಂದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸೇರಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚದಂತೆ ನೋಡಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಶಾಲಾ ಸಮವಸ್ತ್ರ, ಶೂಗಳು, ನೋಟ್‌ಬುಕ್, ಪಠ್ಯಪುಸ್ತಕ ಸೇರಿದಂತೆ ಮಧ್ಯಾಹ್ನದ ಬಿಸಿಯೂಟವನ್ನು ಪಡೆದುಕೊಂಡು ಸರ್ವಶ್ರೇಷ್ಠ ಸಾಧನೆ ಮಾಡುವಂತೆ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು ಎಂದು ಸಚಿವ ನಾರಾಯಣಗೌಡ ಕರೆ ನೀಡಿದರು.

ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಹಾಗೂ ೧೭ ಶಾಲಾ ಕೊಠಡಿಗಳ ಭೂಮಿಪೂಜಾ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜವರೇಗೌಡ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಕೆಪಿಎಸ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಾ.ಡಿ.ಬಿ.ಸತ್ಯ, ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ಚಂದಗಾಲು ಶಿವಣ್ಣ, ಡಾ.ಎಸ್.ಕೃಷ್ಣಮೂರ್ತಿ, ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ, ಸದಸ್ಯರಾದ ಹೆಚ್.ಆರ್.ಲೋಕೇಶ್, ಶಾಮಿಯಾನತಿಮ್ಮೇಗೌಡ, ಶತಮಾನದ ಶಾಲೆಯ ಮುಖ್ಯಶಿಕ್ಷಕ ರಾಚಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ,ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್.ಧರ್ಮಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಗೌರವಾಧ್ಯಕ್ಷ ಪದ್ಮೇಶ್, ಉಪನ್ಯಾಸಕರಾದ ಪುಲಿಗೆರಯ್ಯ, ಸುರೇಶ್, ರವೀಂದ್ರ, ಅನಿತಾ, ಮೋಹನಕುಮಾರಿ, ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್, ಬಿಜೆಪಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾರಮೇಶ್, ಆಸರೆ ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷ ಹೆಚ್.ಬಿ.ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಪದ್ಮಾವತಿಪುಟ್ಟಸ್ವಾಮಿ, ಶುಭಾಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

error: