April 23, 2024

Bhavana Tv

Its Your Channel

ಪೋಲಿಸ್ ಠಾಣೆಯ ಆವರಣದಲ್ಲಿ ಬಾಲ್ಯವಿವಾಹ ನಿಷೇಧ, ಲೈಂಗಿಕ ದೌರ್ಜನ್ಯ ತಡೆ ಹಾಗೂ ಅಪರಾಧಗಳ ತಡೆ ಕುರಿತು ಜಾಗೃತಿ ಕಾರ್ಯಕ್ರಮ

ಕೆ.ಆರ್.ಪೇಟೆ: ಕೆ.ಆರ್.ಪೇಟೆ ಪಟ್ಟಣದ ಪಟ್ಟಣ ಪೋಲಿಸ್ ಠಾಣೆಯ ಆವರಣದಲ್ಲಿ ಬಾಲ್ಯವಿವಾಹ ನಿಷೇಧ, ಲೈಂಗಿಕ ದೌರ್ಜನ್ಯ ತಡೆ ಹಾಗೂ ಅಪರಾಧಗಳ ತಡೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು ..

ಪ್ರೊಬೆಷನರಿ ಡಿವೈಎಸ್ ಪಿ ಚೈತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು, ಬಾಲ್ಯ ವಿವಾಹ ಸೇರಿದಂತೆ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರ ಸಹಕಾರವು ಅತ್ಯಗತ್ಯವಾಗಿ ಬೇಕಾಗಿದೆ. ಜನರು ಸಮಾಜ ಸೇರಿದಂತೆ ಗ್ರಾಮಗಳಲ್ಲಿ ಶಾಂತಿ ಕಾಪಾಡಲು, ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಚೈತ್ರಾ ಮನವಿ ಮಾಡಿದರು..

ಕೆ.ಆರ್.ಪೇಟೆ ಟೌನ್ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಎಂ.ಕೆ.ದೀಪಕ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಕಾರ್ಯಕ್ರಮದಲ್ಲಿ ಮಾತನಾಡಿ ಸಾರ್ವಜನಿಕರು ಮನೆಯಿಂದ ಹೊರಗೆ ಹೋಗುವಾಗ ಪೋಲಿಸರ ಗಮನಕ್ಕೆ ತಂದು ಹೊರಹೋಗಬೇಕು. ಶಾಲೆ ಕಾಲೇಜುಗಳು, ದೇವಸ್ಥಾನಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಈ ಸರ್ವಲೆನ್ಸ್ ಕ್ಯಾಮರಾವನ್ನು ಅಳವಡಿಸಿಕೊಂಡು ಕಳ್ಳರ ಬಂಧನಕ್ಕೆ, ಕಳ್ಳತನ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು..
ಈ ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಪಟ್ಟಣದ ಪುರಪ್ರಮುಖರು, ವರ್ತಕರು ಹಾಗೂ ಜನಪ್ರತಿನಿಧಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ, ಮಂಡ್ಯ

error: