April 20, 2024

Bhavana Tv

Its Your Channel

ಡಾ.ಬಾಲಗಂಗಾಧರನಾಥಸ್ವಾಮೀಜಿರವರ ೪೭ನೇ ಪಟ್ಟಾಭಿಷೇಕದ ಸಂಸ್ಮರಣೆಯ ಅಂಗವಾಗಿ ಶ್ರೀಗಳ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಕೆ

ಕೆ.ಆರ್.ಪೇಟೆ: ಯುಗಯೋಗಿ, ಅಕ್ಷಯಸಂತ, ಪದ್ಮವಿಭೂಷಣ, ಭೈರವೈಕ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಬಾಲಗಂಗಾಧರನಾಥಸ್ವಾಮೀಜಿ ಅವರ ೪೭ನೇ ಪಟ್ಟಾಭಿಷೇಕದ ಸಂಸ್ಮರಣೆಯ ಅಂಗವಾಗಿ ಶ್ರೀಗಳ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ, ಲೋಕಕಲ್ಯಾಣಕ್ಕಾಗಿ ಗಣಪತಿ ಹೋಮವನ್ನು ನಡೆಸಿ ರಂಗಭೂಮಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿರುವ ಕಲಾವಿದರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿ ಪ್ರಶಸ್ತಿಪತ್ರವನ್ನು ನೀಡಿ ಅಭಿನಂದಿಸಲಾಯಿತು.
ಆದಿಚುAಚನಗಿರಿ ಮಹಾಸಂಸ್ಥಾನ ಮಠದ ತಾಲೂಕಿನ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡ ಅವರ ನೇತೃತ್ವದಲ್ಲಿ ಪಟ್ಟಣದ ಬಿಜಿಎಸ್ ವಿಜ್ಞಾನ ಶಾಲೆಯ ಆವರಣದಲ್ಲಿರುವ ಶ್ರೀಗಳ ಪುತ್ಥಳಿಗೆ ವಿಶೇಷ ಪೂಜೆ ಪುರಸ್ಕಾರಗಳು ಶ್ರದ್ಧಾಭಕ್ತಿಯಿಂದ ನಡೆದವು.
ನೆರೆದಿದ್ದ ವಿದ್ಯಾರ್ಥಿಗಳು, ಭಕ್ತವೃಂಧ ಹಾಗೂ ತಾಲೂಕಿನ ರಂಗಭೂಮಿ ಮತ್ತು ಜನಪದ ಕಲಾವಿದರನ್ನು ಉದ್ಧೇಶಿಸಿ ಮಾತನಾಡಿದ ಡಾ.ಜೆ.ಎನ್.ರಾಮಕೃಷ್ಣೇಗೌಡ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವು ಉಚಿತವಾಗಿ
ದೊರೆಯಬೇಕೆಂಬ ಸದಾಶಯದಿಂದ ರಾಜ್ಯದಾಧ್ಯಂತ ೫೦೦ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಆರಂಬಿಸಿ ವಿಜ್ಞಾನ ವಿಭಾಗಗಳನ್ನು ತೆರೆದು ರೈತರ ಮಕ್ಕಳೂ ಕೂಡ ಎಂಜಿನಿಯರಿoಗ್ ಮತ್ತು ವೈದ್ಯಕೀಯ ಶಿಕ್ಷಣವನ್ನು ಪಡೆಯುವಂತೆ ಮಾಡಿದ್ದಲ್ಲದೇ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆಯ ಜ್ಞಾನದ ಬೆಳಕಿನ ಶಕ್ತಿಯನ್ನು ನೀಡಿ ತಮ್ಮ ಜೀವನದಲ್ಲಿ ಸರ್ವಶ್ರೇಷ್ಠ ಸಾಧನೆಯನ್ನು ಮಾಡುವಂತೆ ಮಾಡಿದ್ದಾರೆ. ಬರಡಾಗಿದ್ದ ಆದಿಚುಂಚನಗಿರಿ ಕ್ಷೇತ್ರವನ್ನು ಸುವರ್ಣಗಿರಿಯನ್ನಾಗಿಸಿ ಶ್ರೀಮಠಧ ಕೀರ್ತಿಯು ವಿಶ್ವದಾಧ್ಯಂತ ಬೆಳಗುವಂತೆ ಮಾಡಿದ್ದಾರೆ. ಶ್ರೀ ಬಾಲಗಂಗಾಧರನಾಥ
ಶ್ರೀಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾಗಿ ಪಟ್ಟಾಭಿಷೇಕವಾಗಿ ಇಂದಿಗೆ ೪೭ ವರ್ಷಗಳು ಸಂಪೂರ್ಣಗೊAಡಿರುವ ಹಿನ್ನೆಲೆಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿರುವ ಗಣ್ಯರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಶ್ರೀಗಳ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸುವ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ರಾಮಕೃಷ್ಣೇಗೌಡ ಮನವಿ ಮಾಡಿದರು.

ಪಟ್ಟಾಭಿಷೇಕ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅಕ್ಷರ, ಆಶ್ರಯ ಹಾಗೂ ಗ್ರಾಮೀಣ ಜನರಿಗೆ ಆರೋಗ್ಯ ಭಾಗ್ಯವನ್ನು ನೀಡಿದ ಕಾಮಧೇನು- ಕಲ್ಪವೃಕ್ಷದಂತಿದ್ದ ಶ್ರೀಗಳ ಆದರ್ಶ ಗುಣಗಳು ಹಾಗೂ ಸಾಮಾಜಿಕ ಬದ್ಧತೆಯು ಎಲ್ಲರಿಗೂ ಮಾದರಿಯಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಖ್ಯಾತಿಯನ್ನು ವಿಶ್ವಮಟ್ಟದಲ್ಲಿ ಬೆಳಗಿದ ತ್ರಿವಿಧ ದಾಸೋಹಿಗಳಾದ ಬಾಲಗಂಗಾಧರನಾಥಶ್ರೀಗಳ
ದೂರದೃಷ್ಠಿತ್ವ ಹಾಗೂ ಸಾಮಾಜಿಕ ಬದ್ಧತೆಯನ್ನು ಎಲ್ಲರೂ ಪಾಲಿಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಪಿಎಲ್‌ಡಿ ಬ್ಯಾಂಕಿನ ಮಾಜಿಅಧ್ಯಕ್ಷ ಬಿ.ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೇಲದಕೆರೆ ಪಾಪೇಗೌಡ, ಹಿರಿಯ ವಕೀಲರಾದ ಎಸ್.ಸಿ.ವಿಜಯಕುಮಾರ್, ಚಟ್ಟಂಗೆರೆ ಬಿ.ನಾಗೇಶ್,
ಎನ್.ಆರ್.ರವಿಶಂಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಅಗ್ರಹಾರಬಾಚಹಳ್ಳಿಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ, ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದೇಗೌಡ, ಹೇಮಗಿರಿಯ ಬಿಜಿಎಸ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಪವಿತ್ರಾ, ಕೆ.ಆರ್.ಪೇಟೆಯ ಆದಿಚುಂಚನಗಿರಿ ಶಾಲೆಯ ಪ್ರಾಂಶುಪಾಲೆ ಅರ್ಪಿತಾ, ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ರಾಜಾಸ್ಥಾನ್ ಸೇವಾ ಸಮಿತಿಯ ಸಂಚಾಲಕ ರಮೇಶ್‌ಚೌಧರಿ, ಯುವಮುಖಂಡ ಬಳ್ಳೇಕೆರೆ ಪ್ರವೀಣ್ ಮತ್ತಿತರರು ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ.

error: