April 26, 2024

Bhavana Tv

Its Your Channel

ಮಾಕವಳ್ಳಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಕೆ.ಆರ್.ಪೇಟೆ ತಾಲ್ಲೂಕಿನ ಮಾಕವಳ್ಳಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದ ಅಂಗವಾಗಿ ೨೦೦ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳ ಆದೇಶದ ಮಂಜೂರಾತಿ ಪತ್ರಗಳ ವಿತರಣೆ ಮಾಡಿದ ತಾಲ್ಲೂಕು ಆಡಳಿತ.. ಯಶಸ್ವಿಯಾಗಿ ನಡೆದ ಜನಸ್ಪಂದನಾ ಸಭೆ..ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿ ..

ಕೆ.ಆರ್.ಪೇಟೆ ತಾಲ್ಲೂಕಿನ ಮಾಕವಳ್ಳಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಹಿಡಿಯಲಾಯಿತು…

ಮಾಕವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವೀಣಾಅಶೋಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ, ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಆಯುಷ್ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯ ವತಿಯಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ತಹಶೀಲ್ದಾರ್.ಎಂ.ಶಿವಮೂರ್ತಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಿಡಿಪಿಓ ದೇವಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್, ತೋಟಗಾರಿಕೆ ಇಲಾಖೆಯ ಡಾ.ಜಯರಾಂ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ಇಲಾಖೆಗಳ ವತಿಯಿಂದ ದೊರೆಯಬಹುದಾದ ಸಾಧನ, ಸಲಕರಣೆಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಾಕವಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೈಲಜಾ ಗ್ರಾಮ ಪಂಚಾಯತಿ ವತಿಯಿಂದ ದೊರೆಯುವ ಸೌಲಭ್ಯಗಳು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸೌಲಭ್ಯಗಳನ್ನು ಕುರಿತು ಮಾಹಿತಿ ನೀಡಿ ರಾಜೀವಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ನಿವೇಶನಗಳನ್ನು ವಿತರಿಸಲು ಹೆಗ್ಗಡಹಳ್ಳಿ, ಸಾಧುಗೋನಹಳ್ಳಿ ಮತ್ತು ಕರೋಠಿ ಗ್ರಾಮದಲ್ಲಿ ಅಗತ್ಯವಾದ ಭೂಮಿಯನ್ನು ದೊರಕಿಸಿಕೊಡುವಂತೆ ಮನವಿ ಮಾಡಿದರು..

ಕಸಬಾ ಹೋಬಳಿಯ ರಾಜಶ್ವನಿರೀಕ್ಷಕಿ ಚಂದ್ರಕಲಾಪ್ರಕಾಶ್ ಮತ್ತು ವಿವಿಧ ಗ್ರಾಮ ಲೆಕ್ಕಾಧಿಕಾರಿಗಳ ಅರಿವಿನ ಜಾಗೃತಿಯ ಫಲವಾಗಿ ಮಾಕವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಂಟು ಗ್ರಾಮಗಳಿಂದ ಐನೂರಕ್ಕೂ ಹೆಚ್ಚು ಜನರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಂದಾಯ ಇಲಾಖೆಯ ವತಿಯಿಂದ ೨೦೦ಕ್ಕೂ ಹೆಚ್ಚಿನ ಸಂಧ್ಯಾಸುರಕ್ಷಾ, ವಿಧವಾವೇತನ, ವಿಶೇಷಚೇತನರ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ವಿತರಿವಿಶೇಷಚೇತನರ
ಮಾಕವಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಜನಸ್ಪಂದನಾ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆಯ ವತಿಯಿಂದ ಸ್ಟಾಲ್ ಗಳನ್ನು ಸ್ಥಾಪಿಸಿ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಮಾಡಿಸಿ ಆರೋಗ್ಯ ಸಂವರ್ಧನಾ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು. ಕೋವಿಡ್ ತಡೆ ಲಸಿಕೆಯನ್ನು ಹಾಕಿಸಿಕೊಳ್ಳದ ಜನರಿಗೆ ಲಸಿಕೆಯನ್ನು ಹಾಕಲಾಯಿತು.

ಸ್ಥಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿತ್ತು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಂಜುನಾಥ್, ಬಂಡಿಹೊಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಡ್ಡರಹಳ್ಳಿ ಮಹದೇವೇಗೌಡ, ಸ್ಥಳೀಯ ಮುಖಂಡರಾದ ದೇವರಸೇಗೌಡ, ಅನಿಲ್, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಕಿಕ್ಕೇರಿ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಜಗಧೀಶ್ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: