April 20, 2024

Bhavana Tv

Its Your Channel

ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ

ಕೃಷ್ಣರಾಜಪೇಟೆ: ಕನ್ನಡಿಗರಾದ ನಾವು ನಮ್ಮ ನಾಡು ನುಡಿ, ಸಂಸ್ಕೃತಿ ಹಾಗೂ ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಂಡು ನವೆಂಬರ್ ಕನ್ನಡಿಗರಾಗದೇ ಕನ್ನಡ ಭಾಷೆಯನ್ನು ಪ್ರೀತಿಸಿ ಗೌರವಿಸಿ ನೈಜ ಕನ್ನಡಿಗರಾಗಿ ಹೊರಹೊಮ್ಮಬೇಕು ಎಂದು ಮಂಡ್ಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ್ ಹೇಳಿದರು ..

ಅವರು ಇಂದು ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಗೀತಗಾಯನ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು…

ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಭವ್ಯವಾದ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ಹೊಂದಿದ್ದರೂ ಕನ್ನಡಿಗರ ನಿರಭಿಮಾನದಿಂದ ಇಂದು ಕನ್ನಡದ ನೆಲದಲ್ಲಿಯೇ ಸಂಕಷ್ಠಕ್ಕೆ ಸಿಲುಕಿದೆ. ಆದ್ದರಿಂದ ಯುವಜನರು ಹಾಗೂ ವಿದ್ಯಾರ್ಥಿಗಳು ಕನ್ನಡ ನಾಡುನುಡಿ ಹಾಗೂ ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳುವ ಜೊತೆಗೆ ಕನ್ನಡ ಭಾಷೆ ಗೊತ್ತಿಲ್ಲದ ಅನ್ಯ ಭಾಷಿಕರಿಗೆ ಕನ್ನಡವನ್ನು ಕಲಿಸಿಕೊಡುವ ಕೆಲಸವನ್ನು ಅಭಿಮಾನದಿಂದ ಮಾಡಬೇಕು ಎಂದು ಮನವಿ ಮಾಡಿದ ಉದಯಕುಮಾರ್ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಎಲ್ಲಾ ಕಾಲೇಜುಗಳಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಕನ್ನಡಕ್ಕಾಗಿ ನಾವು ಅಭಿಯಾನವನ್ನು ಒಂದು ವಾರಗಳ ಕಾಲ ಆಚರಿಸಲಾಗುತ್ತಿದೆ. ಶ್ರೀಮಂತ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸಲು ಗೀತಗಾಯನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಉದಯಕುಮಾರ್ ವಿವರಿಸಿದರು…

ಕಾಲೇಜಿನ ಪ್ರಾಂಶುಪಾಲ ಲಿಂಗಣ್ಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡದ ನೆಲ, ಜಲ ಹಾಗೂ ಭಾಷೆಯ ಬಗ್ಗೆ ಸಂಕಷ್ಠವು ಎದುರಾದ ಸಂದರ್ಭದಲ್ಲಿ ಕನ್ನಡಿಗರು ಯಾವುದೇ ಹೋರಾಟಕ್ಕೆ ಸದಾ ಸಿದ್ಧರಿರಬೇಕು ಎಂದು ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ಮಾತನಾಡಿದರು.

ಉಪನ್ಯಾಸಕರಾದ ಶಿವರಾಮು, ರಮೇಶ್, ವೆಂಕಟರಾಮು, ಚಂದ್ರಶೇಖರ್, ಶಿಶಿರ, ಅನುರಾಧ, ಸಂಗೀತ, ಪ್ರೇಮಕುಮಾರಿ, ಮಹಾಲಕ್ಷ್ಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಡ್ಯದ ಬಸವರಾಜು ಮತ್ತು ತಂಡದ ಗಾಯಕರು ಕನ್ನಡ ಜಾಗೃತಿ ಗೀತೆಗಳು ಹಾಗೂ ಭಾವಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: