May 19, 2024

Bhavana Tv

Its Your Channel

ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಯತೀಶ್‌ರವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದುಕೊರತೆ ನಿವಾರಣಾ ಸಭೆ

ಕೆ.ಆರ್.ಪೇಟೆ:- ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಾದ ಯತೀಶ್ ಅವರ ಅಧ್ಯಕ್ಷತೆಯಲ್ಲಿ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ನಿವಾರಣಾ ಸಭೆಯು ನಡೆಯಿತು

ಜನಸ್ನೇಹಿ ಪೋಲಿಸ್ ಆಡಳಿತ ನೀಡಲು ಸಾರ್ವಜನಿಕರು ಪೋಲಿಸರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಎಸ್.ಪಿ ಯತೀಶ್.. ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗತರುವ ವಿದ್ವಂಸಕ ಶಕ್ತಿಗಳು ಹಾಗೂ ಕಿಡಿಗೇಡಿಗಳ ವಿರುದ್ಧ ಪೋಲಿಸರಿಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ ಅವರು ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಶಾಂತಿಸಮಿತಿ ಸಭೆ ನಡೆಸುವುದು, ಪಟ್ಟಣದಲ್ಲಿ ವಾಹನಗಳ ದಟ್ಟಣೆಯನ್ನು ನಿಯಂತ್ರಿಸಲು ಕ್ರಮ ವಹಿಸುವುದು, ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಸೇರಿದಂತೆ ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ ಸಂಚಾರಿ ಪೊಲೀಸ್ ಠಾಣೆ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.. ಅತ್ಯಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕುಂದುಕೊರತೆ ನಿವಾರಣಾ ಸಭೆಯಲ್ಲಿ ಭಾಗವಹಿಸಿ ತಮಗೆ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಎಸ್ ಪಿ ಯತೀಶ್ ಹೇಳಿದರು..

ದಲಿತ ಮುಖಂಡರಾದ ಬಸ್ತಿರಂಗಪ್ಪ, ಸಿಂದಘಟ್ಟ ಸೋಮಸುಂದರ್, ಅಂಚನಹಳ್ಳಿ ನಿಂಗಯ್ಯ, ಸುರೇಶ್ ಹರಿಜನ, ಸಿಂಧಘಟ್ಟ ಸೋಮಸುಂದರ್, ಬಣ್ಣದ ದೇವರಾಜು, ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಕೆಂಪೂಗೌಡ, ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ರೈತಮುಖಂಡ ಪಿ.ಬಿ ಮಂಚನಹಳ್ಳಿ ನಾಗಣ್ಣಗೌಡ, ಛಲವಾಧಿ ಮಹಾಸಭಾದ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಂ, ಮೂಡನಹಳ್ಳಿ ಮನು, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಮೇಶ್ ಮತ್ತಿತರರು ಸಭೆಯಲ್ಲಿ ಮಾತನಾಡಿದರು..
ಜಿಲ್ಲಾ ಪೋಲಿಸ್ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಧನಂಜಯ, ನಾಗಮಂಗಲ ಡಿವೈಎಸ್ ಪಿ ನವೀನ್ ಕುಮಾರ್, ಪೋಲಿಸ್ ಇನ್ಸ್ ಪೆಕ್ಟರ್ ಗಳಾದ ಎಂ.ಕೆ.ದೀಪಕ್, ಕೆ.ಆರ್.ನಿರಂಜನ, ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: