January 25, 2022

Bhavana Tv

Its Your Channel

ಗ್ರಾಮಲೆಕ್ಕಾಧಿಕಾರಿ ವೆಂಕಟಸ್ವಾಮಿಯವರ ಮೇಲೆ ಮರಳು ಮಾಫಿಯಾ ಕುಳಗಳ ಹಲ್ಲೆ ಖಂಡಿಸಿ ವಿವಿಧ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಂದ ಪ್ರತಿಭಟನೆ

ಕೆ.ಆರ್.ಪೇಟೆ: ಬಳ್ಳಾರಿ ಜಿಲ್ಲೆಯ ತೊಳಮಾಮಿಡಿ ಗ್ರಾಮದಲ್ಲಿ ಮರಳು ಮಾಫಿಯಾ ಕುಳಗಳು ಗ್ರಾಮಲೆಕ್ಕಾಧಿಕಾರಿ ವೆಂಕಟಸ್ವಾಮಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಮನೆಗೆ ನುಗ್ಗಿ ಅವರ ಪತ್ನಿ ಮತ್ತು ಕುಟುಂಬದ ಸದಸ್ಯರ ಮೇಲೆ ದಾಂಧಲೆ ನಡೆಸಿದ್ದಲ್ಲದೇ ರಾಜಶ್ವನಿರೀಕ್ಷಕರ ಮೇಲೂ ಗಲಾಟೆ ನಡೆಸಿ ಹಲ್ಲೆ ಮಾಡಿರುವುದನ್ನು ಖಂಡಿಸಿ ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘ, ಕಂದಾಯ ಇಲಾಖಾ ನೌಕರರ ಸಂಘ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇಂದು ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸಿದರು ..

ತಹಶೀಲ್ದಾರ್ ಎಂ. ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ ಮತ್ತು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ಮಾತನಾಡಿ ಬಳ್ಳಾರಿ ತಾಲ್ಲೂಕಿನ ತೊಳಮಾಮಿಡಿ ವೃತ್ತದ ಗ್ರಾಮಲೆಕ್ಕಾಧಿಕಾರಿಯಾದ ವೆಂಕಟಸ್ವಾಮಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರಾಕ್ಟರ್ ಅನ್ನು ತಡೆದ ಹಿನ್ನೆಲೆಯಲ್ಲಿ ಮರಳು ಮಾಫಿಯಾ ಕುಳಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೇ ಕುಟುಂಬದ ಸದಸ್ಯರು ಹಾಗೂ ಗ್ರಾಮಲೆಕ್ಕಾಧಿಕಾರಿಗಳ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋದ ರಾಜಶ್ವನಿರೀಕ್ಷಕರ ಮೇಲೂ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಮರಳು ಮಾಫಿಯಾ ಕುಳಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಗ್ರಾಮಲೆಕ್ಕಾಧಿಕಾರಿ ವೆಂಕಟಸ್ವಾಮಿ ಹಾಗೂ ಕುಟುಂಬದವರಿಗೆ ರಕ್ಷಣೆ ನೀಡಬೇಕು ಎಂದು ಶಿವರಾಮೇಗೌಡ ಆಗ್ರಹಿಸಿದರು.

ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದ ತಹಶೀಲ್ದಾರ್ ಶಿವಮೂರ್ತಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು. ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಹಿರಿಯಣ್ಣ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪಿ.ಜೆ.ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಮತ್ತು ಕಂದಾಯ ಇಲಾಖೆಯ ನೌಕರರು ಹಾಗೂ ಸಿಬ್ಬಂಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ.

error: