April 28, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಯಶಸ್ವಿಯಾಗಿ ನಡೆದ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ.

ಕೆ.ಆರ್.ಪೇಟೆ :- ಕೆ.ಆರ್.ಪೇಟೆಯಲ್ಲಿ ಯಶಸ್ವಿಯಾಗಿ ನಡೆದ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ.ಬಿಜೆಪಿ ಜನವಿರೋಧಿ ಆಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಮಂಡ್ಯದಲ್ಲಿ ದಿನೇಶ್ ಗೂಳಿಗೌಡ ಹಾಗೂ ಮೈಸೂರಿನಲ್ಲಿ ಡಾ.ತಿಮ್ಮಯ್ಯ ಗೆಲುವು ನಿಶ್ಚಿತ.-ಕೆಪಿಸಿಸಿ ಕಾರ್ಯದರ್ಶಿ ಕೆ.ಮಹಮದ್ ಅಕ್ಬರ್ ಅಲೀಮ್ ಭವಿಷ್ಯ …

ರಾಜ್ಯದಲ್ಲಿ ಕಾಂಗ್ರೆಸ್ ಜೈತ್ರಯಾತ್ರೆಯು ಆರಂಭವಾಗಲಿದ್ದು ಬಿಜೆಪಿ ಜನವಿರೋಧಿ ಆಡಳಿತದಿಂದ ಬೇಸುತ್ತಿರುವ ಸ್ಥಳೀಯ ಸಂಸ್ಥೆಗಳ ಸದಸ್ಯರು ಕನಿಷ್ಠ ೧೫ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ ತೊಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರ ಕೆಪಿಸಿಸಿ ಕಾರ್ಯದರ್ಶಿ ಕೆ.ಮಹಮದ್ ಅಕ್ಬರ್ ಅಲೀಮ್ ಮಂಡ್ಯ ಮತ್ತು ಮೈಸೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ದಿನೇಶ್ ಗೂಳಿಗೌಡ ಮತ್ತು ಡಾ.ತಿಮ್ಮಯ್ಯ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು..

ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಜನವಿರೋಧಿ ಹಾಗೂ ರೈತವಿರೋಧಿಯಾಗಿರುವ ಬಿಜೆಪಿ ಪಕ್ಷದ ವಿರುದ್ಧ ದೇಶಾಧ್ಯಂತ ಜನಾಕ್ರೋಶವು ಕಂಡು ಬರುತ್ತಿದೆ. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಲಿದ್ದಾರೆ. ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯು ಎದುರಾದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಲಕ್ಷಾಂತರ ಜನರ ತ್ಯಾಗ ಬಲಿದಾನದಿಂದ ಸ್ಥಾಪಿತವಾಗಿರುವ ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿದೆ. ಆದ್ದರಿಂದ ಕಾಂಗ್ರೆಸ್ ಪರವಾದ ಜನಾಭಿಪ್ರಾಯವು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯ ಹಾಗೂ ದೇಶದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ತಮ್ಮನ್ನು ಅರ್ಪಿಸಿಕೊಳ್ಳಬೇಕು ಎಂದು ಕೆ.ಮಹಮದ್ ಅಕ್ಬರ್ ಅಲೀಮ್ ಕರೆ ನೀಡಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ೨೫ ಸಾವಿರಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಸದಸ್ಯತ್ವ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ ಅಲೀಮ್ ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ತಾಲ್ಲೂಕು ಯುವಕಾಂಗ್ರೆಸ್ ಅಧ್ಯಕ್ಷ ಚೇತನಕುಮಾರ್, ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಸುಗುಣರಮೇಶ್ ಖಮ್ಮರ್ ಬೇಗಂಸಲ್ಲೂ, ಸೌಭಾಗ್ಯ ಉಮೇಶ್, ಮುಖಂಡರಾದ ಕುಮಾರ್, ರಾಜಯ್ಯ, ಬಸ್ತಿರಂಗಪ್ಪ, ಚೇತನಾಮಹೇಶ್, ನವೀದ್ ಅಹಮದ್, ಅಲ್ತಾಫ್, ಜಮೀಲ್ ಅಹಮದ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ.

error: