April 27, 2024

Bhavana Tv

Its Your Channel

ವಿಧಾನ ಪರಿಷತ್ ಚುನಾವಣೆ; ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಕಳಪೆ ಸಾಧನೆಗೆ ಮಾಜಿ ಸಿಎಂ ಯಡಿಯೂರಪ್ಪ ತೀವ್ರ ಬೇಸರ

ಕೆ.ಆರ್.ಪೇಟೆ ಮೈಸೂರಿನಿಂದ ಶಿವಮೊಗ್ಗಕ್ಕೆ ಹೋಗುವ ಮಾರ್ಗದ ಮಧ್ಯದಲ್ಲಿ ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ತಾಲ್ಲೂಕಿನ ಸುಪುತ್ರ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮೂಢಾ ಆಧ್ಯಕ್ಷ ಕೆ.ಶ್ರೀನಿವಾಸ್ ನೇತೃತ್ವದಲ್ಲಿ ಹೃದಯಸ್ಪರ್ಶಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…

ಕ್ಷೇತ್ರದ ಶಾಸಕರಾದ ಸಚಿವ ನಾರಾಯಣಗೌಡ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ತಾಲ್ಲೂಕಿನ ರೈತಾಪಿ ವರ್ಗದ ಕಲ್ಯಾಣಕ್ಕಾಗಿ ಹಲವಾರು ಏತ ನೀರಾವರಿ ಮತ್ತು ಕುಡಿಯುವ ನೀರು ಸರಬರಾಜು ಯೋಜನೆಗಳು ಮಂಜೂರಾಗಿವೆ. ಸಧ್ಯದಲ್ಲಿಯೇ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸಲು ಗಮನ ಹರಿಸುತ್ತೇನೆ ಎಂದು ತಿಳಿಸಿದ ಯಡಿಯೂರಪ್ಪ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಬೂಕಹಳ್ಳಿ ಮಂಜು ಕೇವಲ ೫೦ ಮತ ಪಡೆದು ಕಳಪೆ ಸಾಧನೆ ಮಾಡಿರುವ ಬಗ್ಗೆ ವರದಿ ಪಡೆದಿದ್ದೇನೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಸಚಿವ ನಾರಾಯಣಗೌಡ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಬೂಕನಕೆರೆ ಮಧುಸೂದನ್, ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಮಂಡ್ಯ ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಆರ್.ಜಗಧೀಶ್, ವಕೀಲ ಪುರಮಂಜುನಾಥ್, ಮುಖಂಡರಾದ ಕೆ.ವಿನೋದ್, ಭಾರತೀಪುರ ಪುಟ್ಟಣ್ಣ, ಸಾರಂಗಿ ಮಂಜುನಾಥಗೌಡ, ಶೀಳನೆರೆ ಭರತ್ ಕುಮಾರ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ

error: