May 4, 2024

Bhavana Tv

Its Your Channel

ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಸ್ತೆ ತಡೆ, ಎಂಇಎಸ್ ಸಂಘಟನೆ ನಿಷೇಧಿಸಲು ಆಗ್ರಹ

ಕೃಷ್ಣರಾಜಪೇಟೆ : ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಸ್ತೆ ತಡೆ..ಎಂಇಎಸ್ ಸಂಘಟನೆ ನಿಷೇಧಿಸಲು ಆಗ್ರಹ..ಕನ್ನಡ ವಿರೋಧಿಗಳನ್ನು ಗಡೀಪಾರು ಮಾಡಿ ಉಗ್ರವಾದ ಶಿಕ್ಷೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿ.ಎಲ್.ದೇವರಾಜು ಒತ್ತಾಯ.

ಬೆಳಗಾವಿಯ ಪೀರನವಾಡಿಯಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ವೀರಸೇನಾನಿ ಸಂಗೊಳ್ಳಿರಾಯಣ್ಣ ಅವರ ಪುತ್ಥಳಿಯನ್ನು ಒಡೆದುಹಾಕಿ ವಿಕೃತಿ ಮೆರೆದಿರುವ ಎಂಇಎಸ್ ಪುಂಡರಿಗೆ ಉಗ್ರ ಶಿಕ್ಷೆಯನ್ನು ವಿಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು, ದಲಿತ ಹಾಗೂ ರೈತ ಸಂಘಟನೆಗಳು, ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಹಾಗೂ ತಾಲ್ಲೂಕು ಕುರುಬ ಸಮಾಜದ ಮುಖಂಡರು ಕೆ.ಆರ್.ಪೇಟೆ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು…

ಕೃಷ್ಣರಾಜಪೇಟೆ ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಕಿಕ್ಕೇರಿ ಸುರೇಶ್, ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ದಲಿತ ಮುಂತಾದ ಡಾ.ಬಸ್ತಿರಂಗಪ್ಪ, ಜಯಕರ್ನಾಟಕ ಸಂಘಟನೆಯ ಸೋಮಶೇಖರ್, ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಸಂಗಾಪುರ ಶಶಿಧರ್, ಪುರಸಭೆಯ ಮಾಜಿಅಧ್ಯಕ್ಷೆ ಶಕುಂತಲಾ ರವಿಕುಮಾರ್ ಸೇರಿದಂತೆ ನೂರಾರು ಜನರು ಮೈಸೂರು ಚನ್ನರಾಯಪಟ್ಟಣ ರಸ್ಯೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವ ಎ ಎಂಇಎಸ್ ಪುಂಡರು ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಒಡೆದುಹಾಕಿ ವಿಕೃತಿ ಮೆರೆದಿದ್ದಾರೆ. ಆದ್ದರಿಂದ ಭಾರತ ದೇಶದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಎಂಇಎಸ್ ಪುಂಡರನ್ನು ಬೆಳಗಾವಿಯಿಂದ ಗಡೀಪಾರು ಮಾಡಬೇಕೆಂದು ಆಗ್ರಹಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ ಮಂಡ್ಯ.

error: