May 4, 2024

Bhavana Tv

Its Your Channel

ವರ್ಗಾವಣೆಗೊಂಡ ಕೆ.ಆರ್.ಪೇಟೆ ತಹಶೀಲ್ದಾರ್ ಎಂ.ಶಿವಮೂರ್ತಿಯವರಿಗೆ ಸನ್ಮಾನಿಸಿ ಗೌರವಿಸಿ ಹೃದಯಸ್ಪರ್ಶಿ ಬೀಳ್ಕೊಡುಗೆ

ಕೃಷ್ಣರಾಜಪೇಟೆ ತಾಲ್ಲೂಕಿನ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶಿವಮೂರ್ತಿ ಅವರನ್ನು ನಂಜನಗೂಡು ತಾಲ್ಲೂಕಿನ ತಹಶೀಲ್ದಾರ್ ಆಗಿ ವರ್ಗಾವಣೆಗೊಳಿಸಿರುವ ರಾಜ್ಯ ಸರ್ಕಾರವು ಚಾಮರಾಜನಗರ ಜಿಲ್ಲೆಯ ಮುನಿಸಿಪಲ್ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ವಿ.ರೂಪ ಅವರನ್ನು ಕೆ.ಆರ್.ಪೇಟೆ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ವರ್ಗಾಯಿಸಿದೆ. ರೂಪ ಅವರು ಇಂದು ನಿರ್ಗಮಿತ ತಹಶೀಲ್ದಾರ್ ಶಿವಮೂರ್ತಿ ಅವರಿಂದ ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡ ತಹಶೀಲ್ದಾರ್ ಶಿವಮೂರ್ತಿ ಅವರನ್ನು ತಾಲ್ಲೂಕಿನ ಪ್ರಗತಿಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು ಹಾಗೂ ಕಂದಾಯ ಇಲಾಖೆಯ ನೌಕರರು ಸನ್ಮಾನಿಸಿ ಗೌರವಿಸಿ ಹೃದಯಸ್ಪರ್ಶಿಯಾಗಿ ಬೀಳ್ಕೊಟ್ಟರು ..

ಈ ಹಿಂದೆ ಮಂಡ್ಯ ಜಿಲ್ಲೆಯ ನಾಗಮಂಗಲ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿರುವ ರೂಪ ಕೆ.ಆರ್.ಪೇಟೆ ತಾಲ್ಲೂಕು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಸ್ವಕ್ಷೇತ್ರವಾಗಿದ್ದು ಮಾನ್ಯ ಸಚಿವರು ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿರುವುದರಿಂದ ಸಚಿವರ ಹಿರಿಮೆಗೆ ಗರಿ ಮೂಡಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಬಡಜನರು ಹಾಗೂ ತುಳಿತಕ್ಕೊಳಗಾದ ಜನರ ಧ್ವನಿಯಾಗಿ ಕೆಲಸ ಮಾಡಿ ತಾಲ್ಲೂಕಿಗೆ ಗೌರವ ತರುತ್ತೇನೆ ಎಂದು ಹೇಳಿದರು..
ಕಳೆದ ಎರಡೂವರೆ ವರ್ಷಗಳಿಂದ ತಹಶೀಲ್ದಾರ್ ಆಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಸಚಿವರಿಗೆ ಧನ್ಯವಾದಗಳನ್ನು ಸಮರ್ಪಿಸಿದ ನಿರ್ಗಮಿತ ತಹಶೀಲ್ದಾರ್ ಶಿವಮೂರ್ತಿ ತಾಲ್ಲೂಕಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ ಸಂತೃಪ್ತಿ ಹಾಗೂ ಸಮಾಧಾನವಿದೆ ಎಂದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಹಿರಿಯಣ್ಣ, ಚಿಕ್ಕಲಕ್ಷ್ಮೀ, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ

error: