May 18, 2024

Bhavana Tv

Its Your Channel

ಜಿಲ್ಲಾ ಮಕ್ಕಳ ಹಕ್ಕುಗಳ ಸಂರಕ್ಷಣಾ ಘಟಕ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರ ಸಮಾಲೋಚನಾ ಸಭೆ

ಕೆ.ಆರ್.ಪೇಟೆ: ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಮಕ್ಕಳ ಆರೋಗ್ಯ ಸಂವರ್ಧನೆಯ ಬಗ್ಗೆ ನಾಗರಿಕ ಸಮಾಜದ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು. ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಸತ್ಪ್ರಜೆಗಳಾದ್ದರಿಂದ ಮಕ್ಕಳಿಗೆ ಶಿಕ್ಷಣದ ಜ್ಞಾನದ ಬೆಳಕಿನ ಸಂಸ್ಕಾರ ನೀಡಿ ಮಕ್ಕಳನ್ನು ಯೋಗ್ಯ ನಾಗರಿಕರನ್ನಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಕರೆ ನೀಡಿದರು .

ಅವರು ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ಸಂರಕ್ಷಣಾ ಘಟಕ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳ ಸಂರಕ್ಷಣೆಯಾಗಬೇಕು. ಇಂದಿನ ನಾಗರಿಕ ಸಮಾಜದಲ್ಲಿಯೂ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳದಂತಹ ಸಾಮಾಜಿಕ ಅನಿಷ್ಠ ಪದ್ಧತಿಗಳು ನಿರಂತರವಾಗಿ ನಡೆಯುತ್ತಿವೆ. ಬಾಲ್ಯದಲ್ಲಿ ಆಟಪಾಟವಾಡಿಕೊಂಡು ಸಂತೋಷದಿAದ ಕಾಲ ಕಳೆಯಬೇಕಾದ ಮಕ್ಕಳನ್ನು ದುಡಿಮೆಗೆ ಹಚ್ಚುವಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಈ ದಿಕ್ಕಿನಲ್ಲಿ ಸಂಪನ್ಮೂಲ ಸಂಸ್ಥೆಗಳ ಮೂಲಕ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ ಚಂದ್ರಶೇಖರ್ ಬಾಲ್ಯ ವಿವಾಹದಂತಹ ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವುದು ಕಂಡುಬAದರೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಮಕ್ಕಳ ಆರೋಗ್ಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಮಂಡ್ಯ ಜಿಲ್ಲಾ ಮಕ್ಕಳ ಹಕ್ಕುಗಳ ಸಂರಕ್ಷಣಾ ಘಟಕದ ಸಹಾಯಕ ನಿರ್ದೇಶಕ ವೆಂಕಟೇಶ್ ಮಾತನಾಡಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಕ್ಕಳ ಹಕ್ಕುಗಳನ್ನು ಧಮನ ಮಾಡುವ, ಬಾಲ್ಯವಿವಾಹದಂತಹ 50ಕ್ಕೂ ಹೆಚ್ಚಿನ ಪ್ರಕರಣಗಳು ಮಕ್ಕಳ ಸಹಾಯವಾಣಿಗೆ ವರದಿಯಾಗಿವೆ. ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಸ್ವಯಂ ಸೇವಾಸಂಸ್ಥೆಗಳು ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ವೆಂಕಟೇಶ್ ಕರೆ ನೀಡಿದರು.

ತಾ.ಪಂ ಕಾರ್ಯಕ್ರಮಾಧಿಕಾರಿ ಕೆ.ಎಸ್. ಸಂದೀಪ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಸಿಡಿಪಿಓ ಕುಮಾರಸ್ವಾಮಿ, ಬರ್ಡ್ಸ್ ಸಂಸ್ಥೆಯ ಕೆಂಪಯ್ಯ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ಪಿಡಿಓ ಗಳು ಹಾಗೂ ಸಂಘಸAಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: