May 10, 2024

Bhavana Tv

Its Your Channel

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ನೋವಿಗೆ ಧ್ವನಿಯಾಗಬೇಕು- ಸಚಿವ ಡಾ.ನಾರಾಯಣಗೌಡ

ಕೆ.ಆರ್.ಪೇಟೆ : ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ನೋವಿಗೆ  ಧ್ವನಿಯಾಗಬೇಕು ಸರ್ಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಹೇಳಿದರು.

ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಾಲ್ಲೂಕಿನ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡುವ ಮೂಲಕ ಸರ್ಕಾರದ ವಿವಿಧ ಯೋಜನೆಗಳ
ಫಲವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು. ಬದ್ಧತೆಯಿಂದ ಕೆಲಸ ಮಾಡದ ಅಧಿಕಾರಿಗಳು ಮರ್ಯಾದೆಯಿಂದ ಜಾಗ ಖಾಲಿ ಮಾಡಬೇಕು ಎಂದು ಕಿವಿಮಾತು ಹೇಳಿದ ಸಚಿವ ನಾರಾಯಣಗೌಡ ಸಂಧ್ಯಾಸುರಕ್ಷಾ, ವಿಧವಾ, ವಿಶೇಷಚೇತನ ಯೋಜನೆಗಳ ಫಲಾನುಭವಿಗಳಿಗೆ ಕಳೆದ 10 ತಿಂಗಳುಗಳಿAದ ಸರ್ಕಾರದ ಮಾಸಿಕ ಅನುದಾನ ಬಿಡುಗಡೆಯಾಗದೇ ಸಂಕಷ್ಠದಲ್ಲಿದ್ದಾರೆ. ಆದ್ದರಿಂದ ತಾಲ್ಲೂಕಿಗೆ ನೂತನವಾಗಿ ವರ್ಗಾವಣೆಯಾಗಿ ಬಂದಿರುವ ತಹಶೀಲ್ದಾರ್ ರೂಪ ಅವರು ಶ್ರೀ ಸಾಮಾನ್ಯರ ನೋವಿಗೆ ಧ್ವನಿಯಾಗಿ ಕೆಲಸ ಮಾಡಿ ಒಳ್ಳೆಯ ಹೆಸರುಗಳಿಸಬೇಕು. ಜಡ್ಡುಗಟ್ಟಿರುವ ತಾಲ್ಲೂಕು ಆಡಳಿತವನ್ನು ಚುರುಕುಗೊಳಿಸಬೇಕು. ಸರ್ಕಾರವು ಓಮಿಕ್ರಾನ್ ವೈರಾಣು ಹಾವಳಿಯನ್ನು ತಡೆಗಟ್ಟಲು ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಒಂದು ಮತ್ತು ಎರಡನೇ ಲಸಿಕಾ ಅಭಿಯಾನವನ್ನು ಸಂಪೂರ್ಣವಾಗಿ ಯಶಸ್ವಿಯಾಗಿ ಜಾರಿಗೊಳಿಸಿ ಶೇ.100ಕ್ಕೆ 100 ರಷ್ಟು ಯಶಸ್ವಿಯಾಗಲು ಸಹಕಾರ ನೀಡಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ತಹಶೀಲ್ದಾರ್ ಎಂ.ವಿ.ರೂಪ ಮತ್ತು ತಾಲ್ಲೂಕು ಪಂಚಾಯತಿ ಇಓ ಚಂದ್ರಶೇಖರ್ ಅವರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಪೋಲಿಸ್ ಇನ್ಸ್ ಪೆಕ್ಟರ್ ಗಳಾದ ಕೆ.ಎಸ್.ನಿರಂಜನ, ಎಂ.ಕೆ.ದೀಪಕ್, ಅಭ್ಕಾರಿ ನಿರೀಕ್ಷಕಿ ಸಿ.ಪಿ.ಭವ್ಯಾ, ಜಿ.ಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ಪುರಸಭೆ ಸದಸ್ಯ ಲೋಕೇಶ್, ಗಿರೀಶ್, ಪತ್ರಕರ್ತ ಬಳ್ಳೇಕೆರೆ ಮಂಜುನಾಥ್, ಚಾಶಿ ಜಯಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ. ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ

error: