March 28, 2024

Bhavana Tv

Its Your Channel

ಪಾಂಡವಪುರ ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಕೃಷ್ಣರಾಜಪೇಟೆ ಪಟ್ಟಣದ ಎಸ್.ಎಂ.ಲಿAಗಪ್ಪ ಸಮುದಾಯ ಭವನದಲ್ಲಿ ಕೋವಿಡ್ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯು ಪಾಂಡವಪುರ ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ..

ಕೋವಿಡ್ 3ನೇ ಅಲೆಯಲ್ಲಿ ಕೊರೋನಾ ಪಾಸಿಟಿವ್ ವೈರಾಣು ಸೋಂಕು ಬಿರುಗಾಳಿಯಂತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಜನರು, ಯುವಜನರು ಹಾಗೂ ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೆಮ್ಮು ನೆಗಡಿ, ಶೀಥ, ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳು ಕಂಡುಬAದರೆ ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತರು ಕೋವಿಡ್ ಗಂಟಲುದ್ರವದ ಮಾದರಿಯ ಪರೀಕ್ಷೆ ಮಾಡಿಸಿ ಪಾಸಿಟಿವ್ ಸೋಂಕು ಇರುವುದು ದೃಡಪಟ್ಟರೆ ಕಡ್ಡಾಯವಾಗಿ ಕೋವಿಡ್ ಹೆಲ್ತ್ ಕೇರ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆಕೊಡಿಸಿ ಕೊರೋನಾ ಸೋಂಕು ಗುಣಪಡಿಸಲು ಮುಂದಾಗಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೋವಿಡ್ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ಚಲನವಲನಗಳನ್ನು ಗಮನಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಖಡಕ್ ಸಂದೇಶ ನೀಡಿದ ಪಾಂಡವಪುರ ಎಸಿ ಶಿವಾನಂದಮೂರ್ತಿ ಕೋವಿಡ್ ಕರಿನೆರಳಿನಲ್ಲಿಯೇ ನಾವು ಬದುಕು ನಡೆಸಬೇಕಾಗಿರುವುದರಿಂದ ಆರೋಗ್ಯ ಸಂವರ್ಧನೆ ಹಾಗೂ ಸುರಕ್ಷತೆಗೆ ಒತ್ತು ನೀಡಬೇಕು. ಆರೋಗ್ಯ ಭಾಗ್ಯಕ್ಕಿಂತ ಯಾವುದೂ ದೊಡ್ಡದಲ್ಲ ಎಂಬ ಸತ್ಯ ಅರಿಯಬೇಕು ಎಂದು ಕಿವಿಮಾತು ಹೇಳಿದರು.

ಕೋವಿಡ್ ಜಾಗೃತಿ ಸಭೆಯಲ್ಲಿ ತಹಶೀಲ್ದಾರ್ ಎಂ.ವಿ.ರೂಪ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವಿಕುಮಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಆಶಾ ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ಪಿಡಿಓ ಗಳು ಸಭೆಯಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ .

error: