April 29, 2024

Bhavana Tv

Its Your Channel

ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ

ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ 73 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಎಂ.ವಿ.ರೂಪ ಧ್ವಜವಂದನೆ ಸ್ವೀಕರಿಸಿ ಧ್ವಜಸಂದೇಶ ನೀಡಿದರು …

ವಿವಿಧತೆಯಲ್ಲಿ ಏಕತೆಹೊಂದಿರುವ ಬಲಿಷ್ಠವಾದ ಸಂವಿಧಾನವನ್ನು ಹೊಂದಿರುವ ಭಾರತ ದೇಶವು ಸಂವಿಧಾನದ ತಳಹದಿಯ ಆಧಾರದಲ್ಲಿ ಆಡಳಿತ ನಡೆಸಲು ಮುಂದಾದ ಈ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ. ಸಂವಿಧಾನ ಆಶಯಗಳ ಈಡೇರಿಕೆಗಾಗಿ ಭಾರತೀಯರಾದ ನಾವೆಲ್ಲರೂ ಒಂದಾಗಿ ದುಡಿಯುವ ಸಂಕಲ್ಪ ಮಾಡಬೇಕು, ಗ್ರಾಮಸ್ವರಾಜ್ಯದ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಬೇಕು, ಭಾರತೀಯರು ನಾವು ಎನ್ನಲು ಹೆಮ್ಮೆ ಪಡಬೇಕು, ನಮ್ಮ ದೇಶವನ್ನು ಪ್ರೀತಿಸಿ ಗೌರವಿಸುವ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು.

ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೋವಿಡ್ ಕರಿನೆರಳಿನ ಹಿನ್ನೆಲೆಯಲ್ಲಿ ದೇಶದ ಮೊದಲ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಯುವಜನರು ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಕಷ್ಟಪಟ್ಟು ದುಡಿಯಬೇಕು. ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖವಾದ್ದರಿಂದ ಯುವಜನರು ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಮಹಾದೇವಿನಂಜುAಡ ಕರೆ ನೀಡಿದರು..

ಜಿಲ್ಲಾ ಪಂಚಾಯತಿ ಮಾಜಿಸದಸ್ಯ ರಾಮದಾಸು, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಪುರಸಭೆಯ ಮುಖ್ಯಾಧಿಕಾರಿ ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೋಲಿಸ್ ಇನ್ಸ್ ಪೆಕ್ಟರ್ ಗಳಾದ ಎಂ.ಕೆ.ದೀಪಕ್, ಕೆ.ಎಸ್.ನಿರಂಜನ, ಬಿ.ಪ್ರಮೋದ್, ವಲಯ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್, ಪುರಸಭೆ ಉಪಾಧ್ಯಕ್ಷೆ ಗಾಯತ್ರಿ, ಸದಸ್ಯ ಶಾಮಿಯಾನತಿಮ್ಮೇಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮಹದೇವ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಿಸಿದರು…

ವರದಿ.ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ . ಮಂಡ್ಯ.

error: