April 29, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆ ಕಾರ್ಯಾಲಯದಲ್ಲಿ ಸಡಗರ ಸಂಭ್ರಮದಿOದ ನಡೆದ 73ನೇ ಗಣರಾಜ್ಯೋತ್ಸವ ಸಮಾರಂಭ ..

ಕೆ.ಆರ್.ಪೇಟೆ:- ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಭಾವಚಿತ್ರಕ್ಕೆ ವಿಶೇಷಪೂಜೆ ಮಾಡಿ ಪುಷ್ಪನಮನ ಸಲ್ಲಿಸಿದ ಪುರಸಭೆ ಉಪಾಧ್ಯಕ್ಷೆ ಗಾಯತ್ರಿ, ಮುಖ್ಯಾಧಿಕಾರಿ ಕುಮಾರ್ ಮತ್ತು ಆಡಳಿತ ಮಂಡಳಿಯ ಸದಸ್ಯರು …

ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮಾತನಾಡಿ ವಿಶ್ವಮಾನ್ಯವಾದ ಸಂವಿಧಾನವನ್ನು ಹೊಂದಿರುವ ಭಾರತ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತವಾದ ನಂತರ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಿ ಸಂವಿಧಾನದ ತಳಹದಿಯ ಆಧಾರದ ಮೇಲೆ ಆಡಳಿತ ನಡೆಸಲು ಆರಂಭಿಸಿದ ಈ ಮಹತ್ವದ ದಿನಕ್ಕೆ 73 ವರ್ಷಗಳು ತುಂಬುತ್ತಿರುವ ಸವಿನೆನಪಿಗಾಗಿ ನೂತನ ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವದ ಸಂಭ್ರಮಾಚರಣೆಗೆ ಕೋವಿಡ್ ಅಡ್ಡಿಮಾಡುತ್ತಿದೆ. ದೇಶದ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆಯನ್ನು ಕೊಡಿಸಿ ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ. ಸಂವಿಧಾನದ ಆಶಯಗಳ ಫಲವಾಗಿ ಇಂದು ಮೀಸಲಾತಿಯ ಸೌಲಭ್ಯವನ್ನು ಪಡೆದುಕೊಳ್ಳುವ ಜೊತೆಗೆ ದೇಶದ ಮುನ್ನಡೆಗೆ ಹೆಣ್ಣುಗಂಡು ಎಂಬಬೇಧ ಭಾವ ವಿಲ್ಲದಂತೆ ದೇಶದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಸ್ಮರಿಸಿದ ಮಹಾದೇವಿ ಸಂವಿಧಾನದ ಆಶಯಗಳ ಈಡೇರಿಕೆಗೆ ಬದ್ಧತೆಯಿಂದ ಕೆಲಸ ಮಾಡೋಣ ಎಂದು ಮನವಿ ಮಾಡಿದರು…ಪುರಸಭೆಯ ಉಪಾಧ್ಯಕ್ಷೆ ಗಾಯತ್ರಿ, ಮುಖ್ಯಾಧಿಕಾರಿ ಕುಮಾರ್ ಮತ್ತು ಪುರಸಭೆಯ ಸದಸ್ಯರಾದ ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಸಂಭ್ರಮ ಕುರಿತು ಮಾತನಾಡಿದರು..

ಇದೇ ಸಂದರ್ಭದಲ್ಲಿ ಪುರಸಭೆಯ ನಾಮನಿರ್ದೇಶನ ಸದಸ್ಯರಾಗಿ ನೇಮಕವಾಗಿರುವ ಡಾ.ಕೆ.ಎಸ್.ರಾಜೇಶ್, ಕೆ.ಆರ್.ನೀಲಕಂಠ, ಮಹೇಶ್, ಯಶಸ್ವಿನಿಮಂಜುನಾಥ್ ಮತ್ತು ಹನುಮಂತರಾಜ್ ಅವರನ್ನು ಪುರಸಭೆ ಅಧ್ಯಕ್ಷೆ ಮಹಾದೇವಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುರಸಭೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂಧಿಗಳು ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: