April 29, 2024

Bhavana Tv

Its Your Channel

ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕುರಿತು ಬೀದಿ ನಾಟಕ ಕಾರ್ಯಕ್ರಮ

ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ಜಿಲ್ಲಾ ಸರ್ವೇಕ್ಷಣಾ ಘಟಕ ಮಂಡ್ಯ, ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸಂತೇಬಾಚಹಳ್ಳಿ , ಸೌಹಾರ್ದ ಸಾಂಸ್ಕೃತಿಕ ಕಲಾ ತಂಡ, ಹನಿಯಂಬಾಡಿ ಇವರ ಸಹಯೋಗದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕುರಿತು ಬೀದಿ ನಾಟಕ ಕಾರ್ಯಕ್ರಮವನ್ನು ಸಂತೆಬಾಚಳ್ಳಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ಕಾರ್ತಿಕ್ ರವರು ತಮಟೆ ಬಾರಿಸುವುದರ ಮೂಲಕ ಉದ್ಘಾಟಿಸಿದರು ..,

ಆರೋಗ್ಯ ಇಲಾಖೆಯು ಜನಸಾಮಾನ್ಯರಿಗೆ ಅನೇಕ ಆರೋಗ್ಯ ಸೇವಾ ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಯನ್ನು ಸ್ಥಳೀಯ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯಾಧಿಕಾರಿಗಳು ಮೂಲಕ ಪಡೆದುಕೊಂಡ ಆರೋಗ್ಯವಂತ ದೇಶವನ್ನು ಕಟ್ಟಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು,

ಈ ಹಿಂದೆ ಇದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಎಂಬುದಾಗಿ ಗ್ರಾಮೀಣ ಜನರಿಗೆ ಸೇವೆ ಒದಗಿಸಲು ಗ್ರಾಮ ಮಟ್ಟದಲ್ಲಿ ಕೆಲವೊಂದು ಪ್ರಾಥಮಿಕ ಆರೋಗ್ಯ ಪರೀಕ್ಷೆಗಳನ್ನು ಮಾಡಲಾಗುವುದು, ಇದರ ಜೊತೆಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ದಲ್ಲಿ ಯೋಗ ಧ್ಯಾನ ವ್ಯಾಯಾಮಗಳ ತರಬೇತಿ ನೀಡಲು ತರಬೇತಿದಾರವನ್ನು ನೇಮಿಸಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವುದರ ಜೊತೆಗೆ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ತಂದಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ಕುಟುಂಬದವರಿಗೆ ಹೆಲ್ತ್ ಕಾರ್ಡ್ ನ್ನು ಆರೋಗ್ಯ ಇಲಾಖೆ ವತಿಯಿಂದ ಮಾಡಿಕೊಡಲಾಗುತ್ತಿದೆ, ಈ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬ ಆರೋಗ್ಯ ಸೇವೆಯನ್ನು ಪಡೆಯಲು 5 ಲಕ್ಷದವರೆಗೆ ಅವಕಾಶವಿದ್ದು ಪ್ರತಿಯೊಂದು ಕುಟುಂಬದವರು ಆರೋಗ್ಯ ಕಾರ್ಡನ್ನು ಪಡೆದು ಈ ಸೇವೆಯನ್ನು ಪಡೆದುಕೊಳ್ಳಲು ಸೂಚಿಸಿದರು,

ಮಂಡ್ಯದ ಸೌಹಾರ್ದ ಸಾಂಸ್ಕೃತಿಕ ಕಲಾ ತಂಡದ ವತಿಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕುರಿತಾದ ಬೀದಿನಾಟಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು,

ಕಾರ್ಯಕ್ರಮದಲ್ಲಿ ಕಲಾವಿದರಾದ ಶೇಖರ್ ಹನಿಯಂಬಾಡಿ, ಬಸವರಾಜು ಸಂತೆಕಸಲಗೆರೆ, ರಾಮಕೃಷ್ಣ ಹನಿಯಂಬಾಡಿ, ರಾಜಣ್ಣ ಸಂತೆಕಸಲಗೆರೆ, ಬಂದೇಶ್ ಕೊಡಿಯಾಲ , ವೈರಮುಡಿ ಮಂಡ್ಯ ಹಾಗೂ ಸಂತೆಬಾಚಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕ್ಷೇಮ ಕೇಂದ್ರದ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: