May 4, 2024

Bhavana Tv

Its Your Channel

ನಾನು ಸಚಿವನೆಂಬ ಅಹಂಕಾರವಿಲ್ಲ ಏಕೆಂದರೆ ನಾನು ಜನತೆಯ ವಿನಮ್ರ ಸೇವಕನಾಗಿದ್ದೇನೆ-ಸಚಿವ ಡಾ.ನಾರಾಯಣಗೌಡ

ಕೆ.ಆರ್.ಪೇಟೆ: ನಾನು ಸಚಿವನೆಂಬ ಅಹಂಕಾರವಿಲ್ಲ ಏಕೆಂದರೆ ನಾನು ಜನತೆಯ ವಿನಮ್ರ ಸೇವಕನಾಗಿದ್ದೇನೆ. ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಯನ್ನು ಮೂಲ ಮಂತ್ರವನ್ನಾಗಿಸಿಕೊAಡು ಕೆಲಸ ಮಾಡುತ್ತಿರುವ ನನ್ನ ಮೇಲೆ ಕ್ಷೇತ್ರದ ಜನತೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಕ್ಷೇತ್ರದ ಮತದಾರರ ಋಣ ತೀರಿಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು .

ಅವರು ಇಂದು ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಆರೂವರೆ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವೈದ್ಯರು ಮತ್ತು ದಾದಿಯರ ವಸತಿ ಗೃಹಗಳ ಕಟ್ಟಡಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿ ಶಿಲಾಫಲಕವನ್ನು ಅನಾವರಣಗೊಳಿಸಿ ಬೂಕನಕೆರೆ ಗ್ರಾಮ ಪಂಚಾಯತಿಯ ಅಮೃತಗ್ರಾಮ ಯೋಜನೆಯ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಘನತ್ಯಾಜ್ಯ ಸಂಸ್ಕರಣಾ ಘಟಕದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಬೂಕನಕೆರೆ ಗ್ರಾಮ ಪಂಚಾಯತಿ ವತಿಯಿಂದ ನೀಡಿದ ಹೃದಯಸ್ಪರ್ಶಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು…

ಕೃಷ್ಣರಾಜಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಯ ಬೇಡಿಕೆಯನ್ನು ಮುಂದಿಟ್ಟುಕೊAಡು ಯಡಿಯೂರಪ್ಪ ಅವರ ಸಮಕ್ಷಮದಲ್ಲಿ ಬಿಜೆಪಿ ಪಕ್ಷವನ್ನು ಸೇರಿದ ನಾನು ಏತ ನೀರಾವರಿ ಯೋಜನೆಗಳು, ಜಲಜೀವನ ಮಿಷನ್ ಕುಡಿಯುವ ನೀರಿನ ಯೋಜನೆ ಸೇರಿದಂತೆ 1700ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿಸಿ ತಂದಿದ್ದು ಇನ್ನಾರು ತಿಂಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಜನರ ಕಣ್ಣಿಗೆ ಎದ್ದು ಕಾಣಲಿವೆ ಎಂದು ಹೇಳಿದ ಸಚಿವ ನಾರಾಯಣಗೌಡ ತಾಲೂಕಿನಲ್ಲಿ ಈ ಹಿಂದೆAದೂ ನಡೆಯದಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳು ಮಂಜೂರಾಗಿವೆ. ರೈತನಾಯಕರಾದ ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು ನಾನು ಕೇಳಿದ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಅನುದಾನ ನೀಡಿದ್ದಾರೆ. ನಾನು ಸಿದ್ಧರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದೇನೆ. ಕೊಟ್ಟ ಮಾತನ್ನು ತಪ್ಪದೇ ನುಡಿದಂತೆ ನಡೆಯುವ ನಾಯಕರು ರಾಜ್ಯದಲ್ಲಿ ಯಾರಾದರೂ ಇದ್ದರೆ ಅವರು ಮಾಜಿಮುಖ್ಯಮಂತ್ರಿಗಳಾದ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ಮಾತ್ರ ಎಂದು ಅಭಿಮಾನದಿಂದ ಹೇಳಿದ ನಾರಾಯಣಗೌಡ ಕೊಟ್ಟ ಮಾತಿನಂತೆ ಬಿಜೆಪಿ ಪಕ್ಷದಿಂದ ಉಪಚುನಾವಣೆಯಲ್ಲಿ ಗೆದ್ದು ಶಾಸಕನಾದ ನನ್ನನ್ನು ಮಂತ್ರಿಯನ್ನಾಗಿ ಮಾಡಿದ್ದಲ್ಲದೇ ಜವಾಬ್ಧಾರಿಯುತ ಖಾತೆಗಳನ್ನು ನೀಡಿ ರಾಜ್ಯದಾದ್ಯಂತ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಸ್ತುತ ಯಡಿಯೂರಪ್ಪ ಅವರ ಆಶೀರ್ವಾದದ ಬಲದಿಂದಲೇ ಶಿವಮೊಗ್ಗದಂತಹ ದೊಡ್ಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಯಡಿಯೂರಪ್ಪ ಅವರು ದೂರದೃಷ್ಠಿಯ ಆಡಳಿತದ ಕನಸು ಹೊಂದಿರುವ ನಾಯಕರಾಗಿದ್ದಾರೆ. ಯಡಿಯೂರಪ್ಪ ಅವರು ಜನ್ಮಭೂಮಿಯ ಜನತೆಗೆ ಕೊಟ್ಟ ಮಾತಿನಂತೆ ಕೆ.ಆರ್.ಪೇಟೆಯನ್ನು ಎರಡನೇ ಶಿಕಾರಿಪುರದ ಮಾದರಿಯಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಹೇಳಿದರು..

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ರಾಂತಿಗೆ ನಾಂಧಿ ಹಾಡಿದ್ದೇನೆ. ತಾಲ್ಲೂಕಿನ ಸಾರಂಗಿ, ಮಡುವಿನಕೋಡಿ, ಆಲೇನಹಳ್ಳಿ ಗ್ರಾಮಗಳಲ್ಲಿ 180 ಲಕ್ಷರೂ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆಯ ಕಟ್ಟಡಗಳು ನಿರ್ಮಾಣವಾಗಿದ್ದು ಇಂದು ಲೋಕಾರ್ಪಣೆಯಾಗುತ್ತಿವೆ. ಬೂಕನಕೆರೆ ಮತ್ತು ಶೀಳನೆರೆ ಹೋಬಳಿಯ ಕೆರೆ ಕಟ್ಟೆಗಳನ್ನು ಹೇಮಾವತಿ ನದಿಯ ನೀರಿನಿಂದ ತುಂಬಿಸುವ ಕಟ್ಟಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಆರಂಭವಾಗಿದೆ. ಬರಪೀಡಿತ ಸಂತೇಬಾಚಹಳ್ಳಿ ಹೋಬಳಿಯ ಕೆರೆಕಟ್ಟೆಗಳನ್ನು ತುಂಬಿಸುವ ಗೂಡೆಹೊಸಳ್ಳಿ ಏತನೀರಾವರಿ ಯೋಜನೆಯ ಕಾಮಗಾರಿಯು ಭರದಿಂದ ಸಾಗುತ್ತಿದೆ ಎಂದು ನಾರಾಯಣಗೌಡ ಹೇಳಿದರು. ಮುಂಬೈ ನಗರದಲ್ಲಿ ಉಧ್ಯಮಿಯಾಗಿದ್ದ ನನ್ನ ಮೇಲೆ ತಾಲ್ಲೂಕಿನ ಜನತೆ ವಿಶ್ವಾಸವನ್ನಿಟ್ಟು ಸತತವಾಗಿ ಮೂರು ಅವಧಿಗೆ ಶಾಸಕನನ್ನಾಗಿ ಆಯ್ಕೆ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪ್ರಾಮಾಣಿಕವಾಗಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಜನರು ನನ್ನ ಮೇಲಿಟ್ಟಿರುವ ವಿಶ್ವಾಸದ ಋಣವನ್ನು ತೀರಿಸುತ್ತೇನೆ ಎಂದು ಸಚಿವ ನಾರಾಯಣಗೌಡ ಹೇಳಿದರು.

ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್.ಸಿ.ಅಶೋಕ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬರಲು ಸಚಿವ ನಾರಾಯಣಗೌಡರ ಶ್ರಮ ಮತ್ತು ತ್ಯಾಗವು ಅಪಾರವಾಗಿದೆ. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ನಾರಾಯಣಗೌಡರ ಮೇಲೆ ವಿಶ್ವಾಸವನ್ನಿಟ್ಟು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರ ಸ್ಥಾನವನ್ನು ಕೊಡುಗೆಯಾಗಿ ನೀಡಿದ್ದಾರೆ. ನಾನೆಲ್ಲೇ ಹೋದರೂ ಮಂಡ್ಯ ಜಿಲ್ಲೆಯವನು ನಾನು ಎನ್ನಲು ಹೆಮ್ಮೆ ಮತ್ತು ಅಭಿಮಾನವಿದೆ ಎಂದು ಹೇಳುವ ಸಚಿವ ನಾರಾಯಣಗೌಡರು ಕೆ.ಆರ್.ಪೇಟೆ ತಾಲ್ಲೂಕಿನ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುತ್ತಿರುವ ರಾಜಕಾರಣಿಯಾಗಿದ್ದಾರೆ ಎಂದು ಅಶೋಕ್ ಹೇಳಿದರು..

ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಧನಂಜಯ, ತಹಶೀಲ್ದಾರ್ ಎಂ.ವಿ.ರೂಪ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಬಿಇಓ ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ವೈದ್ಯಾಧಿಕಾರಿ ಡಾ.ಶ್ರೀನಿವಾಸಗೌಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಬೂಕನಕೆರೆ ಗ್ರಾ.ಪಂ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷೆ ಜ್ಯೋತಿ, ತಾಲೂಕು ಪಂಚಾಯತಿ ಮಾಜಿಅಧ್ಯಕ್ಷರಾದ ಬಿ.ಜವರಾಯಿಗೌಡ, ಹೆಳವೇಗೌಡ, ಯಡಿಯೂರಪ್ಪ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬೂಕನಕೆರೆ ಮಧುಸೂದನ್, ಶ್ಯಾಂಪ್ರಸಾದ್, ವೆಂಕಟೇಶ್, ಬಲ್ಲೇನಹಳ್ಳಿ ರಮೇಶ್, ಡಿ.ಪಿ.ಪರಮೇಶ್, ಸಾರಂಗಿ ಮಂಜುನಾಥಗೌಡ, ಮೀನಾಕ್ಷಿಪುಟ್ಟರಾಜು, ಭಾರತಿಪುರ ಪುಟ್ಟಣ್ಣ, ಚೋಕನಹಳ್ಳಿ ಪ್ರಕಾಶ್, ಅಪ್ಪಾಜಿ, ಬಣ್ಣೇನಹಳ್ಳಿ ಶ್ರೀನಿವಾಸ್, ಸಚಿವ ನಾರಾಯಣಗೌಡರ. ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ.ಪ್ರಕಾಶ್, ಯತೀಶಬಾಬೂ, ಕಿಕ್ಕೇರಿಕುಮಾರ್, ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: