April 29, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆಯಲ್ಲಿ ಸಡಗರ ಸಂಭ್ರಮದಿOದ ಪೌರಕಾರ್ಮಿಕರ ದಿನಾಚರಣೆ ಆಚರಣೆ

ಕೆ.ಆರ್.ಪೇಟೆ ಪುರಸಭೆಯಲ್ಲಿ ಸಡಗರ ಸಂಭ್ರಮದಿoದ ಪೌರಕಾರ್ಮಿಕರ ದಿನಾಚರಣೆ ಆಚರಣೆ..ಪೌರಕಾರ್ಮಿಕರ ಸಂಕಷ್ಟಗಳನ್ನು ಆಲಿಸಿ ಅಗತ್ಯ ಕ್ರಮಕೈಗೊಳ್ಳಲು ಆಡಳಿತ ಮಂಡಳಿಗೆ ನಿರ್ದೇಶನ ನೀಡಿದ ರಾಜ್ಯದ ಯುವಜನ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ..

ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವದ ಹಂಗನ್ನು ತೊರೆದು ಅರ್ಪಣಾ ಮನೋಭಾವದಿಂದ ದುಡಿಯುತ್ತಿರುವ ಪೌರಕಾರ್ಮಿಕ ಬಂಧುಗಳು ಪ್ರಾತ:ಸ್ಮರಣೀಯರಾಗಿದ್ದಾರೆ.ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅಭಿಮಾನದಿಂದ ಹೇಳಿದರು.
ಅವರು ಪಟ್ಟಣದ ಪುರಸಭೆಯ ಕಾರ್ಯಾಲಯದ ಆವರಣದಲ್ಲಿ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ಪೌರಕಾರ್ಮಿಕರಿಗೆ ಟ್ರೋಫಿಗಳು, ಪ್ರಶಸ್ತಿಪತ್ರಗಳು, ಹಾಗೂ ಸಮವಸ್ತ್ರಗಳು ಸೇರಿದಂತೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು..

ಪೌರಾಡಳಿತ ಇಲಾಖೆಯು ರಾಜ್ಯದ ಜನತೆಗೆ ಉತ್ತಮವಾದ ಸೇವೆಯನ್ನು ನೀಡಲು ಇರುವ ಇಲಾಖೆಯಾಗಿದೆ. ಪೌರಾಡಳಿತ ಖಾತೆಯ ಸಚಿವನಾಗಿಯೂ ಒಂದು ವರ್ಷಗಳ ಕಾಲ ಕೆಲಸ ಮಾಡಿರುವ ನನಗೆ ಇಲಾಖೆಯ ಒಳಹೊರಗಿನ ಸಂಪೂರ್ಣ ಅರಿವಿದೆ. ನಾವು ವಾಸಮಾಡುವ ಸ್ಥಳಗಳು, ನಮ್ಮ ವಾರ್ಡುಗಳು ಸೇರಿದಂತೆ ಇಡೀ ಪಟ್ಟಣವನ್ನೇ ಸ್ವಚ್ಛಮಾಡುವ ಪೌರಕಾರ್ಮಿಕರ ಆರೋಗ್ಯ ಸಂವರ್ಧನೆಯ ಬಗ್ಗೆ ಪುರಸಭೆಯ ಆಡಳಿತ ಮಂಡಳಿಯು ಹೆಚ್ಚಿನ ಕಾಳಜಿ ವಹಿಸಬೇಕು. ಪೌರಕಾರ್ಮಿಕರಿಗೆ ಸಂವಿಧಾನಬದ್ಧವಾಗಿ ನೀಡಬೇಕಾದ ಸವಲತ್ತುಗಳನ್ನು ಮೊದಲ ಆದ್ಯತೆಯಲ್ಲಿ ಕೊಡಿಸುವ ಬದ್ಧತೆಯನ್ನು ಪ್ರದರ್ಶನ ಮಾಡಬೇಕು. ಪೌರಕಾರ್ಮಿಕರು ಆರೋಗ್ಯವಾಗಿದ್ದು ಚೆನ್ನಾಗಿ ಲವಲವಿಕೆಯಿಂದ ಇದ್ದರೆ ನಮ್ಮ ಪಟ್ಟಣವು ಸ್ವಚ್ಛವಾಗಿರುತ್ತದೆ. ಆದ್ದರಿಂದ ಹೆಚ್ಚಿನ ಕಾಳಜಿಯನ್ನು ಪೌರಕಾರ್ಮಿಕರ ಮೇಲಿಟ್ಟು ಅವರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡಿ ನಂತರ ಅವರಿಂದ ಕೆಲಸ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದ ಸಚಿವರು ಪಟ್ಟಣವನ್ನು ಸ್ವಚ್ಛಗೊಳಿಸಿ ಪಟ್ಟಣದ ನಾಗರಿಕರ ಆರೋಗ್ಯ ಕಾಪಾಡುವ ಪೌರಕಾರ್ಮಿಕ ಬಂಧುಗಳ ದಿನಾಚರಣೆಯಲ್ಲಿ ಭಾಗವಹಿಸಿರುವುದು ನನಗೆ ಸಂತೋಷ ತಂದಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು.

ಚುನಾಯಿತ ಜನಪ್ರತಿನಿಧಿಗಳು ಪಟ್ಟಣದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಒಂದಾಗಿ ಕೆಲಸ ಮಾಡಬೇಕು. ಪಟ್ಟಣದ ಅಭಿವೃದ್ಧಿಗೆ ರಾಜ್ಯ ಸರ್ಕಾರವು 20ಕೋಟಿ ರೂ ವಿಶೇಷ ಅನುದಾನ ನೀಡಿದೆ. ಈ ಹಣದಲ್ಲಿ ಪಟ್ಟಣದ ಹಳೇ ಕಿಕ್ಕೇರಿ ರಸ್ತೆ, ಹೊಸ ಕಿಕ್ಕೇರಿ ರಸ್ತೆಯ ಅಭಿವೃದ್ಧಿ ಸೇರಿದಂತೆ ಪಟ್ಟಣದ ಜನತೆಗೆ ಅತೀ ಅವಶ್ಯಕತೆಯಿರುವ ರಸ್ತೆಗಳು, ಚರಂಡಿಗಳು, ಸೇತುವೆಗಳು ಹಾಗೂ ಕಲ್ವರ್ಟ್ ಗಳನ್ನು ನಿರ್ಮಾಣ ಮಾಡಲು ಮೊದಲ ಆಧ್ಯತೆ ನೀಡಲಾಗುವುದು. ಮಂಡ್ಯ ಜಿಲ್ಲೆಯಲ್ಲಿಯೇ ಮಾದರಿಯಾಗಿ ಕೃಷ್ಣರಾಜಪೇಟೆ ಪಟ್ಟಣವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ. ಪಟ್ಟಣದ ಸಮಗ್ರವಾದ ಅಭಿವೃದ್ಧಿಗಾಗಿ ಇನ್ನೂ 80 ಕೋಟಿ ರೂ ವಿಶೇಷ ಅನುದಾನ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ಕೆ.ಆರ್.ಪೇಟೆ ಪಟ್ಟಣದ ಪುರಸಭೆಗೆ ಹೊಂದಿಕೊAಡಿರುವ ಪಟ್ಟಣದ ದೇವೀರಮ್ಮಣ್ಣಿ ಕೆರೆ ಹಾಗೂ ಹೊಸಹೊಳಲು ಚಿಕ್ಕಕೆರೆಯನ್ನು ಅಭಿವೃದ್ಧಿಪಡಿಸಿ ಬೋಟಿಂಗ್ ಸೌಲಭ್ಯ, ಕೃತಕ ದೀಪಗಳು, ವಿದ್ಯುದ್ಧೀಕರಣ, ಜಾಗಿಂಗ್ ಟ್ರಾಕ್ ಸೇರಿದಂತೆ ಜಲಸಾಹಸ ಕ್ರೀಡೆಗಳಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ತಲಾ 10 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ದಳ, ಕಾಂಗ್ರೆಸ್ , ಬಿಜೆಪಿ ಎಂದು ಗುಂಪುಗಾರಿಕೆ ಮಾಡದೇ ಎಲ್ಲರೂ ಒಂದಾಗಿ ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿ ಮಾಡೋಣ ಎಂದು ಸಚಿವ ನಾರಾಯಣಗೌಡ ಹೇಳಿದರು.
ಇದೇ ಸಂದರ್ಭದಲ್ಲಿ ಘನತ್ಯಾಜ್ಯ ವಸ್ತುಗಳನ್ನು ಬಳಸಿ ಹಸಿಕಸ ಒಣಕಸ ಬಳಸಿಕೊಂಡು ಗೊಬ್ಬರ ಉತ್ಪಾದಿಸುವ ಘಟಕವನ್ನು ಸಚಿವರು ಲೋಕಾರ್ಪಣೆ ಮಾಡಿದರು.

ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ ಪೌರಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿದ ಸಚಿವ ನಾರಾಯಣಗೌಡ ಅವರಿಗೆ ಪುರಸಭೆ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಗೌರಮ್ಮ, ಮುಖ್ಯಾಧಿಕಾರಿ ಕುಮಾರ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಪೌರಸನ್ಮಾನ ನೀಡಿ ಗೌರವಿಸಿದರು.
ಪುರಸಭೆಗೆ ನಾಮ ನಿರ್ದೇಶನಗೊಂಡಿರುವ ಡಾ.ಕೆ.ಎಸ್.ರಾಜೇಶ್, ಹನುಮಂತರಾಜ್, ತಿಬೆಟ್ ಮಹೇಶ್, ಕೆ.ಆರ್.ನೀಲಕಂಠ ಮತ್ತು ಯಶಸ್ವಿನಿ ಮಂಜುನಾಥ್ ಅವರನ್ನು ಸ್ವಾಗತಿಸಿ ಸನ್ಮಾನಿಸಿ ಗೌರವಿಸಲಾಯಿತು..

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಹಾಫ್ ಕಾಮ್ಸ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಮೂಡಾ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಹಿರಿಯ ಸದಸ್ಯರಾದ ಕೆ.ಎಸ್.ಸಂತೋಷ್, ಡಿ.ಪ್ರೇಮಕುಮಾರ್, ರವೀಂದ್ರಬಾಬೂ, ಪ್ರಮೋದ್ ಕುಮಾರ್, ಶುಭ, ಶೋಭಾ, ಇಂದ್ರಾಣಿ, ಸ್ನೇಹಿತರಮೇಶ್, ಸೌಭಾಗ್ಯ ಉಮೇಶ್, ಬಂಡಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ್, ಪರಿಸರ ಎಂಜಿನಿಯರ್ ಅರ್ಚನಾ ಆರಾಧ್ಯ, ಕಂದಾಯಾಧಿಮಾರಿ ರವಿಕುಮಾರ್, ಪೌರಕಾರ್ಮಿಕರ ನೌಕರರ ಸಂಘದ ಅಧ್ಯಕ್ಷ ಚೆಲುವರಾಜು, ಮಾಜಿಅಧ್ಯಕ್ಷ ಮಂಟೆಮAಜು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ.ಕೆ.ಆರ್ ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: