May 4, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ 14.24ಕೋಟಿ ವೆಚ್ಚದ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದ ಆವರಣದಲ್ಲಿ 14.24ಕೋಟಿ ರೂಪಾಯಿಗಳ ವೆಚ್ಚದ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ರಾಜ್ಯದ ಯುವಜನಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ …

ಕ್ರೀಡಾ ಇಲಾಖೆಯ ಸಚಿವನಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದ ಕ್ರೀಡಾ ಇಲಾಖೆಗೆ ಹೊಸ ಸ್ಪರ್ಷ ನೀಡಿದ್ದು ಮುಂಬರುವ ಒಲಂಪಿಕ್ ಕ್ರೀಡೆಗಳಿಗೆ ರಾಜ್ಯದಿಂದ 100 ಜನ ಕ್ರೀಡಾಪಟುಗಳು ಆಯ್ಕೆಗೊಳ್ಳುವ ನಿಟ್ಟಿನಲ್ಲಿ ವಿವಿಧ ಕಂಪನಿಗಳ ಸಹಯೋಗದಲ್ಲಿ ತರಬೇತಿಯನ್ನು ಕೊಡಿಸಿ ಸಜ್ಜುಗೊಳಿಸಲಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿಯೇ ಅತ್ಯಂತ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣವು ಕೆ.ಆರ್.ಪೇಟೆ ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವುದು ಇತಿಹಾಸವಾಗಿದೆ.
ಸುಸಜ್ಜಿತವಾದ ಈಜುಕೊಳ, ಮಲ್ಟಿ ಜಿಮ್, ಲ್ಯಾಬ್ ಹಾಲ್, ವಾಹನಗಳ ಪಾರ್ಕಿಂಗ್ ಏರಿಯಾ, ಟೆನಿಸ್ ಕೋರ್ಟ್ ಸೇರಿದಂತೆ ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕೆ ಅತ್ಯಂತ ಅಗತ್ಯವಾಗಿ ಬೇಕಾಗಿದ್ದ ಒಳಾಂಗಣ ಕ್ರೀಡಾಂಗಣವು ಅಗತ್ಯಕ್ಕೆ ಅನುಗುಣವಾಗಿ ಸುಸಜ್ಜಿತವಾಗಿ ನಿರ್ಮಾಣವಾಗುತ್ತಿದೆ. ಹೆಚ್ಚುವರಿಯಾಗಿ ಅನುದಾನ ಬೇಕಾದರೂ ಒದಗಿಸಿಕೊಡಲು ಬದ್ಧ ಎಂದು ಘೋಷಿಸಿದ ಸಚಿವ ನಾರಾಯಣಗೌಡ..

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1700ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ಇನ್ನಾರು ತಿಂಗಳಲ್ಲಿ ಜನತೆಗೆ ಭವ್ಯ ಸ್ಮಾರಕಗಳಂತೆ ಎದ್ದು ಕಾಣಲಿವೆ..

ವಿಪಕ್ಷಗಳ ನಾಯಕರ ಟೀಕೆ ಟಿಪ್ಪಣಿಗಳಿಗೆ ಜಗ್ಗದೇ ತಾಲೂಕನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಜನತೆ ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಅನುಷ್ಠಾನ ಗೊಳಿಸುವ ಭರವಸೆ ನೀಡಿದ ಸಚಿವ ನಾರಾಯಣಗೌಡ…

ಇದೇ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ಸಚಿವರು ವಿತರಿಸಿದರು..

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುರಸಭೆ ಅಧ್ಯಕ್ಷೆ ಮಹಾದೇವಿ ನಂಜುAಡ ಮಾತನಾಡಿ ತಾಲ್ಲೂಕಿನಲ್ಲಿ ಈ ಹಿಂದೆAದೂ ನಡೆಯದಂತಹ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ತಾಲ್ಲೂಕಿನ ಜನರು ಫಿದಾ ಆಗಿದ್ದಾರೆ..ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಗ್ರಾಮಗಳ ಅಭಿವೃದ್ಧಿಯನ್ನು ಕಣ್ಣಾರೆ ಕಂಡು ತಾಲ್ಲೂಕಿನ ಜನತೆ ಸಚಿವರನ್ನು ಮನಸಾರೆ ಹೃದಯತುಂಬಿ ಅಭಿನಂದಿಸುತ್ತಿದ್ದಾರೆ..ಸಚಿವ ನಾರಾಯಣಗೌಡ ಅವರು ಕೆ.ಆರ್.ಪೇಟೆ ತಾಲ್ಲೂಕಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ಮಹಾದೇವಿ ಸ್ಮರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪ, ಪುರಸಭೆ ಉಪಾಧ್ಯಕ್ಷೆ ಗಾಯತ್ರಿ, ತಾಲೂಕು ಪಂಚಾಯತಿ ಮಾಜಿಅಧ್ಯಕ್ಷ ಬಿ.ಜವರಾಯಿಗೌಡ, ಜಿಲ್ಲಾ ಖಾದಿ ಬೋರ್ಡ್ ಮಾಜಿಅಧ್ಯಕ್ಷ ಡಾ.ಶ್ರೀನಿವಾಸಶೆಟ್ಟಿ, ಮುಖ್ಯಾಧಿಕಾರಿ ಕುಮಾರ್, ಮೂಡಾ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಕ್ರೀಡಾ, ಯುವಜನಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಓಂಪ್ರಕಾಶ್, ಸಚಿವ ನಾರಾಯಣಗೌಡರ ವಿಶೇಷ ಕರ್ತವ್ಯಾಧಿಕಾರಿ ಡಾ.ಪ್ರಕಾಶ್, ಸುರೇಶ್ ಬಾಬೂ, ಆಪ್ತಸಹಾಯಕರಾದ ಕಿಕ್ಕೇರಿಕುಮಾರ್, ಸಾರಂಗಿ ಮಂಜುನಾಥಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ, ನಗರ ಘಟಕದ ಅಧ್ಯಕ್ಷೆ ಚಂದ್ರಕಲಾ, ಭಾರತೀಪುರಪುಟ್ಟಣ್ಣ ಮತ್ತಿತರರು ಉಪಸ್ಥಿತರಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ ,ಮಂಡ್ಯ

error: