May 4, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ 20 ದಿನಗಳಲ್ಲಿ ಒಂದೂವರೆ ಲಕ್ಷ ಆಯುಷ್ಮಾನ್ ಭಾರತ್, ಆರೋಗ್ಯ ರಕ್ಷಾ ಕಾರ್ಡ್ ಮಾಡಿಸುವ ಗುರಿ ನೀಡಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ ತಾಲೂಕಿನಲ್ಲಿ ಮುಂದಿನ 20 ದಿನಗಳೊಳಗೆ ಒಂದೂವರೆ ಲಕ್ಷ ಆಯುಷ್ಮಾನ್ ಕಾರ್ಡ್ ಮಾಡಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.

ಕೆ.ಆರ್. ಪೇಟೆಯ ಹೊರವಲಯದಲ್ಲಿರುವ ಚಿಕ್ಕೋನಹಳ್ಳಿಯ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ತಾಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯು ನಡೆಯಿತು. ಸ್ಥಳೀಯ ಶಾಸಕರಾದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿದ್ಯುತ್, ಗ್ರಾಮ ಪಂಚಾಯತ್, ನರೇಗಾ ಯೋಜನೆ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬAಧಿಸಿದAತೆ ಸಚಿವರು ಪ್ರಗತಿ ಪರಿಶೀಲನೆ ನಡೆಸಿದರು.

ಕೆ.ಆರ್.ಪೇಟೆಯಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿಯಲ್ಲಿ ಭಾರಿ ಕುಂಠಿತವಾಗಿದ್ದು, ನೋಂದಣಿ ಕಾರ್ಯವನ್ನು ಚುರುಕು ಗೊಳಿಸುವಂತೆ ಸೂಚಿಸಿದರು. ಕೆ.ಆರ್.ಪೇಟೆ ತಾಲೂಕಿನಲ್ಲಿ ಸುಮಾರು 70 ಸಾವಿರ ರೇಷನ್ ಕಾರ್ಡ್ಗಳಿದ್ದು, ಈ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ 20 ದಿನಗಳೊಳಗೆ ಆಯುಷ್ಮಾನ್ ಕಾರ್ಡ್ ಮಾಡಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಅಂತಿಮ ಗಡುವು ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿಗಳನ್ನು ಮಾಡಿದ್ದರೂ ಬಿಲ್ ಪಾಸ್ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಸಚಿವ ಡಾ.ನಾರಾಯಣ ಗೌಡ ಅವರು ತರಾಟೆಗೆ ತೆಗೆದುಕೊಂಡರು. ಈ ರೀತಿಯ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಎಚ್ಚರಿಕೆ ನೀಡಿದರು.

ತಾಜ್ಯ ನಿರ್ವಹಣಾ ಘಟಕ ನಿರ್ಮಾಣದಲ್ಲಿ ವಿಳಂಬ ತೋರುತ್ತಿರುವ ಅಧಿಕಾರಿಗಳನ್ನ ಸಚಿವ ಡಾ.ನಾರಾಯಣಗೌಡ ಅವರು ತರಾಟೆಗೆ ತೆಗೆದುಕೊಂಡರು.

ಬಂಡಿಹೊಳೆ, ಸಂತೆಬಾಚಹಳ್ಳಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸದಿರುವುದನ್ನು ಸಚಿವರು ಪ್ರಶ್ನಿಸಿದರು. ಈ ವೇಳೆ ತಾಲೂಕು ಪಂಚಾಯತ್ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಸಬೂಬು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ ನಮ್ಮದು ಯಾವುದೇ ಆಕ್ಷೇಪಣೆ ಇರುವುದಿಲ್ಲ ಎಂದು ಉತ್ತರ ನೀಡಿದರು. ಈ ವೇಳೆ ಕುಂಟು ನೆಪ ಹೇಳುತ್ತಿದ್ದ ತಾಲೂಕು ಪಂಚಾಯತ್ ಅಧಿಕಾರಿಗಳಾದ ಚಂದ್ರಶೇಖರ್ ವಿರುದ್ಧ ಗರಂ ಆದ ಸಚಿವರು, ಇಲ್ಲಸಲ್ಲದ ಸಬೂಬು ಹೇಳದೇ ಸರಿಯಾದ ರೀತಿಯಲ್ಲಿ ಕೆಲಸ ಮಾಡಿ ಎಂದು ಸೂಚಿಸಿದರು.

ಇದರ ಜೊತೆಗೆ ಕೋವಿಡ್ ಸ್ಥಿತಿಗತಿ ಬಗ್ಗೆಯೂ ಸಚಿವರು ಮಾಹಿತಿ ಪಡೆದರು. ಇದುವರೆಗೂ ತಾಲೂಕಿನಲ್ಲಿ ಕೋವಿಡ್ ಮೊದಲ ಡೋಸ್ ವ್ಯಾಕ್ಸಿನ್ 100% ಪೂರ್ಣಗೊಂಡಿದ್ದು, ಎರಡನೇ ಡೋಸ್ 96.20 % ನಷ್ಟು ಆಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದರು. ಕೋರೊನಾ ಸಂಕಷ್ಟದ ಸಂದರ್ಭದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ್ ಅವರನ್ನು ಸಚಿವರು ಸನ್ಮಾನಿಸಿದರು.

ಇದೇ ವೇಳೆ ಕೆಆರ್ ಪೇಟೆಯಲ್ಲಿ ಐದು ಹೊಸ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸುವಂತೆ ಸಚಿವ ಡಾ.ನಾರಾಯಣಗೌಡ ಅವರು ಜಿಲ್ಲಾ ಆರೋಗ್ಯ ಅಧಿಕಾರಿಗೆ ಡಾ.ಧನಂಜಯ ಅವರಿಗೆ ಸೂಚಿಸಿದರು.

ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುತ್ತಿಗೆ ಅವಧಿ ಮುಗಿದಿದ್ದರೂ ರಸ್ತೆ ಕಾಮಗಾರಿ ಮುಗಿಸದೇ ಕೆಲ ಗುತ್ತಿಗೆದಾರರೂ ನಿರ್ಲಕ್ಷ್ಯ ತೋರಿದ್ದಾರೆ. ಅಂತಹ ಗುತ್ತಿಗೆದಾರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸುವಂತೆ ಸಚಿವ ಡಾ.ನಾರಾಯಣಗೌಡ ಸೂಚಿಸಿದರು.

ಅಮೃತ ಗ್ರಾಮ ಪಂಚಾಯತ್ ಯೋಜನೆಯಡಿ ಆಯ್ಕೆಯಾಗಿರುವ 9 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 578 ನಿವೇಶನ ರಹಿತರು, 3336 ವಸತಿ ರಹಿತರಿಗೆ ನಿವೇಶನ ಹಾಗೂ ಮನೆ ನೀಡುವ ಕಾರ್ಯವನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು.

ಇದರ ಜೊತೆಗೆ ಹಗಲಿನ ವೇಳೆ ಬೀದಿ ದೀಪಗಳು ಉರಿಯುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಡಿಜಿಟಲ್ ಟೈಮರ್‌ಗಳನ್ನು ಅಳವಡಿಸುವಂತೆ ಸಚಿವರು ಸೂಚಿಸಿದರು. ಕುಡಿಯುವ ನೀರು ಪೂರೈಕೆ, ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಸಚಿವ ಡಾ.ನಾರಾಯಣಗೌಡ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಅಕ್ರಮ ಎಸಗಿದ್ರೇ ಬಿಡಲ್ಲ, ಭ್ರಷ್ಠ ಅಧಿಕಾರಿಗಳಿಗೆ ಸಚಿವ ಡಾ.ನಾರಾಯಣಗೌಡ ಖಡಕ್ ವಾರ್ನಿಂಗ್
ಜಲಜೀವನ್ ಮಿಷನ್ ಯೋಜನೆಯಡಿ 690 ಕೋಟಿ ಬಿಡುಗಡೆಯಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿಗೊಳಿಸಬೇಕು.
ಏತ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸೂಚಿಸಿದರು. ಕೆ.ಆರ್.ಪೇಟೆ ಕ್ಷೇತ್ರದ ಹಲವು ಯೋಜನೆಗಳಿಗೆ ಸುಮಾರು ಎರಡು ಸಾವಿರ ಕೋಟಿ ಅನುದಾನ ಮಂಜೂರಾಗಿದೆ, ಈ ಅನುದಾನ ಬಳಸಿಕೊಂಡು ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು ಕುರುಬ ರ ವಹಿಸಿಕೊಂಡು ಕೆಲಸ ಮಾಡಿದರೆ ತಾಲೂಕಿಗೂ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು.

ಗ್ರಾಮೀಣ ಕುಡಿಯುವ ನೀರು ವಿಭಾಗದ ಎಇಇ ಲಕ್ಷ್ಮೀಕಾಂತ್ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು..
ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಎಇಇ ಲಕ್ಷ್ಮೀಕಾಂತ್ ಅವರು ಬದ್ಧತೆಯಿಂದ ಕೆಲಸ ಮಾಡದೇ ಭ್ರಷ್ಟಾಚಾರವನ್ನು ಪೋಷಿಸಿ ನಿರಂತರವಾಗಿ ಕಳಪೆ ಕೆಲಸ ಮಾಡಿಸಿ ಸರ್ಕಾರದ ಹಣವನ್ನು ಪೋಲು ಮಾಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಸಚಿವರು ಲಕ್ಷ್ಮೀಕಾಂತ್ ಅವರನ್ನು ತರಾಟೆಗೆ ತೆಗೆದುಕೊಂಡರು.. ಬದ್ಧತೆಯಿಂದ ಕೆಲಸ ಮಾಡುವುದಾದರೆ ಇಲ್ಲಿ ಕೆಲಸ ಮಾಡಿ ಇಲ್ಲದಿದ್ದರೆ ಮರ್ಯಾದೆಯಿಂದ ಜಾಗ ಖಾಲಿ ಮಾಡಿ ನಿವೃತ್ತಿಯ ಅಂಚಿನಲ್ಲಿರುವ ನೀವು ಭ್ರಷ್ಟಾಚಾರವನ್ನು ಪೋಷಿಸುತ್ತಿದ್ದರೆ ಜೈಲಿಗೆ ಹೋಗಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಸಿದರು …

ಕೆಡಿಪಿ ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ರಾಜಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಮಂಡ್ಯ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಧನಂಜಯ, ಸಚಿವ ನಾರಾಯಣಗೌಡರ ಆಪ್ತಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: