May 3, 2024

Bhavana Tv

Its Your Channel

ನೂತನವಾಗಿ ನಿರ್ಮಿಸಿರುವ ನ್ಯಾಯಾಲಯದ ಕಟ್ಟಡ ಉದ್ಘಾಟಿಸಿದ ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ.

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಐದುವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತವಾದ ನ್ಯಾಯಾಲಯದ ನೂತನ ಕಟ್ಟಡವನ್ನು ರಾಜ್ಯದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ಥಿ ಅವರು ಇಂದು ಲೋಕಾರ್ಪಣೆ ಮಾಡಿದರು.

ನೂತನವಾದ ನ್ಯಾಯಾಲಯದ ಕಟ್ಟಡವು ವಕೀಲರು ಮತ್ತು ಕಕ್ಷಿದಾರರಿಗೆ ಅನುಕೂಲವಾಗುವಂತೆ ಸುಸಜ್ಜಿತವಾಗಿ ನಿರ್ಮಾಣವಾಗಿದೆ. ನ್ಯಾಯಾಲಯದ ಕಟ್ಟಡವು ಸುಂದರವಾಗಿ ಮೂಡಿಬಂದಿದೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿಯವರು ಮೊದಲ ಅಂತಸ್ಥಿನ ನ್ಯಾಯಾಲಯ ಕಟ್ಟಡದ ಕಾಮಗಾರಿಗೆ ಆರು ಕೋಟಿ ವೆಚ್ಚದ ಕಾಮಗಾರಿಗೆ ಶಿಲಾನ್ಯಾಸವನ್ನು ನೇರವೇರಿಸಿ ಭೂಮಿ ಪೂಜೆಯನ್ನು ಮಾಡಿದರು. ನಂತರ ನಡೆದ ಸಮಾರಂಭದಲ್ಲಿ ಸ್ಥಳೀಯ ನ್ಯಾಯಾಲಯವು ನೀಡಿದ ಹೃದಯಸ್ಪರ್ಷಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ನ್ಯಾಯಾಲಯಕ್ಕೆ ಇಂದು ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ನ್ಯಾಯಾಲಯದಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಕೀಲರು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದ ಅವರು ಇಂದು ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆಯಲ್ಲಿ ನ್ಯಾಯಾಲಯದ ಕಟ್ಟಡಗಳು ಉದ್ಘಾಟನೆಯಾಗಿವೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅತಿಶೀಘ್ರದಲ್ಲಿಯೇ ಸುಸಜ್ಜಿತವಾದ ಜಿಲ್ಲಾ ಸತ್ರ ನ್ಯಾಯಾಲಯವು ಆರಂಭವಾಗಲಿದೆ ಎಂದು ಭರವಸೆ ನೀಡಿದರು .

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಮಂಡ್ಯ ಜಿಲ್ಲಾ ಆಡಳಿತ ನ್ಯಾಯಾಧೀಶರಾದ ಪಿ.ಎಸ್. ದಿನೇಶ್‌ಕುಮಾರ್ ಮಾತನಾಡಿ ಕೆ.ಆರ್.ಪೇಟೆಯಲ್ಲಿ ಅತ್ಯುತ್ತಮವಾದ ವಾತಾವರಣದಲ್ಲಿ ನ್ಯಾಯಾಲಯದ ಸುಸಜ್ಜಿತವಾದ ಕಟ್ಟಡವು ನಿರ್ಮಾಣವಾಗಿದೆ. ಪ್ರಸ್ತುತ ಶಿಲಾನ್ಯಾಸ ಮಾಡಿರುವ ಮೊದಲ ಅಂತಸ್ಥಿನ ನ್ಯಾಯಾಲಯದ ಕಟ್ಟಡವು ಇನ್ನೊಂದು ವರ್ಷದಲ್ಲಿ ಆರಂಭವಾಗಲಿದೆಯಲ್ಲದೇ ಕೆ.ಆರ್.ಪೇಟೆ ತಾಲೂಕಿಗೆ ಹೆಚ್ಚುವರಿಯಾಗಿ ಜಿಲ್ಲಾ ಸತ್ರ ನ್ಯಾಯಾಲಯವು ಮಂಜೂರಾಗಲಿದೆ ಎಂದು ತಿಳಿಸಿದ ಅವರು ನೂತನ ಕಟ್ಟಡದ ನಿರ್ಮಾಣದ ನೇತೃತ್ವ ವಹಿಸಿದ ನ್ಯಾಯಾಧೀಶರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಮಾತನಾಡಿ ಮಂಡ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಅತಿಹೆಚ್ಚಾಗಿ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಉಚ್ಛನ್ಯಾಯಾಲಯವು ಹೆಚ್ಚುವರಿಯಾಗಿ ಎರಡು ಶೀಘ್ರ ವಿಲೇವಾರಿ ಸತ್ರ ನ್ಯಾಯಾಲಯವನ್ನು ಮಂಜೂರುಮಾಡಿದೆ. ಆದ್ದರಿಂದ ವಕೀಲ ಬಾಂಧವರು ಇದನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಪ್ರಕರಣವನ್ನು ಇತ್ಯರ್ಥ ಪಡಿಸಲು ಕ್ರಮವಹಿಸಿ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಮಾತನಾಡಿ, ನ್ಯಾಯವನ್ನು ಅರಸಿ ನ್ಯಾಯಾಲಯಕ್ಕೆ ಬರುವ ಬಡ ಕಕ್ಷಿದಾರರಿಗೆ ನ್ಯಾಯಾಲಯಗಳೇ ದೇವಾಲಯಗಳಾಗಿವೆ. ನ್ಯಾಯಾಲಯಗಳು ನೊಂದಜನರಿಗೆ ನ್ಯಾಯವನ್ನು ನೀಡುವ ಕಾರ್ಯವನ್ನು ಬದ್ಧತೆಯಿಂದ ಮಾಡುತ್ತಿರುವುದರಿಂದ ಇಂದಿಗೂ ನ್ಯಾಯಾಲಯಗಳ ಮೇಲೆ ನಮ್ಮ ಸಮಾಜ ಹಾಗೂ ಜನರು ಇಟ್ಟಿರುವ ನಂಬಿಕೆಯು ಜೀವಂತವಾಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮನು ತಿಳಿಸಿದಂತೆ ನ್ಯಾಯಾಲಯಗಳು ತಮ್ಮ ಪಾಡಿಗೆ ತಾವು ನ್ಯಾಯವನ್ನು ನೀಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿರುವುದರಿಂದ ನ್ಯಾಯಾಲಯದ ಮೇಲಿನ ವಿಶ್ವಾಸವು ಇನ್ನೂ ಹೆಚ್ಚಾಗುತ್ತಿದೆ. ಕೆ.ಆರ್.ಪೇಟೆ ನ್ಯಾಯಾಲಯದ ಕಟ್ಟಡದ ಉದ್ಘಾಟನೆಗೆ ರಾಜ್ಯದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೇ ಆಗಮಿಸಿ ಉದ್ಘಾಟನೆ ಮಾಡಿರುವುದು ತಾಲ್ಲೂಕಿನ ಜನತೆಗೆ ಸಂತೋಷ ತಂದಿದೆ. ಕ್ಷೇತ್ರದ ಜನತೆಯ ಪ್ರತಿನಿಧಿಯಾಗಿ ನಾನು ಮುಖ್ಯ ನ್ಯಾಯಾಧೀಶರು ಹಾಗೂ ಇತರೆ ನ್ಯಾಯಾಧೀಶರಿಗೆ ಕೃತಜ್ಞತೆಗಳನ್ನು ಸಮರ್ಪಿಸುತ್ತೇನೆ ಎಂದು ತಿಳಿಸಿದರು .

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸದೆ ಸುಮಲತಾ ಮಾತನಾಡಿ ಇಂದು ನನ್ನ ಮತ ಕ್ಷೇತ್ರದ ವ್ಯಾಪ್ತಿಯ ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆಯಲ್ಲಿ ಭವ್ಯವಾದ ನ್ಯಾಯಾಲಯದ ಕಟ್ಟಡಗಳು ಮತ್ತು ಗ್ರಂಥಾಲಯಗಳು ಉದ್ಘಾಟನೆಯಾಗಿವೆ. ಮಂಡ್ಯ ನಗರದಲ್ಲಿಯೂ ಸುಸಜ್ಜಿತವಾದ ಭವ್ಯ ನ್ಯಾಯಾಲಯದ ಕಟ್ಟಡ ಶೀಘ್ರವಾಗಿ ನಿರ್ಮಾಣವಾಗಲಿದೆ. ನ್ಯಾಯಾಲಯದ ನಿರ್ಮಾಣಕ್ಕೆ ಬೇಕಾದ ಸೂಕ್ತ ಜಾಗವನ್ನು ರಾಜ್ಯ ಸರ್ಕಾರದಿಂದ ಮಂಜೂರು ಮಾಡಿಸಿಕೊಡಲಾಗಿದ್ದು, ಕಟ್ಟಡದ ನಿರ್ಮಾಣಕ್ಕೆ ಬೇಕಾದ ಅಗತ್ಯವಾದ ಅನುಧಾನವನ್ನು ಸರ್ಕಾರ ನೀಡಿದೆ. ಮುಖ್ಯ ನ್ಯಾಯಮೂರ್ತಿಗಳು ತಮ್ಮ ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆಯೂ ಬಿಡುವು ಮಾಡಿಕೊಂಡು ಬಂದು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ನನಗೆ ಹೃದಯತುಂಬಿ ಬಂದಿದೆ ಎಂದು ಸುಮಲತಾ ಭಾವುಕರಾದರು.

ಕಾರ್ಯಕ್ರಮದಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಇ.ಎಸ್.ಇಂದ್ರೇಶ್, ಸಿದ್ದಯ್ಯ ರಾಚಯ್ಯ, ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ, ರಾಜ್ಯ ವಕೀಲರ ಸಂಘದ ನಿರ್ದೇಶಕ ಎಚ್.ಎಲ್.ವಿಶಾಲ್‌ರಘು, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಶಿವಯೋಗಿ ಹಿರೇಮಠ್, ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ, ನಳಿನಿಕುಮಾರಿ, ಕೆ.ಆರ್.ಪೇಟೆ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸಮೀರ್.ಪಿ.ನಂಧ್ಯಾಲ್, ಅಪರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ತುಳಸಪ್ಪ ನಾಯಕ್, ಜೆ.ಎಂ.ಎಫ್.ಸಿ.ನ್ಯಾಯಾಲಯದ ನ್ಯಾಯಧೀಶೆ ಪೂಜಾಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಪ್ರಸನ್ನ ಕುಮಾರ್, ಕಾರ್ಯದರ್ಶಿ ಡಿ.ಆರ್.ಮೋಹನ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಆರ್.ಗಣೇಶ್, ಕಾರ್ಯಪಾಲಕ ಇಂಜಿನಿಯರ್ ರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ, ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಸೇರಿದಂತೆ ಪಕ್ಕದ ತಾಲ್ಲೂಕುಗಳ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೊಲೀಸ್ ಬ್ಯಾಂಡ್‌ನಿoದ ರಾಷ್ಟ್ರ ಗೀತೆ :
ಕೆ.ಆರ್.ಪೇಟೆ ಪಟ್ಟಣಕ್ಕೆ ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಾಮೂರ್ತಿಗಳಾದ ರಿತುರಾಜ್ ಅವಸ್ಥಿ ಅವರು ಆಗಮಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಬ್ಯಾಂಡ್ ನ್ಯಾಯಮೂರ್ತಿಗಳಿಗೆ ಗೌರವ ವಂದನೆ ನೀಡಿದ್ದಲ್ಲದೇ ರಾಷ್ಟç ಗೀತೆಯನ್ನು ನುಡಿಸಿದ್ದು, ನೆರೆದಿದ್ದ ವಕೀಲರು ಮತ್ತು ಸಾರ್ವಜನಿಕರಲ್ಲಿ ರಾಷ್ಟç ಪ್ರೇಮವನ್ನು ಹೆಚ್ಚಿಸುವ ದಿಕ್ಕಿನಲ್ಲಿ ಜಾಗೃತಿ ಮೂಡಿಸಿದ್ದು ವಿಶೇಷ ವಾಗಿತ್ತು.

ನೂತನ ನ್ಯಾಯಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರುಗಳು ಮತ್ತು ಸಿಬ್ಬಂದಿಗಳು ಶ್ರಮಿಸಿದ ಹಿನ್ನಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ಕೆ.ಆರ್.ಪೇಟೆಯ ನ್ಯಾಯಾಧೀಶರು ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರನ್ನು ಸನ್ಮಾನಿಸಿ ಗೌರವಿಸಿ ಅಭಿನಂಧಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಸ್.ಸಿ.ವಿಜಯ್‌ಕುಮಾರ್, ಜಿ.ಆರ್.ಅನಂತರಾಮಯ್ಯ, ಬಿ.ಎಲ್.ದೇವರಾಜು, ಎಸ್.ಡಿ.ಸರೋಜಮ್ಮ, ಎನ್.ಆರ್.ರವಿಶಂಕರ್, ಬಿ.ಜಿ.ಗಣೇಶ್, ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ರವಿ, ಪ್ರವೀಣ್ ಕುಮಾರ್, ಎಸ್.ಆರ್. ನವೀನಕುಮಾರ್, ಪುರ ಮಂಜುನಾಥ್, ಎಂ.ಎಲ್.ಸುರೇಶ್ ನೇತೃತ್ವದಲ್ಲಿ ನೂರಾರು ವಕೀಲರು ಭಾಗವಹಿಸಿದ್ದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಇದೇ ಮೊದಲ ಭಾರಿಗೆ ಕೆ.ಆರ್.ಪೇಟೆಗೆ ಆಗಮಿಸಿದ ರಾಜ್ಯದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಆತ್ಮೀಯವಾಗಿ ಅಭಿನಂದಿಸಿ ಬರಮಾಡಿಕೊಂಡರು. ತಾಲ್ಲೂಕು ಅಬಕಾರಿ ನಿರೀಕ್ಷಕಿ ಸಿ.ಪಿಭವ್ಯ ಮತ್ತು ಸಿಬ್ಬಂದಿಗಳು ಸಚಿವ ಗೋಪಾಲಯ್ಯ ಅವರಿಗೆ ಹೂಗುಚ್ಛ ನೀಡಿ ಅಭಿನಂಧಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: