May 17, 2024

Bhavana Tv

Its Your Channel

ಫೆ.28 ರಂದು ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ

ಕೆ.ಆರ್.ಪೇಟೆ :- *ಸರ್ಕಾರದ ವಿವಿಧ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಲು ಸಚಿವ ಡಾ.ನಾರಾಯಣಗೌಡ ಮನವಿ

*ಫೆಬ್ರವರಿ 28 ರಂದು ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ.2 ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ .

ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣಗೌಡ ಪಾಲ್ಗೊಂಡು ವಿವಿಧ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದರು.

ಆರ್‌ಟಿಸಿ ತಿದ್ದುಪಡಿ, ಉದ್ಯೋಗ ಖಾತ್ರಿ ಯೋಜನೆ, ಮತದಾನದ ಗುರುತಿನ ಚೀಟಿ, ಭಾಗ್ಯಲಕ್ಷ್ಮಿ ಬಾಂಡ್ , ವೃದ್ದಾಪ್ಯ ವೇತನ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಒಂದು ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಆದೇಶ ಪ್ರತಿ ವಿತರಿಸಿದರು.

ಇದೇ ವೇಳೆ ಪೋಷಣ್ ಅಭಿಯಾನದಡಿ ಮೂವರು ಬಾಣಂತಿಯರಿಗೆ ಸೀಮಂತ ನೆರವೇರಿಸಿ, ಬಾಗಿನ ನೀಡಿ ಶುಭ ಹಾರೈಸಲಾಯಿತು.

ಇದು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವ ನಾಲ್ಕನೇ ಕಾರ್ಯಕ್ರಮ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿನ್ನೆಯಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಬಂದು ಜನರ ಸಮಸ್ಯೆಗಳು ಆಲಿಸಿ, ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ಸ್ಪಂದಿಸಲು ಅನುಕೂಲ ಆಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಪ್ರತಿಯೊಬ್ಬರು ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳಬೇಕು. ಇದರಿಂದ ಯಾವುದೇ ಆಸ್ಪತ್ರೆಗೆ ಹೋಗಿ ಐದ ಲಕ್ಷದವರೆಗೂ ಉಚಿತ ಚಿಕಿತ್ಸೆ ಪಡೆಯಬಹುದು. ತಾಲೂಕಿನಾದ್ಯಂತ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಡಲಾಗುತ್ತಿದ್ದು, ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಜನರಿಗೆ ಕರೆ ನೀಡಿದರು.

ಜನ್ಮಭೂಮಿಯ ಋಣ ತೀರಿಸಿ ತಾಲೂಕಿನ ಜನತೆಯ ಸೇವೆ ಮಾಡ ಬೇಕು. ದೇಹದಲ್ಲಿ ಕೊನೆಯ ಉಸಿರಿರೋವರೆಗೂ ಜನ್ಮಭೂಮಿಯ ಸೇವೆ ಮಾಡಬೇಕು. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ ಎಂದು ಘೋಷಿಸಿದ ಸಚಿವ ನಾರಾಯಣಗೌಡ, ಜಲಜೀವನ್ ಮಿಷನ್ ಅಡಿಯಲ್ಲಿ 670ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯವ ನೀರು ಪೂರೈಸಲಾಗುತ್ತದೆ. ಗೂಡೆಹೊಸಳ್ಳಿ ಏತನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಸಂತೇಬಾಚಹಳ್ಳಿ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸಲು 212 ಕೋಟಿ ಬಿಡುಗಡೆ ಮಾಡಲಾಗಿದೆ. ಇದುವರೆಗೂ ಕೃಷ್ಣರಾಜಪೇಟೆ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿಗೂ ಹೆಚ್ಚು ಅನುದಾನ ಬಂದಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಹರಪುರ ಗ್ರಾ.ಪಂ.ಅಧ್ಯಕ್ಷೆ ಆಶಾ ಅವರು ವಹಿಸಿದ್ದರು.
ಜಿಲ್ಲಾಧಿಕಾರಿ ಎಸ್ ಅಶ್ವಥಿ, ಜಿಲ್ಲಾ ಪಂಚಾಯತ್ ಸಿಇಒ ದಿವ್ಯಪ್ರಭು, ಉಪ ವಿಭಾಗಾಧಿಕಾರಿ ಶಿವಾನಂದ ಮೂರ್ತಿ, ತಹಶಿಲ್ದಾರ್ ಎಂ.ವಿ. ರೂಪ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಸಂದೀಪ್, ಉಪ ತಹಸೀಲ್ದಾರ್ ಲಕ್ಷ್ಮಿಕಾಂತ್, ರಾಜಶ್ವನಿರೀಕ್ಷಕಿ ಚಂದ್ರಕಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಪಿ.ಡಿ.ಒ ಸಾಹಿದಾ ಅಕ್ತರ್, ಜಿ.ಪಂ.ಮಾಜಿ ಉಪಾಧ್ಯಕ್ಷರಾದ ಎಸ್ ಅಂಬರೀಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಅಂಜನಿಗೌಡ, ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಗ್ರಾ.ಪಂ.ಮಾಜಿ ಅಧ್ಯಕ್ಷ ಬೊಮ್ಮೇನಹಳ್ಳಿ ಹರ್ಷ, ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ

error: