May 13, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದಲ್ಲಿ ನಾಳೆ ನಡೆಯಲಿರುವ ಬೃಹತ್ ಆರೋಗ್ಯ ಮೇಳದ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ

ಕೆ.ಆರ್.ಪೇಟೆ: 20 ಸಾವಿರ ಜನರ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಪರೀಕ್ಷೆಗೆ ಸಜ್ಜಾಗಿರುವ ನಾಡಿನ ವಿವಿಧ ಆಸ್ಪತ್ರೆಗಳ 800 ಕ್ಕೂ ಹೆಚ್ಚಿನ ತಜ್ಞ ವೈದ್ಯರ ತಂಡ. ಆರೋಗ್ಯ ಮೇಳದಲ್ಲಿ ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಅಶ್ವಥಿ ಸ್ಪಷ್ಠ ಸೂಚನೆ ನೀಡಿದರು
ಕೆ.ಆರ್.ಪೇಟೆ ಪಟ್ಟಣದಲ್ಲಿ ಮಂಡ್ಯ ಜಿಲ್ಲಾಡಳಿತವು ಬೃಹತ್ ಆರೋಗ್ಯ ಮೇಳವನ್ನು ಮಾರ್ಚ್ 5ರ ಶನಿವಾರ ಆಯೋಜಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವು ಆರೋಗ್ಯ ಮೇಳವು ನಡೆಯಲಿರುವ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಆವರಣಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು …

ಕೆ.ಆರ್.ಪೇಟೆ ತಾಲ್ಲೂಕಿನ ಜನತೆಯ ಆರೋಗ್ಯ ಸಂವರ್ಧನೆಗಾಗಿ ಮಂಡ್ಯ ಜಿಲ್ಲಾಡಳಿತವು ಸಚಿವ ನಾರಾಯಣಗೌಡರ ಮನವಿಯ ಮೇರೆಗೆ 15ರಿಂದ 20ಸಾವಿರ ಜನರ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಚಿಕಿತ್ಸೆ ಮತ್ತು ಅಗತ್ಯ ಔಷಧಗಳ ವಿತರಣೆ ಆಯುಷ್ ಆರೋಗ್ಯ ಔಷಧಗಳ ಕಿಟ್ ವಿತರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಆರೋಗ್ಯ ಸಚಿವರಾದ ಡಾ.ಸುಧಾಕರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ನಾರಾಯಣಗೌಡ ಆವರು ಆರೋಗ್ಯ ಮೇಳದಲ್ಲಿ ಭಾಗವಹಿಸುತ್ತಿದ್ದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಸ್ವಾಮೀಜಿಗಳಾದ ಡಾ.ನಿರ್ಮಲಾನಂದನಾಥಸ್ವಾಮೀಜಿ ಹಾಗೂ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಗಳು ಆರೋಗ್ಯ ಮೇಳದ ದಿವ್ಯಸಾನಿಧ್ಯ ವಹಿಸಲಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಆಸ್ಪತ್ರೆ, ನಾರಾಯಣ ನೇತ್ರಾಲಯ, ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಗ್ರಂಥಿ ಆಸ್ಪತ್ರೆ, ಮಂಡ್ಯ ಮಿಮ್ಸ್ ವೈದ್ಯಕೀಯ ಆಸ್ಪತ್ರೆ, ನಾರಾಯಣ ಹೃದಯಾಲಯ ಸೇರಿದಂತೆ ಪ್ರತಿಷ್ಠಿತ ಆಸ್ಪತ್ರೆಗಳ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂಧಿಗಳು ಕೆ.ಆರ್.ಪೇಟೆಗೆ ಆಗಮಿಸಿ ವೈದ್ಯಕೀಯ ತಪಾಸಣೆ ನಡೆಸಿ ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆಯನ್ನೂ ಉಚಿತವಾಗಿ ಮಾಡಿಕೊಡಲಿದ್ದಾರೆ. ಸಚಿವ ನಾರಾಯಣಗೌಡ ಅವರು ಆರೋಗ್ಯ ರಕ್ಷಾ ಸ್ವಾಸ್ಥ್ಯ ಯೋಜನೆಯ ಕಾರ್ಡುಗಳನ್ನು ಉಚಿತವಾಗಿ ಮಾಡಿಸಿಕೊಡುತ್ತಿದ್ದು ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಫೋನ್ ನಂಬರಿನೊAದಿಗೆ ಆರೋಗ್ಯ ಮೇಳಕ್ಕೆ ಆಗಮಿಸಿ ಉಚಿತವಾಗಿ ದೊರೆಯುತ್ತಿರುವ ಆರೋಗ್ಯ ಸೇವೆಯನ್ನು ಪಡೆದುಕೊಂಡು ನೂರ್ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅಶ್ವಥಿ ಹೇಳಿದರು..

ಈ ಸಂದರ್ಭದಲ್ಲಿ ಸಚಿವ ಡಾ.ನಾರಾಯಣಗೌಡರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಪಂಚಾಯತಿ ಸಿಇಓ ದಿವ್ಯಪ್ರಭು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಧನಂಜಯ, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಅಧ್ಯಕ್ಷೆ ಮಹಾದೇವಿನಂಜುAಡ, ಸೆಸ್ಕ್ ಎಇಇ ಕೃಷ್ಣ, ಸಹಾಯಕ ಎಂಜಿನಿಯರ್ ಮನುಕುಮಾರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಜಿಲ್ಲಾ ನೇಕಾರ ಪ್ರಕೋಷ್ಠ ಅಧ್ಯಕ್ಷ ಬಿಗ್ ಬಾಸ್ ಮೋಹನ್, ಮುಖಂಡರಾದ ಕೆ.ಶ್ರೀನಿವಾಸ್, ಕಾರಿಗನಹಳ್ಳಿ ಕುಮಾರ್, ಶೀಳನೆರೆ ಅಂಬರೀಶ್, ಸಚಿವರ ವಿಷೇಶಾಧಿಕಾರಿ ಡಾ.ಪ್ರಕಾಶ್, ಆಪ್ತಸಹಾಯಕರಾದ ಸಾರಂಗಿ ಮಂಜುನಾಥಗೌಡ, ಕಿಕ್ಕೇರಿ ಕುಮಾರ್, ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ.ಕೆ.ಆರ್.ದಿನೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ, ಮಂಡ್ಯ.

error: